ಕುಮಟಾ: ತಾಲ್ಲೂಕಿನ ಕೋಡ್ಕಣಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಶಿಹಿತ್ತಲಗುತ್ತಲ ಗ್ರಾಮಸ್ಥರು ಕುಡಿಯುವ ನೀರು ಸೇರಿದಂತೆ ಮುಂತಾದ ಮೂಲ ಸೌಲಭ್ಯಗಳನ್ನು ಒದಗಿಸಬೇಕು ಎಂದು ಸ್ಥಳೀಯರು ಬುಧವಾರ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ಶಶಿಹಿತ್ತಲ ಗ್ರಾಮಕ್ಕೆ ಸ್ಥಳೀಯ ಗ್ರಾಮ ಪಂಚಾಯಿತಿಯಿಂದ ಎರಡು ದಿನಕೊಮ್ಮೆ ನೀರು ಪೂರೈಸುತ್ತಿದ್ದಾರೆ. ಕಾರಣ 2 ಕಿ.ಮೀ ದೂರ ಕ್ರಮಿಸಿ ಕುಡಿಯುವ ನೀರು ತರುವ ದುಸ್ಥಿತಿ ನಿರ್ಮಾಣವಾಗಿದೆ. ಕುಡಿಯುವ ನೀರಿನ ಟ್ಯಾಂಕ್ ಕೂಡ ಹಲವು ವರ್ಷಗಳಿಂದ ಸ್ವಚ್ಛಗೊಳಿಸಲಿಲ್ಲ. ಎಂದು ಗ್ರಾಮಸ್ಥರು ಅವಲತ್ತುಕೊಂಡರು.

ಜನರ ಸಮಸ್ಯೆ ಆಲಿಸಿದ ತಹಶೀಲ್ದಾರ್ ಕೃಷ್ಣ ಕಾಮಕರ್, ‘ಬೇಸಿಗೆಯಲ್ಲಿ ನಲ್ಲಿ ನೀರು ಸಾಲದಿದ್ದರೆ ಟ್ಯಾಂಕರ್ ಮೂಲಕ ಕುಡಿಯುವ ನೀರು ಪೂರೈಸಲಾಗುವುದು’ ಎಂದು ಭರವಸೆ ನೀಡಿದರು.

ಈ ವೇಳೆ ತಾಲ್ಲೂಕು ಪಂಚಾಯಿತಿ ಇಒ ಆರ್.ಎಲ್. ಭಟ್ಟ, ಸಿಪಿಐ ಕೆ.ಯೋಗೆಶ್, ಗ್ರಾಮ ಪಂಚಾಯಿತಿ ಆಳಿತಾಧಿಕಾರಿ ವಿನಾಯಕ ವೈದ್ಯ ಇದ್ದರು.

ಪ್ರತಿಭಟನೆಯಲ್ಲಿ ನಾರಾಯಣ ನಾಯ್ಕ, ಅಣ್ಣಪ್ಪ ನಾಯ್ಕ, ವೆಂಕಟೇಶ ನಾಯ್ಕ, ಗಿರಿಶ ಅಂಬಿಗ, ತಮ್ಮಣ್ಣ ಅಂಬಿಗ, ಬಾಬು ನಾಯ್ಕ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260417-20-1007474690

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.