ಕಾರವಾರ: ‘ಪೊಲೀಸ್ ಇಲಾಖೆಯಲ್ಲಿ ಶಿಸ್ತಿಗೆ ಹೆಚ್ಚಿನ ಪ್ರಾಮುಖ್ಯತೆ ಇದೆ. ಕಾನೂನು ಸುವ್ಯವಸ್ಥೆ ಕಾಪಾಡುವ ಜವಾಬ್ದಾರಿ ನಿಭಾಯಿಸಲು ಯಾವುದೇ ಸಂದರ್ಭದಲ್ಲಿ ಕರೆ ಬಂದರೂ ಕರ್ತವ್ಯಕ್ಕೆ ಹಾಜರಾಗಿ, ಸವಾಲುಗಳನ್ನು ಧೈರ್ಯವಾಗಿ ಎದುರಿಸಬೇಕು’ ಎಂದು ಪೊಲೀಸ್ ತರಬೇತಿ ವಿಭಾಗದ ಡಿಐಜಿಪಿ ಡಿ.ದೇವರಾಜ ಹೇಳಿದರು.

ಇಲ್ಲಿನ ತಾತ್ಕಾಲಿಕ ಪೊಲೀಸ್ ತರಬೇತಿ ಶಾಲೆಯ 15ನೇ ತಂಡದಲ್ಲಿ 12 ತಿಂಗಳ ಬುನಾದಿ ತರಬೇತಿ ತರಬೇತಿ ಪೂರ್ಣಗೊಳಿಸಿದ 101 ಸಶಸ್ತ್ರ ಪೊಲೀಸ್ ಕಾನ್ಸ್ಟೆಬಲ್ ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥಸಂಚಲನದಲ್ಲಿ ಕವಾಯತು ಪರಿವೀಕ್ಷಣೆ ನಡೆಸಿ ಮಾತನಾಡಿದರು.

‘ಪೊಲೀಸ್ ಸಿಬ್ಬಂದಿಯಲ್ಲಿ ಕರ್ತವ್ಯಪ್ರಜ್ಞೆ ಸದಾ ಕಾಲ ಜಾಗೃತವಾಗಿರ ಬೇಕು. ಕೆಲಸದಿಂದ ದೂರ ಉಳಿಯಲು ನೆಪಗಳನ್ನು ಹೇಳುವಂತಿರಬಾರದು. ಕೆಲಸದಲ್ಲಿ ಸಣ್ಣ ನಿರ್ಲಕ್ಷ ತೋರಿದರೂ ಅದು ಅತ್ಯಂತ ಗಂಭೀರ ಘಟನೆ ನಡೆಯಲು ಕಾರಣವಾಗಬಹುದು’ ಎಂದು ಎಚ್ಚರಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್ ಮಾತನಾಡಿ, ‘ತರಬೇತಿಯ ಅವಧಿಯಲ್ಲಿ ಜನಸಂದಣೆಯನ್ನು ನಿರ್ವಹಣೆಯ ಪ್ರಾಯೋಗಿಕ ತರಬೇತಿಗಾಗಿ ಪ್ರಶಿಕ್ಷಣಾರಥಿಗಳನ್ನು ನಿಯೋಜಿಸಿಕೊಂಡು ತರಬೇತಿಯನ್ನು ನೀಡಲಾಗಿದೆ’ ಎಂದರು.

‘ಪ್ರಶಿಕ್ಷಣಾರ್ಥಿಗಳಿಗೆ ಒಳಾಂಗಣ ಹಾಗೂ ಹೊರಾಂಗಣ ವಿಷಯದಲ್ಲಿ ತರಬೇತಿಯನ್ನು ಪ್ರತ್ಯೇಕವಾಗಿ ನೀಡಲಾಗಿದೆ. ಹೊಸ ಕಾನೂನುಗಳ ಅಧಿನಿಯಮಗಳು, ಒತ್ತಡ ನಿವಾರಣೆ ಕುರಿತು ಬೋಧಿಸಲಾಗಿದೆ. ಹೊರಾಂಗಣದಲ್ಲಿ ಸ್ಫೋಟಕ ಪತ್ತೆ, ಕಾನೂನು ಸುವ್ಯವಸ್ಥೆ ನಿರ್ವಹಣೆಯ ಪ್ರಾಯೋಗಿಕ ತರಬೇತಿ ಒದಗಿಸಲಾಗಿದೆ’ ಎಂದು ಹೆಚ್ಚುವರಿ ಪೊಲೀಸ್ ಅಧೀಕ್ಷಕ ಹಾಗೂ ತಾತ್ಕಾಲಿಕ ಪೊಲೀಸ್ ತರಬೇತಿ ಶಾಲೆಯ ಪ್ರಾಚಾರ್ಯ ಕೃಷ್ಣಮೂರ್ತಿ ಜಿ ವಿವರಿಸಿದರು.

ತರಬೇತಿಯಲ್ಲಿ ಹೊರಾಂಗಣದಲ್ಲಿ ಉತ್ತಮ ಸಾಧನೆ ತೋರಿದ, ದೋಂಟಿರಾಂ ಪರ್ಸೆ, ರಂಗನಾಥ್ , ಶಿವರಾಜ್ ಹಾಗೂ ಒಳಾಂಗಣದಲ್ಲಿ ಉತ್ತಮ ಸಾಧನೆ ತೋರಿದ ಮುರಳಿ, ಅನಿಲ್ ಕುಮಾರ್, ಅನ್ವರ್ಸಾಬ್ ನದಾಫ್ ಮತ್ತು ಫೈರಿಂಗ್ನಲ್ಲಿ ಉತ್ತಮ ಸಾಧನೆ ತೋರಿದ ಶಿವಪ್ಪ ದೇವರಮನಿ, ವೀರೇಶ್ ಮಡಿವಾಳ, ದೋಂಟಿರಾಂ ಪರ್ಸೆ ಅವರಿಗೆ ಬಹುಮಾನ ವಿತರಿಸಲಾಯಿತು. ತರಬೇತಿಯ ಸರ್ವೋತ್ತಮ ಪ್ರಶಸ್ತಿಯನ್ನು ದೋಂಟಿರಾಂ ಪರ್ಸೆ ಪಡೆದರು.

ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥಸಂಚಲನ ಕಣ್ತುಂಬಿಕೊಳ್ಳಲು ಅವರ ಕುಟುಂಬದವರು, ಸ್ನೇಹಿತರು ಮೈದಾನದಲ್ಲಿ ಕಿಕ್ಕಿರಿದು ನೆರೆದಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260418-20-1716685114

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.