ಕಾರವಾರ: ತಾಲ್ಲೂಕಿನಲ್ಲಿ ಪದೇ ಪದೇ ವಿದ್ಯುತ್ ವ್ಯತ್ಯಯ ಉಂಟಾಗುತ್ತಿರುವುದನ್ನು ಖಂಡಿಸಿ ಬಿಜೆಪಿ ತಾಲ್ಲೂಕು ಘಟಕದಿಂದ ಇಲ್ಲಿನ ಹೆಸ್ಕಾಂ ಕಚೇರಿ ಆವರಣದಲ್ಲಿ ಶನಿವಾರ ಪ್ರತಿಭಟನೆ ನಡೆಸಲಾಯಿತು.

ವಿದ್ಯುತ್ ಪೂರೈಕೆಯಲ್ಲಿ ಕೆಲ ದಿನಗಳಿಂದ ವ್ಯತ್ಯಯ ಹೆಚ್ಚುತ್ತಿದೆ. ಜನರ ದೂರನ್ನು ಆಲಿಸಲು ಹೆಸ್ಕಾಂ ಮುಂದಾಗುತ್ತಿಲ್ಲ. ಗ್ರಾಮೀಣ ಪ್ರದೇಶಗಳಲ್ಲಿ ನೆಲಕ್ಕೆ ಬಿದ್ದಿರುವ ವಿದ್ಯುತ್ ತಂತಿಗಳನ್ನು ಸರಿಪಡಿಸಲು ಮುಂದಾಗುತ್ತಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಹೆಸ್ಕಾಂ ಅಧಿಕಾರಿಗಳ ವಿರುದ್ಧ ಧಿಕ್ಕಾರ ಕೂಗಿ ಹಲವು ಹೊತ್ತು ಪ್ರತಿಭಟನೆ ನಡೆಸಲಾಯಿತು. ಸ್ಥಳದಲ್ಲಿದ್ದ ಅಧಿಕಾರಿಗಳನ್ನೂ ಕಾರ್ಯಕರ್ತರು ತರಾಟೆಗೆ ಪಡೆದರು.

ನಗರಸಭೆ ಮಾಜಿ ಅಧ್ಯಕ್ಷ ರವಿರಾಜ್ ಅಂಕೋಲೇಕರ ಮಾತನಾಡಿ, ‘ಗೃಹಜ್ಯೋತಿ ಯೋಜನೆ ಹೆಸರಿನಲ್ಲಿ ಜನರಿಗೆ ಕಾಂಗ್ರೆಸ್ ಸರ್ಕಾರ ಮಣ್ಣೆರಚುತ್ತಿದೆ. ಪ್ರತಿ ಯುನಿಟ್ ವಿದ್ಯುತ್ ದರ ಏರಿಕೆ ಮಾಡಲಾಗಿದೆ. ಉಚಿತ ವಿದ್ಯುತ್ ಬದಲಾಗಿ ದರ ಹೆಚ್ಚಿಸಿ ಜನರಿಗೆ ಹೊರೆಯಾಗಿಸಲಾಗಿದೆ. ವಿದ್ಯುತ್ ಉಚಿತ ಕೊಡುತ್ತೇವೆ ಎನ್ನುತ್ತ ವಿದ್ಯುತ್ ವ್ಯತ್ಯಯ ಹೆಚ್ಚಿಸಲಾಗುತ್ತಿದೆ’ ಎಂದು ಆರೋಪಿಸಿದರು.

‘ಮಳೆಗಾಲಕ್ಕೆ ಮುನ್ನವೇ ತಾಲ್ಲೂಕಿನಲ್ಲಿ ವಿದ್ಯುತ್ ಪೂರೈಕೆಯಲ್ಲಿ ಅಡೆತಡೆ ಹೆಚ್ಚುತ್ತಿದೆ. ನಗರ ವ್ಯಾಪ್ತಿಯಲ್ಲೂ ವಿದ್ಯುತ್ ಪೂರೈಕೆ ಸರಿಯಾಗಿಲ್ಲ. ಜನರು ದೂರು ನೀಡುತ್ತಾರೆಂಬ ಕಾರಣಕ್ಕೆ ಸಹಾಯವಾಣಿಯನ್ನೂ ಹೆಸ್ಕಾಂ ಸಿಬ್ಬಂದಿ ಸ್ಥಗಿತಗೊಳಿಸಿದ್ದಾರೆ’ ಎಂದು ಬಿಜೆಪಿ ನಗರ ಘಟಕದ ಅಧ್ಯಕ್ಷ ನಾಗೇಶ ಕುರ್ಡೇಕರ ದೂರಿದರು.

‘ಗ್ರಾಮೀಣ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ ಸಮಸ್ಯೆ ಸರಿಪಡಿಸದಿದ್ದರೆ ಪ್ರತಿಭಟನೆ ತೀವ್ರಗೊಳಿಸುತ್ತೇವೆ. ಪ್ರತಿ ಮೂರು, ನಾಲ್ಕು ಗ್ರಾಮ ಪಂಚಾಯಿತಿಗೆ ಒಬ್ಬರು ಲೈನ್ಮೆನ್ಗಳು ಕೆಲಸ ಮಾಡುತ್ತಿದ್ದಾರೆ. ಸರ್ಕಾರ ಹೆಚ್ಚುವರಿ ಸಿಬ್ಬಂದಿ ನಿಯೋಜನೆಗೆ ಪ್ರಯತ್ನಿಸುತ್ತಿಲ್ಲ’ ಎಂದು ಗ್ರಾಮೀಣ ಘಟಕದ ಅಧ್ಯಕ್ಷ ಸುಭಾಶ ಗುನಗಿ ಹೇಳಿದರು.

ಪ್ರಮುಖರಾದ ಮನೋಜ ಭಟ್, ಸೂರಜ್ ದೇಸಾಯಿ, ಸುನೀಲ ಸೋನಿ, ವೈಶಾಲಿ ತಾಂಡೇಲ, ಸುಭಾಷ ಶೆಟ್ಟಿ, ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260517-20-1484997595

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.