ಕುಮಟಾ: ತಾಲ್ಲೂಕಿನ ಅಡಿಗುಂಡಿಯ ಹಿಂದು ಮುಕ್ರಿ ಶಿಶು ವರ್ಗ ಸಮಾಜದ ವತಿಯಿಂದ ಮೇ 9ರಂದು ಬೆಳಿಗ್ಗೆ 11.30 ಗಂಟೆಗೆ ಸಮೀಪದ ಚಂದಾವರ ಹನುಮಂತ ದೇವಾಲಯ ಆವರಣದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ 135ನೇ ಜನ್ಮ ದಿನೋತ್ಸವ, ಸಾಧಕರಿಗೆ ಸನ್ಮಾನ, ಚಿತ್ರಕಲಾ ಸ್ಪರ್ಧೆ ಹಾಗೂ ಸತ್ಯನಾರಾಯಣ ಪೂಜೆ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಕಾರ್ಯಕ್ರಮ ಸಂಘಟಕ ಗಣಪತಿ ಅಡಿಗುಂಡಿ ತಿಳಿಸಿದ್ದಾರೆ.

ಮೀನುಗಾರಿಕೆ, ಬಂದರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಉದ್ಘಾಟಿಸುವರು. ಕೆ.ಪಿ.ಸಿ.ಸಿ ಪ್ರಧಾನ ಆರ್ಯದರ್ಶಿ ಸುಷ್ಮಾ ರಾಜಗೋಪಾಲರೆಡ್ಡಿ, ರಾಜ್ಯ ಮಹಿಳಾ ಕಾಂಗ್ರೆಸ್ ಕಾರ್ಯದರ್ಶಿ ಬೀನಾ ವೈದ್ಯ, ಶಿಕ್ಷಕ ರವೀಂದ್ರ ಭಟ್ಟ ಸೂರಿ, ದಸಂಸ ರಾಜ್ಯ ಸಮಿತಿ ಸಂಚಾಲಕ ತುಳಸಿದಾಸ ಪಾವಸ್ಕರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭುವನ ಭಾಗ್ವತ, ಹನುಮಂತ ದೇವಾಲಯ ಮೊಕ್ತೇಸರ ಎಂ.ಕೆ. ಪಟಗಾರ, ಜೆ.ಡಿ.ಎಸ್ ಜಿಲ್ಲಾ ಘಟಕದ ಅಧ್ಯಕ್ಷ ಸೂರಜ ನಾಯ್ಕ ಸೋನಿ, ಬರಹಗಾರ ಶ್ರೀಧರ ಗೌಡ ಉಪ್ಪಿನಗಣಪತಿ, ಕರವೇ ಜಿಲ್ಲಾಧ್ಯಕ್ಷ ಭಾಸ್ಕರ ಪಟಗಾರ, ವಕೀಲರಾದ ಉದಯ ನಾಯ್ಕ, ವಿನಾಯಕ ಪಟಗರಾ, ಸಾಮಾಜಿಕ ಕಾರ್ಯಕರ್ತ ನಿತ್ಯಾನಂದ ನಾಯ್ಕ ಪಾಲ್ಗೊಳ್ಳುವರು.

ಸಾಧನೆ ಮಾಡಿರುವ ವಿದ್ಯಾರ್ಥಿಗಳು, ಕಲಾವಿದರು, ನಿವೃತ್ತ ಪೊಲೀಸ್ ಅಧಿಕಾರಿ ಎನ್.ಆರ್. ಮುಕ್ರಿ, ಸಂಶೋಧಕ ಸಿ.ಪಿ. ಶಿವಚಂದ್ರ, ಕಲಾವಿದ ವಿನಾಯಕ ನವಿಲಗೋಣ ಅವರನ್ನು ಗೌರವಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-20-1820664951

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.