ಕುಮಟಾ(ಉತ್ತರ ಕನ್ನಡ ಜಿಲ್ಲೆ): ತಾಲ್ಲೂಕಿನ ಹೆಗಡೆ ಗ್ರಾಮ ಪಂಚಾಯಿತಿ ಕಸ ವಿಲೇವಾರಿ ಘಟಕಕ್ಕೆ ಆಕಸ್ಮಿಕ ಬೆಂಕಿ ತಗುಲಿ ಸಂಗ್ರಹಿಸಿಟ್ಟಿದ್ದ ಕಸ ಸುಟ್ಟು ಭಸ್ಮವಾದ ಪ್ರಕರಣ ಬುಧವಾರ ಸಂಭವಿಸಿದೆ.

‘ಕಸ ವಿಲೇವಾರಿ ಘಟಕಕ್ಕೆ ರಜೆ ಇದ್ದ ಕಾರಣ ಘಟಕದ ಹೊರ ಆವರಣದ ಗೇಟಿಗೆ ಬೀಗ ಹಾಕಿದ್ದಾಗ ವಿದ್ಯುತ್ ಶಾರ್ಟ್ ಸರ್ಕಿಟ್ನಿಂದ ಬೆಂಕಿ ತಗುಲಿ ಅನಾಹುತ ಸಂಭವಿಸಿದೆ’ ಎಂದು ಹೆಗಡೆ ಗ್ರಾಮ ಪಂಚಾಯಿತಿ ಪಿ.ಡಿ.ಒ ವೆಂಕಟ್ರಮಣ ಪಟಗಾರ ತಿಳಿಸಿದ್ದಾರೆ.

‘ಗೋಕರ್ಣ ಪಂಚಾಯಿತಿ ಹೆಚ್ಚುವರಿ ಕರ್ತವ್ಯದಲ್ಲಿದ್ದಾಗ ವಿಷಯ ತಿಳಿದು ತಕ್ಷಣ ಕುಮಟಾ ಅಗ್ನಿಶಾಮಕ ಠಾಣೆಗೆ ಕರೆ ಮಾಡಿ ಮಾಹಿತಿ ನೀಡಿದೆ. ಅಗ್ನಿಶಾಮಕ ಠಾಣೆ ಸಿಬ್ಬಂದಿ ಆಗಮಿಸಿ ಬೆಂಕಿ ಆರಿಸಿದ್ದಾರೆ. ಸಂಗ್ರಹಿಸಿಟ್ಟ ಕಸ ಸುಟ್ಟು ಹೋಗಿದ್ದರ ಹೊರತಾಗಿ ಬೇರೆ ಯಾವುದೇ ಹಾನಿಯಾಗಿಲ್ಲ’ ಎಂದು ಅವರು ಮಾಹಿತಿ ನೀಡಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260514-22-1323999636

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.