ಕಾರವಾರ: ಹಲವು ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ಆರೋಪ ಎದುರಿಸುತ್ತಿರುವ ಇಲ್ಲಿನ ಕಳಸವಾಡಾ ನಿವಾಸಿ ಸೂರ್ಯಕಾಂತ ಕಳಸ ಅಲಿಯಾಸ್ ಜ್ಯಾಕ್ನನ್ನು (27) ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ಪೊಲೀಸ್ ಠಾಣೆ ವ್ಯಾಪ್ತಿಗೆ ಗಡೀಪಾರು ಮಾಡಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್ ಆದೇಶಿಸಿದ್ದಾರೆ.

ಹಲ್ಲೆ, ಶಾಂತತಾ ಭಂಗಕ್ಕೆ ಯತ್ನ ಸೇರಿದಂತೆ ನಗರ ಪೊಲೀಸ್ ಠಾಣೆಯಲ್ಲಿ 7 ಪ್ರಕರಣಗಳು ಸೂರ್ಯಕಾಂತ ವಿರುದ್ಧ ದಾಖಲಾಗಿವೆ. ಹೀಗಾಗಿ, ಆತನ ವಿರುದ್ಧ ರೌಡಿ ಶೀಟ್ ತೆರೆದು ಚಲನವಲನಗಳ ಮೇಲೆ ನಿಗಾ ಇರಿಸಲಾಗಿತ್ತು. ಎಚ್ಚರಿಕೆ ನೀಡಿದ್ದರೂ ಆತ ಅಪರಾಧ ಚಟುವಟಿಕೆಗಳಲ್ಲಿ ಸಕ್ರಿಯನಾಗಿದ್ದ ಕಾರಣಕ್ಕೆ ಗಡೀಪಾರು ಮಾಡಲು ಶಿಫಾರಸು ಮಾಡಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ರೌಡಿ ಶೀಟರ್ಗಳನ್ನು ಗಡೀಪಾರು ಮಾಡಲು ಈ ಹಿಂದೆ ಜಿಲ್ಲಾಧಿಕಾರಿ, ಉಪವಿಭಾಗಾಧಿಕಾರಿಗಳಿಗೆ ಮಾತ್ರ ಅಧಿಕಾರ ಇತ್ತು. ಪೊಲೀಸ್ ವರಿಷ್ಠಾಧಿಕಾರಿ ಅವರಿಗೂ ಈಗ ಅವಕಾಶ ನೀಡಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260430-25-877737695

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.