ಕಾರವಾರ: ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಭೂಕುಸಿತ ಉಂಟಾದ ಸ್ಥಳಗಳನ್ನು ಮಂಗಳವಾರ ಪರಿಶೀಲಿಸಿದ ಕಂದಾಯ ಸಚಿವ ಕೃಷ್ಣ ಬೈರೇಗೌಡ, ತಡೆಗೋಡೆ ನಿರ್ಮಿಸದೆ ನಿರ್ಲಕ್ಷ ತೋರಿರುವ ಅಧಿಕಾರಿಗಳನ್ನು ತರಾಟೆಗೆ ಪಡೆದರು.

ದೇವಿಮನೆ ಘಟ್ಟದಲ್ಲಿ ಹಾದುಹೋಗಿರುವ ಶಿರಸಿ–ಕುಮಟಾ ರಾಷ್ಟ್ರೀಯ ಹೆದ್ದಾರಿ 766ಇ ಪಕ್ಕದ ಭೂಕುಸಿತ ಉಂಟಾಗಿರುವ ಸ್ಥಳ, ರಾಷ್ಟ್ರೀಯ ಹೆದ್ದಾರಿ–66ರ ಶಿರೂರಿನಲ್ಲಿ ಕಳೆದ ವರ್ಷ ಭೂಕುಸಿತ ಸಂಭವಿಸಿದ್ದ ಸ್ಥಳದಲ್ಲಿ ಪರಿಶೀಲನೆ ನಡೆಸಿದರು. ಕುಸಿತ ಉಂಟಾದ ಸ್ಥಳಗಳಲ್ಲಿ ಸುರಕ್ಷತೆ ಕ್ರಮ ಕೈಗೊಳ್ಳದಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದರು.

‘ದೇವಿಮನೆ ಘಟ್ಟವು ಪರಿಸರ ಸೂಕ್ಷ್ಮ ಪ್ರದೇಶವಾಗಿದ್ದು ಇಲ್ಲಿ ರಸ್ತೆ ವಿಸ್ತರಣೆಯಿಂದ ಕುಸಿತ ಉಂಟಾಗಬಹುದು ಎಂಬ ಅರಿವಿದ್ದರೂ ತಡೆಗೋಡೆ ನಿರ್ಮಿಸಿಲ್ಲ. ಕೆಲಸ ಆರಂಭಗೊಳ್ಳುವ ಮೊದಲು ತಡೆಗೋಡೆ ನಿರ್ಮಿಸಿ ಹೆದ್ದಾರಿ ನಿರ್ಮಾಣದ ಕಾಮಗಾರಿ ಆರಂಭಿಸಬೇಕಿತ್ತು’ ಎಂದು ಹೆದ್ದಾರಿ ನಿರ್ಮಾಣದ ಹೊಣೆ ಹೊತ್ತ ಆರ್ಎನ್ಎಸ್ ಇನ್ಫ್ರಾಸ್ಟ್ರಕ್ಚರ್ ಕಂಪನಿಯ ಎಂಜಿನಿಯರ್ರನ್ನು ತರಾಟೆಗೆ ಪಡೆದರು.

‘ಶಿರೂರಿನಲ್ಲಿ ಗುಡ್ಡ ಕುಸಿತ ದುರಂತ ಸಂಭವಿಸಿ ವರ್ಷ ಕಳೆದರೂ ಗುಡ್ಡ ಕುಸಿಯದಂತೆ ಮುನ್ನೆಚ್ಚರವಹಿಸುವ ಕ್ರಮವಾಗಿಲ್ಲ. ಕುಸಿತ ತಡೆಗೆ ಯಾವುದೇ ಕ್ರಮವಹಿಸದೆ ಸುಮ್ಮನಿರುವುದೇಕೆ?’ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕರನ್ನು ಪ್ರಶ್ನಿಸಿದರು.

‘ಶಿರೂರು ಸೇರಿದಂತೆ ಹೆದ್ದಾರಿ ವಿಸ್ತರಣೆಗೆ ಗುಡ್ಡ ಅಗೆದ ಸ್ಥಳಗಳಲ್ಲಿ ಕಡ್ಡಾಯವಾಗಿ ತಡೆಗೋಡೆ ನಿರ್ಮಿಸಬೇಕು. ಗೇಬಿಯನ್ ವಾಲ್ ಅಥವಾ ಕುಸಿತ ತಡೆಗಟ್ಟಬಹುದಾದ ಸುರಕ್ಷತೆ ಕೆಲಸ ಕೈಗೊಳ್ಳಿ’ ಎಂದು ಸೂಚಿಸಿದರು.

ಶಿರೂರಿನಲ್ಲಿ 3 ಮೀ. ಎತ್ತರದವರೆಗೆ ಗೇಬಿಯನ್ ವಾಲ್ ನಿರ್ಮಿಸಲಾಗುವುದು ಎಂದು ಅಧಿಕಾರಿ ಹೇಳಿದರು. ಇದಕ್ಕೆ ಒಪ್ಪದ ಸಚಿವ ಕುಸಿತ ಸಂಭವಿಸಿದರೆ ಗುಡ್ಡಕ್ಕೆ ಮಣ್ಣು ಬೀಳದಂತೆ ಎತ್ತರದವರೆಗೆ ಗೋಡೆ ನಿರ್ಮಿಸಬೇಕು ಎಂದರು.

ಗಂಗಾವಳಿ ನದಿಯಲ್ಲಿ ಶೇಖರಣೆಯಾಗಿರುವ ಮಣ್ಣಿನ ದಿಬ್ಬ ತೆರವುಗೊಳಿಸಲು ತುರ್ತಾಗಿ ಕ್ರಮವಾಗಬೇಕು ಎಂದೂ ಬಂದರು ಜಲಸಾರಿಗೆ ಮಂಡಳಿ ಎಂಜಿನಿಯರ್ಗಳಿಗೆ ಸೂಚಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ, ಶಾಸಕರಾದ ಸತೀಶ ಸೈಲ್, ಭೀಮಣ್ಣ ನಾಯ್ಕ, ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ ಇದ್ದರು.

ರಾಜ್ಯ ಸರ್ಕಾರದಿಂದ ಸಹಕಾರ

‘ಜಿಲ್ಲೆಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ಭೂಸ್ವಾಧೀನಕ್ಕೆ ರಾಜ್ಯ ಸರ್ಕಾರದಿಂದ ಯಾವುದೇ ವಿಳಂಬ ಆಗಿಲ್ಲ’ ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ‘ಭೂಸ್ವಾಧೀನ ಮಾಡಿಕೊಡುವ ಜೊತೆಗೆ ಯೋಜನೆಗೆ ಬಳಕೆಯಾಗುವ ಅರಣ್ಯ ಭೂಮಿಗೆ ಪರ್ಯಾಯವಾಗಿ ಹಾವೇರಿ ವಿಜಯಪುರ ಜಿಲ್ಲೆಯಲ್ಲಿ ಅರಣ್ಯ ಇಲಾಖೆಗೆ ಪರ್ಯಾಯ ಜಮೀನನ್ನೂ ನೀಡಲಾಗಿದೆ. ಯೋಜನೆ ಸಾಧ್ಯವಾದಷ್ಟು ಬೇಗ ಕಾರ್ಯಗತಗೊಳ್ಳಬೇಕು ಎಂಬ ಆಶಯದೊಂದಿಗೆ ಸಹಕಾರ ನೀಡಿದ್ದರೂ ವೇಗವಾಗಿ ಕಾಮಗಾರಿ ನಡೆದಿಲ್ಲ. ಭೂಕುಸಿತ ತಡೆಗೆ ಸುರಕ್ಷಿತ ಕ್ರಮವನ್ನೂ ಅನುಸರಿಸಿಲ್ಲ’ ಎಂದರು.

ಮನೆಯಿಂದಲೇ ಭೂದಾಖಲೆ ಪಡೆಯಿರಿ

‘ಭೂಸುರಕ್ಷಾ ಯೋಜನೆ ಮೂಲಕ ಕಂದಾಯ ದಾಖಲೆಗಳ ಗಣಕೀಕರಣ ನಡೆಯುತ್ತಿದೆ. ಸದ್ಯದಲ್ಲಿಯೇ ಭೂಸುರಕ್ಷಾ ಪೋರ್ಟಲ್ ಮೂಲಕ ದಾಖಲೆಗಳನ್ನು ಆನ್ಲೈನ್ ಮೂಲಕ ಪಡೆಯಲು ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಲಾಗುತ್ತಿದೆ’ ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಂದಾಯ ಇಲಾಖೆ ಪ್ರಗತಿ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ‘ಜನರು ಮನೆಯಿಂದಲೇ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ದಾಖಲೆ ಪಡೆಯಬಹುದು. ತಾಲ್ಲೂಕು ಕೇಂದ್ರಕ್ಕೆ ಅಲೆದಾಡುವುದು ಇದರಿಂದ ತಪ್ಪಲಿದೆ’ ಎಂದರು. ‘ಜಿಲ್ಲೆಯಲ್ಲಿ ಭೂದಾಖಲೆಗಳ ಗಣಕೀಕರಣ ಪ್ರಕ್ರಿಯೆ ಮೂರು ತಾಲ್ಲೂಕು ಹೊರತುಪಡಿಸಿದರೆ ಉಳಿದೆಡೆ ಉತ್ತಮ ಪ್ರಗತಿ ಕಂಡಿದೆ. ಪೌತಿ ಖಾತೆ ಆಂದೋಲನದ ಮೂಲಕ ಜಿಲ್ಲೆಯಲ್ಲಿ ಮೃತರ ಹೆಸರಿನಲ್ಲಿರುವ 1.90 ಲಕ್ಷ ಜಮೀನುಗಳನ್ನು ವಾರಸುದಾರರ ಹೆಸರಿಗೆ ವರ್ಗಾಯಿಸುವ ಅಭಿಯಾನ ಆರಂಭಗೊಂಡಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.