ಕುಮಟಾ: ‘ಕುಮಟಾ ಪೊಲೀಸ್ ಠಾಣೆ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ನಿಯಮ ಉಲ್ಲಂಘನೆ ನಿಯಂತ್ರಿಸಲು ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ಇಲಾಖೆ ನೀಡಿದ ‘ಬಾಡಿ ಕ್ಯಾಮೆರಾ’ ಬಳಕೆ ಮಾಡದೆ ವಾಹನ ಸವಾರರ ಮೇಲೆ ದೌರ್ಜನ್ಯ ಎಸಗುತ್ತಿದ್ದಾರೆ’ ಎಂದು ಕಾಂಗ್ರೆಸ್ ಮುಖಂಡ ಮಂಜುನಾಥ ಎಲ್. ನಾಯ್ಕ ಆರೋಪಿಸಿದರು.

ಪಟ್ಟಣದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಪೊಲೀಸ್ ನಿಯಮಗಳ ಕೈಪಿಡಿಯ ಪ್ರಕಾರ ಸಾರ್ವಜನಿಕರ ಗೌರವಕ್ಕೆ ಧಕ್ಕೆ ಬಾರದಂತೆ ಪೊಲೀಸ್ ಸಿಬ್ಬಂದಿ ನಡೆದುಕೊಳ್ಳಬೇಕು. ಹೆಲ್ಮೆಟ್ ಧರಿಸದ ಯುವಕ ತಾಲ್ಲೂಕಿನ ಅಳ್ವೆಕೋಡಿಯ ಅಕ್ಷಯ ನಾಯ್ಕ ಎಂಬುವರಿಗೆ ಕುಮಟಾ ಠಾಣೆಯ ಎಸ್ಐ ಖಾದರ್ ಬಾಷಾ ಅವರು ಈಚೆಗೆ ಸಾಕಷ್ಟು ದಂಡ ವಿಧಿಸಿ, ಬೈದು ದೌರ್ಜನ್ಯ ನಡೆಸಿದ್ದಾರೆ’ ಎಂದರು.

‘ತಪ್ಪು ಮಾಡಿದ ಪೊಲೀಸ್ ಅಧಿಕಾರಿ ವಿರುದ್ಧ ತಕ್ಷಣ ಕ್ರಮಕ್ಕೆ ಮುಂದಾಗದಿದ್ದರೆ ಹೋರಾಟ ನಡೆಸುವುದು ಅನಿವಾರ್ಯ’ ಎಂದರು.

ಅಕ್ಷಯ ನಾಯ್ಕ ಮಾತನಾಡಿ, ‘ಸಾರ್ವಜನಿಕರ ಎದುರು ಬೈದು ನನ್ನ ಮೇಲೆ ದೌರ್ಜನ್ಯ ನಡೆಸಿದ ಎಸ್ಐ ವಿರುದ್ಧ ಜಿಲ್ಲಾ ಪೊಲೀಸ್ ವರಿಷ್ಠರಿಗೆ ದೂರು ನೀಡಿದ್ದೇನೆ’ ಎಂದರು.

ಸಣ್ಣ ಕೈಗಾರಿಕೆಗಳ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಹರೀಶ ಶೇಟ್, ಗಜು ನಾಯ್ಕ, ಸಂದೇಶ ಶೆಟ್ಟಿ, ಈಶ್ವರ ಮುಕ್ರಿ, ಸುರೇಶ ಹರಿಕಾಂತ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260512-20-1681450947

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.