ಕಾರವಾರ: ಔಷಧಗಳ ಆನ್ಲೈನ್ ಮಾರಾಟ ಸ್ಥಗಿತಗೊಳಿಸಬೇಕು ಎಂಬುದೂ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಅಖಿಲ ಭಾರತ ಔಷಧ ವ್ಯಾಪಾರಿಗಳ ಸಂಘದ ಕರೆಯ ಮೇರೆಗೆ ಜಿಲ್ಲೆಯಲ್ಲಿ ಬುಧವಾರ ಔಷಧ ಅಂಗಡಿ ಬಂದ್ ಮಾಡಿ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ.

‘ಮುಷ್ಕರದ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿರುವ 450ಕ್ಕೂ ಹೆಚ್ಚು ಔಷಧ ಮಳಿಗೆಗಳು ದಿನವಿಡೀ ಬಾಗಿಲು ಮುಚ್ಚಲಿವೆ. ಔಷಧ ವರ್ತಕರ ಬೇಡಿಕೆಗೆ ಸರ್ಕಾರ ಸ್ಪಂದಿಸಬೇಕು ಎಂದು ಒತ್ತಾಯಿಸಿ ಈ ಹೋರಾಟ ನಡೆಸಲಾಗುತ್ತಿದೆ. ಮುಷ್ಕರಿಂದ ಜನಸಾಮಾನ್ಯರಿಗೆ ಸಮಸ್ಯೆ ಉಂಟಾಗಬಹುದು. ಆದರೆ, ವ್ಯಾಪಾರಿಗಳ ಹಿತದೃಷ್ಟಿಯಿಂದ ಹೋರಾಟ ಅನಿವಾರ್ಯವಾಗಿದೆ’ ಎಂದು ಅಖಿಲ ಭಾರತ ಔಷಧ ವ್ಯಾಪಾರಿಗಳ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ದೇವಿದಾಸ ಪ್ರಭು ಹೇಳಿದ್ದಾರೆ.

‘ಪ್ರತಿ ತಾಲ್ಲೂಕು ಕೇಂದ್ರಗಳಲ್ಲಿ ಬೇಡಿಕೆಗಳ ಮಾಹಿತಿಯುಳ್ಳ ಮನವಿ ಪತ್ರವನ್ನು ಆಯಾ ತಹಶೀಲ್ದಾರ್ಗಳಿಗೆ ಸಲ್ಲಿಸಲಾಗುತ್ತದೆ. ಅಂಗಡಿ ಬಾಗಿಲು ಮುಚ್ಚುವುದರ ಹೊರತಾಗಿ ತೀವ್ರಸ್ವರೂಪದ ಪ್ರತಿಭಟನೆಯನ್ನು ಜಿಲ್ಲೆಯಲ್ಲಿ ನಡೆಸುತ್ತಿಲ್ಲ’ ಎಂದು ತಿಳಿಸಿದ್ದಾರೆ.

‘ಔಷಧ ಮಳಿಗೆಗಳ ಮುಷ್ಕರ ಇದ್ದರೂ ಮೆಡ್ಪ್ಲಸ್, ಅಪೋಲೊ, ಜನೌಷಧಿ ಮಳಿಗೆಗಳು, ಕ್ಲಿನಿಕ್, ನರ್ಸಿಂಗ್ ಹೋಂಗಳಿಗೆ ಹೊಂದಿಕೊಂಡಿರುವ ಔಷಧ ಮಳಿಗೆಗಳು ತೆರೆದುಕೊಂಡಿರಲಿವೆ’ ಎಂದು ಜಿಲ್ಲಾ ಔಷಧ ನಿಯಂತ್ರಕರು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260520-20-731089928

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.