ಕಾರವಾರ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಮೀಸಲಾತಿ ಪ್ರಮಾಣ ಹೆಚ್ಚಿಸುವ ಕರ್ನಾಟಕ ಸರ್ಕಾರದ ತೀರ್ಮಾನಕ್ಕೆ ಕೇಂದ್ರ ಸರ್ಕಾರ ಕೂಡಲೇ ಅನುಮೋದನೆ ನೀಡಬೇಕು ಎಂದು ಒತ್ತಾಯಿಸಿ ಸಿಪಿಐ (ಎಂ) ಜಿಲ್ಲಾ ಘಟಕದ ವತಿಯಿಂದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಪತ್ರವನ್ನು ಸೋಮವಾರ ಹೆಚ್ಚುವರಿ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ ಅವರಿಗೆ ಸಲ್ಲಿಸಲಾಯಿತು.

‘ಮೀಸಲಾತಿ ಹೆಚ್ಚಿಸುವ ಕುರಿತ ರಾಜ್ಯ ಸರ್ಕಾರದ ಶಿಫಾರಸ್ಸನ್ನು ಸಂವಿಧಾನದ 9ನೇ ಪರಿಚ್ಛೇದಕ್ಕೆ ಸೇರಿಸಿ ಕೇಂದ್ರದಲ್ಲಿ ಇರುವಂತೆ ಶೇ 17 ಮತ್ತು ಶೇ 7ರಷ್ಟು ಮೀಸಲಾತಿ ಜಾರಿಗೊಳಿಸಬೇಕು. ಇದಕ್ಕಾಗಿ ರಾಜ್ಯದ ಸಂಸದರು ವಿಶೇಷ ಒತ್ತಡದ ಪ್ರಯತ್ನಗಳನ್ನು ನಡೆಸಬೇಕು’ ಎಂದು ಒತ್ತಾಯಿಸಿದರು.

‘ನಿರುದ್ಯೋಗ ಸಮಸ್ಯೆಯ ಗಂಭೀರತೆಯನ್ನ ಅರ್ಥ ಮಾಡಿಕೊಂಡು ಭಾರತದ ಒಕ್ಕೂಟದ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಮಾಡಬೇಕು. ಬ್ಯಾಕ್ ಲಾಗ್ ಹುದ್ದೆಗಳನ್ನು ಯಾವುದೇ ಸಂದರ್ಭದಲ್ಲಿ ಸಾಮಾನ್ಯ ಗುಂಪಿಗೆ ವರ್ಗಾಯಿಸಬಾರದು. ಖಾಸಗಿ ರಂಗದಲ್ಲಿಯೂ ಮೀಸಲಾತಿ ನೀತಿಯನ್ನು ಜಾರಿಗೊಳಿಸಲು ಅಗತ್ಯವಾದ ಕ್ರಮಗಳನ್ನು ಕೈಗೊಳ್ಳಬೇಕು’ ಎಂದೂ ಒತ್ತಾಯಿಸಿದರು.

‘ಪರಿಶಿಷ್ಟ ಸಮುದಾಯಗಳ ಪ್ರಗತಿಗೆ ಕೇಂದ್ರದ ಒಟ್ಟು ಬಜೆಟ್ನಲ್ಲಿ ಹಾಗೂ ಅಭಿವೃದ್ದಿಗೆ ಸಹಾಯಕವಾಗಿರುವ ಉಪಯೋಜನೆಗಳಿಗೆ ಸರ್ಕಾರ ನೀಡುತ್ತಿರುವ ಮೊತ್ತ ಕಡಿಮೆಯಾಗುತ್ತಿದೆ. ಜನಸಂಖ್ಯೆಯ ಪ್ರಮಾಣಕ್ಕೆ ಅನುಗುಣವಾಗಿ ಹಣ ಮೀಸಲಿಡಬೇಕು ಎನ್ನುವ ಹಿಂದಿನ ಯೋಜನಾ ಆಯೋಗದ ನಿರ್ದೇಶನ ಇಲ್ಲವಾಗಿದೆ. ಜನಸಂಖ್ಯೆಯ ಪ್ರಮಾಣಕ್ಕೆ ಅನುಗುಣವಾಗಿ ಹಣ ಮೀಸಲಿಡಬೇಕು’ ಎಂಬ ಬೇಡಿಕೆ ಮುಂದಿರಿಸಿದರು.

ಸಿಪಿಐ (ಎಂ) ಜಿಲ್ಲಾ ಘಟಕದ ಕಾರ್ಯದರ್ಶಿ ಯಮುನಾ ಗಾಂವ್ಕರ್, ವೀರೇಶ ರಾಠೋಡ್, ಶೇಖಪ್ಪ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260414-20-227105936

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.