ಕಾರವಾರ: ಜಿಲ್ಲೆಯ ಮಲೆನಾಡು ಭಾಗದಲ್ಲಿ ಈಚೆಗೆ ಅತಿ ಕೆಳಗೆ ವಿಮಾನ ಹಾರಾಟ ನಡೆಸಿದ್ದ ಘಟನೆಗೆ ಸಂಬಂಧಿಸಿ ಹಲವು ದಿನ ಕಳೆದ ಬಳಿಕ ಜಿಲ್ಲಾಡಳಿತ ಸ್ಪಷ್ಟನೆ ನೀಡಿದೆ.

‘ಖನಿಜ ಅನ್ವೇಷಣೆ ಪ್ರಕ್ರಿಯೆಯ ಭಾಗವಾಗಿ ಭಾರತೀಯ ಭೂವೈಜ್ಞಾನಿಕ ಸರ್ವೆಕ್ಷಣಾ ಸಂಸ್ಥೆ ನಡೆಸುತ್ತಿರುವ ಸಮೀಕ್ಷೆಗೆ ವಿಮಾನ ಹಾರಾಟ ನಡೆಸಿದೆ. ಜನರು ವದಂತಿಗಳಿಗೆ ಕಿವಿಡಗೊಡಬಾರದು. ಯಾವುದೇ ಆತಂಕಪಡಬಾರದು’ ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ತಿಳಿಸಿದ್ದಾರೆ.

‘ರಾಷ್ಟ್ರೀಯ ವಾಯು ಭೂಭೌತ ನಕ್ಷೆ ಕಾರ್ಯಕ್ರಮದ ಭಾಗವಾಗಿ ಕರ್ನಾಟಕ, ಮಹಾರಾಷ್ಟ್ರ, ಗೋವಾ ರಾಜ್ಯದಲ್ಲಿ ಸಮೀಕ್ಷೆ ಕೈಗೊಳ್ಳುತ್ತಿದ್ದು, ಜಿಲ್ಲೆಯಾದ್ಯಂತ ಸಮೀಕ್ಷೆಗೆ ವೈಜ್ಞಾನಿಕ ಉಪಕರಣಗಳನ್ನು ಅಳವಡಿಸಿಕೊಂಡ ವಿಮಾನಗಳು ಕೆಳಹಂತದಲ್ಲಿ ಹಾರಾಟ ನಡೆಸಿವೆ. ಸಮೀಕ್ಷೆಯಿಂದ ಪಡೆದ ಮಾಹಿತಿಯನ್ನು ಖನಿಜಾನ್ವೇಷಣೆಯಲ್ಲಿ ತೊಡಗಿರುವ ಸರ್ಕಾರಿ, ಖಾಸಗಿ ಸಂಸ್ಥೆಗಳು ಹಾಗೂ ಸಾರ್ವಜನಿಕರಿಗೆ ಲಭ್ಯವಾಗಿಸಲಾಗುತ್ತದೆ’ ಎಂದು ಮಾಹಿತಿ ನೀಡಿದ್ದಾರೆ.

ವಾರದ ಹಿಂದೆ ಶಿರಸಿ, ಸಿದ್ದಾಪುರ ತಾಲ್ಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಕೆಳ ಹಂತದಲ್ಲಿ ವಿಮಾನ ಹಾರಾಟ ನಡೆಸಿತ್ತು. ಬೇಡ್ತಿ–ವರದಾ, ಅಘನಾಶಿನಿ–ವೇದಾವತಿ ನದಿ ತಿರುವು ಯೋಜನೆಗೆ ಸಮೀಕ್ಷೆ ಕೈಗೊಳ್ಳುತ್ತಿರುವ ಬಗ್ಗೆ ವದಂತಿಗಳು ಹರಡಿದ್ದವು. ಇದರಿಂದ ಜನ ಆತಂಕಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.