ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಆಭಾ’ ಮಾಹಿತಿ ಡಿಜಿಟಲೀಕರಣ: ‘ಕ್ರಿಮ್ಸ್’ ರಾಜ್ಯಕ್ಕೇ ಪ್ರಥಮ

Last Updated 26 ನವೆಂಬರ್ 2022, 16:07 IST
ಅಕ್ಷರ ಗಾತ್ರ

ಕಾರವಾರ: ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ‘ಆಯುಷ್ಮಾನ್ ಭಾರತ’ದ (ಆಭಾ) ದಾಖಲೆಗಳನ್ನು ಡಿಜಿಟಲ್ ವ್ಯವಸ್ಥೆಗೆ ಅಳವಡಿಸುವ ಕಾರ್ಯದಲ್ಲಿ, ಇಲ್ಲಿನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯು (ಕ್ರಿಮ್ಸ್) ರಾಜ್ಯಕ್ಕೇ ಮೊದಲ ಸ್ಥಾನ ಪಡೆದುಕೊಂಡಿದೆ. ಅಲ್ಲದೇ ರಾಷ್ಟ್ರಮಟ್ಟದಲ್ಲಿ ಆರನೇ ಸ್ಥಾನದ ಸಾಧನೆ ಮಾಡಿದೆ.

‘ಪ್ರಜಾವಾಣಿ’ ಜೊತೆ ಸಂತಸ ಹಂಚಿಕೊಂಡ ಸಂಸ್ಥೆಯ ನಿರ್ದೇಶಕ ಡಾ.ಗಜಾನನ ನಾಯಕ, ‘ಕ್ರಿಮ್ಸ್’ನಲ್ಲಿ ನ.26ರವರೆಗೆ ಒಂದು ವರ್ಷದ ಅವಧಿಯಲ್ಲಿ ಒಟ್ಟು 15,787 (ಶೇ 82.40ರಷ್ಟು) ಆಯುಷ್ಮಾನ್ ಭಾರತ ಚೀಟಿಗಳನ್ನು ಡಿಜಿಟಲ್ ವ್ಯವಸ್ಥೆಗೆ ಅಳವಡಿಸಲಾಗಿದೆ. ಈ ಪ್ರಗತಿಯಿಂದ ಉತ್ತರ ಕನ್ನಡ ಜಿಲ್ಲೆಗೆ ಸಹಾಯವಾಗಲಿದೆ. ನಮ್ಮ ಸಂಸ್ಥೆಯ ಸಿಬ್ಬಂದಿ, ವೈದ್ಯರು, ವಿಶೇಷವಾಗಿ ಕಚೇರಿಯ ಸಿಬ್ಬಂದಿಯ ಪರಿಶ್ರಮದಿಂದ ಇದು ಸಾಧ್ಯವಾಗಿದೆ’ ಎಂದರು.

ಈ ಕಾರ್ಯದಲ್ಲಿ ಕರ್ನಾಟಕವು ದೇಶದಲ್ಲೇ ಎರಡನೇ ಸ್ಥಾನದಲ್ಲಿದೆ. ಒಟ್ಟು 4.58 ಲಕ್ಷ ಕಾರ್ಡ್‌ಗಳ ಮಾಹಿತಿಯನ್ನು ತಂತ್ರಾಂಶದಲ್ಲಿ ಅಳವಡಿಸಲಾಗಿದೆ. ಇದರಲ್ಲಿ ಪ್ರಗತಿ ಸಾಧಿಸಿದ ದೇಶದ ಪ್ರಮುಖ 20 ಸರ್ಕಾರಿ ಆಸ್ಪತ್ರೆಗಳ ಪೈಕಿ 16 ಕರ್ನಾಟಕದಲ್ಲಿವೆ. ಸರ್ಕಾರಿ ವೈದ್ಯಕೀಯ ಕಾಲೇಜುಗಳ ಪೈಕಿ 30 ಸಂಸ್ಥೆಗಳು ನಮ್ಮ ರಾಜ್ಯದಲ್ಲೇ ಇವೆ ಎಂದು ಕರ್ನಾಟಕ ಆರೋಗ್ಯ ಇಲಾಖೆಯು ಶನಿವಾರ ಟ್ವೀಟ್ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT