ಕಾರವಾರ: ‘ದೇಹಕ್ಕೆ ಒಳ್ಳೆಯ ಆಹಾರ ಎಷ್ಟು ಮುಖ್ಯವೋ ಹಾಗೇ ಮೆದುಳಿಗೆ ಒಳ್ಳೆಯ ಚಟುವಟಿಕೆ, ಒಳ್ಳೆಯ ನಡೆ-ನುಡಿ ಆಚಾರ ವಿಚಾರಗಳು ಅಷ್ಟೇ ಮುಖ್ಯವಾಗಿದೆ. ಬೇಸಿಗೆ ಶಿಬಿರಗಳು ಮಕ್ಕಳ ಮನಸ್ಸನ್ನು ಆರೋಗ್ಯಯುತವಾಗಿರಿಸಬಲ್ಲವು’ ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ದಿವ್ಯಶ್ರೀ ಸಿ.ಎಂ ಹೇಳಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಬಾಲಭವನ ಸಮಿತಿ ಜಂಟಿಯಾಗಿ 5ರಿಂದ 16 ವರ್ಷದ ಮಕ್ಕಳಿಗೆ ಇಲ್ಲಿನ ಸ್ತ್ರೀಶಕ್ತಿ ಭವನದಲ್ಲಿ ಹಮ್ಮಿಕೊಂಡಿರುವ ಬೇಸಿಗೆ ಉಚಿತ ಶಿಬಿರವನ್ನು ಗುರುವಾರ ಉದ್ಘಾಟಿಸಿ ಅವರು ಮಾತನಾಡಿದರು.

‘ವ್ಯಕ್ತಿತ್ವ ವಿಕಸನ, ಕೌಶಲ ಅಭಿವೃದ್ಧಿಗೆ ಮಕ್ಕಳಿಗೆ ಪಾಠದ ಜೊತೆಯಲ್ಲಿ ಆಟಗಳು ಪ್ರಮುಖವಾಗಿದೆ. ಮಕ್ಕಳಲ್ಲಿ ಅಡಗಿರುವ ಕಲೆ, ಸಾಂಸ್ಕೃತಿಕ ಅಭಿರುಚಿ, ಇತರೆ ಬೌದ್ಧಿಕ ಮತ್ತು ಕ್ರೀಯಾಶೀಲ ಚಟುವಟಿಕೆಗಳನ್ನು ವೃದ್ಧಿಸಿಕೊಳ್ಳಲು ಶಿಬಿರವು ವೇದಿಕೆ ಆಗಲಿದೆ’ ಎಂದರು.

ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಪ್ರಕಾಶ ಹಾಲಮ್ಮನವರ, ‘ಮಕ್ಕಳು ರಜೆ ಅವಧಿಯಲ್ಲಿ ಮೊಬೈಲ್ನಿಂದ ದೂರವಿದ್ದು, ಹಿರಿಯರಿಂದ ಹಳೆಯ ಕಥೆಗಳನ್ನು ಕೇಳಿ ಪ್ರೇರಣೆ ಪಡೆಯಬೇಕು’ ಎಂದರು.

ಡಿಡಿಪಿಐ ಲತಾ ನಾಯಕ ಮಾತನಾಡಿ, ‘ಮಕ್ಕಳಲ್ಲಿ ಅಡಗಿರುವ ಕಲೆ ಪ್ರತಿಭೆ ಸೃಜನಾತ್ಮಕ ಚಟುವಟಿಕೆಗಳನ್ನು ಬೇಸಿಗೆ ಶಿಬಿರದ ಮೂಲಕ ಹೊರತರಲು ಸಹಕಾರಿಯಾಗಿದೆ’ ಎಂದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಕುಮಾರ ಎನ್., ತರಬೇತಿ ಶಿಕ್ಷಕರಾದ ತ್ರಿವೇಣಿ ವಡ್ಡರ್, ವಿನುತಾ ಅಂಬೇಕರ, ಪೂರ್ಣಿಮಾ ಬಶೆಟ್ಟಿ, ಕಲ್ಪನಾ ರಶ್ಮಿ ಕಲಾಲೋಕದ ಅಧ್ಯಕ್ಷ ಬಿ.ಎಂ ಸೂರ್ಯಪ್ರಕಾಶ, ಇತರರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260417-20-608014235

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.