ಕಾರವಾರ: ‘ಮಳೆಗಾಲದಲ್ಲಿ ಎದುರಾಗುವ ಪ್ರವಾಹ ಸ್ಥಿತಿ, ಪ್ರಾಕೃತಿಕ ವಿಕೋಪಗಳ ವೇಳೆ ಜನರಿಗೆ ನೆರವಾಗಲು ಶೌರ್ಯ ಘಟಕದ ಸದಸ್ಯರು ಹಿಂಜರಿಯಬಾರದು’ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ನ ಶೌರ್ಯ ವಿಪತ್ತು ನಿರ್ವಹಣಾ ಕಾರ್ಯಕ್ರಮದ ಯೋಜನಾಧಿಕಾರಿ ಜೈವಂತ್ ಪಟಗಾರ ಹೇಳಿದರು.

ಇಲ್ಲಿನ ಟ್ರಸ್ಟ್ ಕಚೇರಿಯಲ್ಲಿ ಈಚೆಗೆ ತಾಲ್ಲೂಕಿನ ಶೌರ್ಯ ಧರ್ಮಸ್ಥಳ ವಿಪತ್ತು ನಿರ್ವಹಣಾ ಸಮಿತಿಯ ವಿಶೇಷ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.

‘ಕಳೆದ 5 ವರ್ಷಗಳಿಂದ ಕಾರವಾರ ತಾಲ್ಲೂಕಿನಲ್ಲಿ ಶೌರ್ಯ ಘಟಕ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ಮಳೆಗಾಲದ ವೇಳೆ ಅನಾಹುತಗಳು ಸಂಭವಿಸುವುದು ಹೆಚ್ಚು. ಈ ಬಗ್ಗೆ ಸ್ವಯಂಸೇವಕರು ಮುಂಜಾಗ್ರತೆ ಕ್ರಮವಹಿಸಬೇಕು’ ಎಂದರು.

ಕರಾವಳಿ ಪ್ರಾದೇಶಿಕ ವಿಭಾಗದ ಜನಜಾಗೃತಿ ಯೋಜನಾಧಿಕಾರಿ ಗಣೇಶ್ ಆಚಾರ್ಯ, ‘ಘಟಕಗಳ ಬಲವರ್ಧನೆಗೆ ಪೂರಕವಾಗಿ ಎಲ್ಲರಲ್ಲಿಯೂ ಸೇವಾ ಮನೋ ಭಾವದೊಂದಿಗೆ ಸಮಾಜಮುಖಿ ಕಾಳಜಿ ಇರಬೇಕು’ ಎಂದರು.

ತಾಲ್ಲೂಕು ಯೋಜನಾಧಿಕಾರಿ ಶಿವರಾಜ್ ವಿ.ಆಚಾರ್ಯ ಶೌರ್ಯ ಸಮಿತಿಯ ಕಾರ್ಯವೈಖರಿ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು. ಉಡುಪಿ ಪ್ರಾದೇಶಿಕ ವಿಭಾಗದ ಜನಜಾಗೃತಿ ಮೇಲ್ವಿಚಾರಕ ಉದಯ್, ರಾಮ ಸೋಮ ಗೌಡ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-20-619544246

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.