ಕಾರವಾರ: ‘ತಾಲ್ಲೂಕಿನ ಶೇಜವಾಡದಲ್ಲಿರುವ ಶೆಜ್ಜೇಶ್ವರ ದೇವಸ್ಥಾನದ ಪುನರ್ ನಿರ್ಮಾಣ ಕಾರ್ಯಕ್ಕೆ ಏ.13ರಂದು ಶೃಂಗೇರಿ ಮಠದ ವಿಧುಶೇಖರ ಭಾರತೀ ಸ್ವಾಮೀಜಿ ಶಿಲಾನ್ಯಾಸ ನೆರವೇರಿಸಲಿದ್ದಾರೆ’ ಎಂದು ಶೆಜ್ಜೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಕಾರ್ಯದರ್ಶಿ ಜಿ.ಕೆ.ಜಯಪ್ರಕಾಶ ಹೇಳಿದರು.

ಇಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸಂಪೂರ್ಣ ಶಿಲಾಮಯ ದೇವಸ್ಥಾನ ನಿರ್ಮಾಣ ಕೆಲಸ ಆರಂಭಿಸಲು ಸಿದ್ಧತೆ ಈಗಾಗಲೆ ನಡೆದಿದೆ. ಬಾಲಾಲಯ ನಿರ್ಮಾಣಕ್ಕೆ ಚಾಲನೆ ಸಿಕ್ಕಿದೆ’ ಎಂದರು.

ದೇವಸ್ಥಾನದ ಅರ್ಚಕ ಮಂದಾರ ಮೊಘೆ, ‘ಪಂಚಕ್ಷೇತ್ರಗಳಲ್ಲಿ ಒಂದಾಗಿರುವ ಶೆಜ್ಜೇಶ್ವರ ದೇವಸ್ಥಾನ ಪುನರ್ ನಿರ್ಮಾಣದ ಶಿಲಾನ್ಯಾಸಕ್ಕೆ ಮುನ್ನ ಹೋಮ ಸೇರಿದಂತೆ ಹಲವು ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ದೇವಸ್ಥಾನ ನಾಗರ ಶೈಲಿ, ಕೇರಳೀಯ ಶೈಲಿಯಲ್ಲಿ ನಿರ್ಮಾಣ ಆಗಲಿದೆ’ ಎಂದರು.

ಸಮಿತಿ ಅಧ್ಯಕ್ಷ ಸಮೀರ ನಾಯ್ಕ, ‘ದೇವಸ್ಥಾನ ನಿರ್ಮಾಣಕ್ಕೆ ₹22 ಕೋಟಿ ವೆಚ್ಚ ತಗುಲಬಹುದು ಎಂದು ಅಂದಾಜಿಸಲಾಗಿದೆ. ಶಾಸಕ ಸತೀಶ ಸೈಲ್ ಮೊದಲ ಹಂತದಲ್ಲಿ ₹7 ಕೋಟಿ ಅನುದಾನವನ್ನು ಸರ್ಕಾರದಿಂದ ಒದಗಿಸಿದ್ದಾರೆ. ಎರಡನೇ ಹಂತದಲ್ಲಿ ₹10 ಕೋಟಿಗೆ ಆಡಳಿತಾತ್ಮಕ ಅನುಮೋದನೆ ಸಿಗುವ ನಿರೀಕ್ಷೆಯಲ್ಲಿದ್ದೇವೆ. ಗ್ರಾಮದ ಪ್ರತಿ ಮನೆಗಳಿಂದ ಕನಿಷ್ಠ ₹11 ಸಾವಿರ ದೇಣಿಗೆ ನೀಡಲು ಗ್ರಾಮಸ್ಥರು ಒಪ್ಪಿದ್ದಾರೆ. ಹಲವರು ಬೇರೆ ಬೇರೆ ಸೌಕರ್ಯಗಳನ್ನೂ ಒದಗಿಸಲು ಮುಂದೆ ಬಂದಿದ್ದಾರೆ’ ಎಂದರು.

ಸಮಿತಿ ಸದಸ್ಯರಾದ ಆತ್ಮಾರಾಮ ಶೇಜವಾಡಕರ, ಎಲ್.ಕೆ.ನಾಯ್ಕ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260409-20-117103613

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.