ಕಾರವಾರ: ‘ಮಹಿಳಾ ಮೀಸಲಾತಿ ಮಸೂದೆ ವಿರುದ್ಧ ನಿಂತು ಈ ದೇಶದ ಮಹಿಳೆಯರನ್ನು ಅವಮಾನಿಸಿದ ಕಾಂಗ್ರೆಸ್ ಹಾಗೂ ಅದರ ಮಿತ್ರಪಕ್ಷಗಳಿಗೆ ಮುಂಬರುವ ಚುನಾವಣೆಯಲ್ಲಿ ಬ್ಯಾಲೆಟ್ ಮೂಲಕ ಮಹಿಳೆಯರು ತಕ್ಕ ಪಾಠ ಕಲಿಸಲಿದ್ದಾರೆ’ ಎಂದು ಬಿಜೆಪಿ ಮಹಿಳಾ ಮೋರ್ಚಾ ರಾಜ್ಯ ಘಟಕದ ಅಧ್ಯಕ್ಷೆ ಸಿ. ಮಂಜುಳಾ ಅಭಿಪ್ರಾಯಪಟ್ಟರು.

ನಾರೀ ಶಕ್ತಿ ಫೋರಂನಿಂದ ಇಲ್ಲಿನ ಬಾಡದ ಬೃಂದಾವನ ಗಾರ್ಡನ್ನಲ್ಲಿ ಮಂಗಳವಾರ ಮಹಿಳಾ ಮೀಸಲಾತಿ ಮಸೂದೆ ಜಾರಿಗೆ ಅಡ್ಡಿಯಾದ ಕಾಂಗ್ರೆಸ್ ಮತ್ತು ಅದರ ಮಿತ್ರ ಪಕ್ಷಗಳ ವಿರುದ್ಧ ಹಮ್ಮಿಕೊಂಡಿದ್ದ ಜನಾಕ್ರೋಶ ಮಹಿಳಾ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.

‘ರಾಮಾಯಣ, ಮಹಾಭಾರತ ಕಾಲದಲ್ಲೇ ಮಹಿಳೆಯರನ್ನು ಅವಮಾನಿಸಿದರೆ ಏನೆಲ್ಲ ಆಗಲಿದೆ ಎನ್ನುವುದನ್ನು ನಾವು ಇತಿಹಾಸದಿಂದ ಅರಿತಿದ್ದೇವೆ. ಅದೇ ರೀತಿ ಕಾಂಗ್ರೆಸ್ ಹಾಗೂ ಮಿತ್ರ ಪಕ್ಷಗಳು ಮಹಿಳಾ ಮೀಸಲಾತಿ ಮಸೂದೆಯನ್ನು ವಿರೋಧಿಸಿ ಮಹಿಳೆಯರನ್ನು ಅವಮಾನಿಸಿವೆ. ಇದಕ್ಕೆ ಮಹಿಳೆಯರು ತಕ್ಕ ಉತ್ತರ ನೀಡಬೇಕು’ ಎಂದರು.

ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷೆ ರೂಪಾಲಿ ನಾಯ್ಕ, ‘ಮಹಿಳೆಯರಿಗೆ ವಿಶೇಷ ಸ್ಥಾನಮಾನ ನೀಡಬೇಕು, ಮಹಿಳೆಯರು ಸಬಲರಾಗಬೇಕು ಎಂಬ ಉದ್ದೇಶದಿಂದ ಮಹಿಳಾ ಮೀಸಲಾತಿ ಮಸೂದೆಯನ್ನು ಜಾರಿಗೆ ತರಲು ಪ್ರಧಾನಿ ಮೋದಿ ಮುಂದಾದರೆ ಕಾಂಗ್ರೆಸ್ ಹಾಗೂ ಮಿತ್ರ ಪಕ್ಷಗಳು ಅದನ್ನು ವಿರೋಧಿಸಿ ಮಹಿಳೆಯರಿಗೆ ಅನ್ಯಾಯ ಮಾಡಿದೆ’ ಎಂದರು.

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎನ್.ಎಸ್.ಹೆಗಡೆ ಮಾತನಾಡಿ ಕಾಂಗ್ರೆಸ್ನ ಮಹಿಳಾ ವಿರೋಧಿ ನೀತಿಯನ್ನು ಖಂಡಿಸಿದರು.

ಮಹಿಳಾ ಮೋರ್ಚಾ ರಾಜ್ಯ ಘಟಕದ ಕಾರ್ಯದರ್ಶಿ ಸುಗುಣ, ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಸುಜಾತಾ ಬಾಂದೇಕರ್, ಕಲ್ಪನಾ ನಾಯ್ಕ, ನಯನಾ ನೀಲಾವರ, ವೈಶಾಲಿ ತಾಂಡೇಲ್, ಗ್ರಾಮೀಣ ಅಧ್ಯಕ್ಷ ಸುಭಾಷ್ ಗುನಗಿ, ನಗರ ಅಧ್ಯಕ್ಷ ನಾಗೇಶ್ ಕುರ್ಡೇಕರ್, ಅಂಕೋಲಾ ಮಂಡಲ ಅಧ್ಯಕ್ಷ ಸಂಜಯ ನಾಯ್ಕ, ರವಿರಾಜ್ ಅಂಕೋಲೆಕರ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260429-20-1036852296

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.