ಕಾರವಾರ: ಆತ್ಮಲಿಂಗ ಇರುವ ಪಂಚಕ್ಷೇತ್ರಗಳಲ್ಲಿ ಒಂದೆನಿಸಿರುವ ತಾಲ್ಲೂಕಿನ ಶೇಜವಾಡದ ಶೆಜ್ಜೇಶ್ವರ ದೇವಸ್ಥಾನದ ಪುನರ್ ನಿರ್ಮಾಣಕ್ಕೆ ಸೋಮವಾರ ಶಿಲಾನ್ಯಾಸ ಪ್ರಕ್ರಿಯೆ ನಡೆಯಲಿದೆ. ಇದಕ್ಕಾಗಿ ಭರದ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ.

ಬೆಳಿಗ್ಗೆ 11.50ರ ಮಿಥುನ ಲಗ್ನದ ಮುಹೂರ್ತದಲ್ಲಿ ದೇವಸ್ಥಾನದ ಹೊಸ ಕಟ್ಟಡ ನಿರ್ಮಾಣಕ್ಕೆ ಶೃಂಗೇರಿ ಮಠದ ವಿಧುಶೇಖರ ಭಾರತೀ ಸ್ವಾಮೀಜಿ ಶಿಲಾನ್ಯಾಸ ನೆರವೇರಿಸಲಿದ್ದಾರೆ. ಶಾಸಕ ಸತೀಶ ಸೈಲ್ ಸೇರಿದಂತೆ ಹಲವು ಪ್ರಮುಖರು ಈ ವೇಳೆ ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮದ ಹಿನ್ನೆಲೆಯಲ್ಲಿ ಕಳೆದ ಕೆಲ ದಿನಗಳಿಂದ ದೇವಸ್ಥಾನದ ಆವರಣದಲ್ಲಿ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವ ಕೆಲಸ ನಡೆದಿದೆ.

ದೇವಸ್ಥಾನದ ಗರ್ಭಗುಡಿ ನಿರ್ಮಾಣಗೊಳ್ಳಲಿರುವ ಜಾಗಕ್ಕೆ ಅಡಿಪಾಯ ನಿರ್ಮಿಸಿ, ಶಿಲಾನ್ಯಾಸ ನಡೆಸಲು ಜಾಗ ನಿರ್ಮಾಣ ಮಾಡಲಾಗಿದೆ. ಈ ಪ್ರಕ್ರಿಯೆ ಪೂರ್ಣಗೊಳ್ಳುತ್ತಿದ್ದಂತೆ ಸಂಪೂರ್ಣ ಶಿಲಾಮಯವಾದ ದೇವಸ್ಥಾನ ನಿರ್ಮಿಸುವ ಪ್ರಕ್ರಿಯೆಗಳು ಆರಂಭಗೊಳ್ಳಲಿವೆ ಎಂದು ಶೆಜ್ಜೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಕಾರ್ಯದರ್ಶಿ ಜಿ.ಕೆ.ಜಯಪ್ರಕಾಶ ತಿಳಿಸಿದರು.

‘ದೇವಸ್ಥಾನ ನಿರ್ಮಾಣ ಕೆಲಸ ಆರಂಭಿಸಲು ಸಿದ್ಧತೆ ಈಗಾಗಲೆ ನಡೆದಿದೆ. ಬಾಲಾಲಯ ನಿರ್ಮಾಣಕ್ಕೆ ಚಾಲನೆ ಸಿಕ್ಕಿದೆ. ನಾಗರ ಮತ್ತು ಕೇರಳ ಶೈಲಿಯಲ್ಲಿ ಸಂಪೂರ್ಣ ಕಲ್ಲು, ತಾಮ್ರ ಬಳಸಿ ದೇವಸ್ಥಾನ ನಿರ್ಮಾಣ ನಡೆಯಲಿದೆ. ಇದಕ್ಕಾಗಿ ₹22 ಕೋಟಿ ವೆಚ್ಚ ತಗುಲಬಹುದು ಎಂದು ಅಂದಾಜಿಸಲಾಗಿದೆ. ರಾಜ್ಯ ಸರ್ಕಾರದಿಂದ ₹18 ಕೋಟಿ ಅನುದಾನ ಬಿಡುಗಡೆಯ ಭರವಸೆ ಸಿಕ್ಕಿದೆ’ ಎಂದು ಸಮಿತಿ ಅಧ್ಯಕ್ಷ ಸಮೀರ ನಾಯ್ಕ ಹೇಳಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260413-20-70653765

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.