ಕಾರವಾರ: ಇಲ್ಲಿನ ಅಂಬೇಡ್ಕರ್ ವೃತ್ತದ ಬಳಿಯ ಕಟ್ಟಡವೊಂದರಲ್ಲಿ ಬುಧವಾರ ರಾತ್ರಿ ಅಗ್ನಿ ಅವಘಡ ಸಂಭವಿಸಿದ್ದು, ಕೆಲ ಕಾಲ ಆತಂಕದ ಸ್ಥಿತಿ ನಿರ್ಮಾಣವಾಯಿತು.

ಬ್ಯಾಂಕ್, ಮೊಬೈಲ್ ಮಳಿಗೆ, ಮನೆಗಳಿರುವ ಕಟ್ಟಡದ ನೆಲಮಹಡಿಯ ಪಾರ್ಕಿಂಗ್ ಜಾಗದಲ್ಲಿ ಬೆಂಕಿ ಕಾಣಿಸಿಕೊಂಡಿತು. ಫಿಲಿಪ್ ಫರ್ನಾಂಡಿಸ್ ಎಂಬುವವರಿಗೆ ಸೇರಿದ ಕಟ್ಟಡದಲ್ಲಿ ದುರ್ಘಟನೆ ನಡೆದಿದೆ.

ಕೆಲವೇ ಕ್ಷಣಗಳಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಬಂದು ಬೆಂಕಿ ನಂದಿಸಿದರು. ಬೆಂಕಿಯಿಂದ ದಟ್ಟ ಹೊಗೆ ಆವರಿಸಿಕೊಂಡಿದ್ದರಿಂದ ಸಮೀಪದ ಕಟ್ಟಡದಲ್ಲಿದ್ದವರು ಆತಂಕಕ್ಕೆ ಒಳಗಾಗಿದ್ದರು.

‘ವಿದ್ಯುತ್ ಶಾರ್ಟ್ ಸರ್ಕಿಟ್ನಿಂದ ಬೆಂಕಿ ಅವಘಡ ಸಂಭವಿಸಿದೆ. ಸೆಕೆ ಹೆಚ್ಚಿರುವುದರಿಂದ ಈ ರೀತಿ ಆಗಿರುವ ಸಾಧ್ಯತೆ ಇದೆ. ದುರ್ಘಟನೆಯಲ್ಲಿ ಹೆಚ್ಚಿನ ಹಾನಿ ಸಂಭವಿಸಿಲ್ಲ’ ಎಂದು ಅಗ್ನಿಶಾಮಕ ದಳದ ಅಧಿಕಾರಿಗಳು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260501-20-1638402126

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.