ಕಾರವಾರ: ‘ಶಾಲೆ ಕಾಲೇಜುಗಳ 100 ಮೀಟರ್ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನ ಮಾರಾಟ ಮಾಡುವ ಅಂಗಡಿಗಳನ್ನು ತಕ್ಷಣ ತೆರವುಗೊಳಿಸಬೇಕು’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ ಸೂಚಿಸಿದರು.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.

‘ಜಿಲ್ಲೆಯ ಶೈಕ್ಷಣಿಕ ಸಂಸ್ಥೆಗಳ ಅಕ್ಕಪಕ್ಕದಲ್ಲಿ ತಂಬಾಕು ಮಾರಾಟ ನಡೆಯುತ್ತಿರುವ ಕುರಿತಂತೆ ಶಿಕ್ಷಣ ಇಲಾಖೆ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆಯ ಮೂಲಕ ಪರಿಶೀಲನೆ ನಡೆಸಿ ವರದಿ ನೀಡಬೇಕು. ತಂಬಾಕು ಉತ್ಪನ್ನ ಮಾರಾಟದ ಅಂಗಡಿಗಳು ಕಂಡುಬಂದಲ್ಲಿ ಕೂಡಲೇ ಕ್ರಮವಾಗಬೇಕು. ಕೋಟ್ಪಾ ಕಾಯ್ದೆ ಅಡಿ ಈ ಹಿಂದೆ ಹಲವು ಬಾರಿ ಅಂತಹ ಅಂಗಡಿಕಾರರಿಗೆ ನೋಟಿಸ್ ನೀಡಲಾಗಿದೆ. ಇನ್ಮುಂದೆ ಕಠಿಣ ಕ್ರಮ ಅನಿವಾರ್ಯ ಎಂದು ಎಚ್ಚರಿಸಿ’ ಎಂದರು.

‘ಕಳೆದ ಒಂದು ವರ್ಷದ ಅವಧಿಯಲ್ಲಿ ಕೋಟ್ಪಾ ಕಾಯಿದೆಯಡಿ ನಡೆಸಿದ ದಾಳಿಗಳಲ್ಲಿ 952 ಪ್ರಕರಣಗಳಲ್ಲಿ ಒಟ್ಟು ₹1,36,200 ದಂಡ ಸಂಗ್ರಹಿಸಲಾಗಿದೆ. 252 ಮಾಹಿತಿ ಸಂವಹನ ಕಾರ್ಯಕ್ರಮ ಮತ್ತು 135 ಗುಂಪು ಚರ್ಚೆಗಳನ್ನು ಹಮ್ಮಿಕೊಳ್ಳಲಾಗಿದೆ. ಶಾಲಾ ಕಾಲೇಜುಗಳಲ್ಲಿ 104 ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಿದೆ’ ಎಂದು ಜಿಲ್ಲಾ ಪ್ರಭಾರ ಸರ್ವೇಕ್ಷಣಾಧಿಕಾರಿ ಡಾ.ಕ್ಯಾಪ್ಟನ್ ರಮೇಶ್ ರಾವ್ ಮಾಹಿತಿ ನೀಡಿದರು.

ಕೃಷಿ ಇಲಾಖೆ ಜಂಟಿ ನಿರ್ದೇಶಕ ಶಿವಪ್ರಸಾದ್ ಗಾಂವಕರ್, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಸತೀಶ ನಾಯ್ಕ, ರಾಜ್ಯ ತಂಬಾಕು ನಿಯಂತ್ರಣ ಕೋಶದ ವಿಭಾಗೀಯ ಸಂಯೋಜಕ ಮಹಾಂತೇಶ್ ಉಳ್ಳಾಗೆಡ್ಡಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260604-20-1556408011

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.