ಅಂಕೋಲಾ: ಚಲಿಸುತ್ತಿದ್ದ ಬಸ್ನಲ್ಲಿ ಏಕಾಏಕಿ ಎಂಜಿನ್ನಿಂದ ದಟ್ಟ ಹೊಗೆ ಬರಲಾರಂಭಿಸಿದ ಪರಿಣಾಮವಾಗಿ, ಪ್ರಯಾಣಿಕರು ಆತಂಕಕ್ಕೊಳಗಾದ ಘಟನೆ ಕುಮಟಾ–ಅಂಕೋಲಾ ಮಾರ್ಗದಲ್ಲಿ ಭಾನುವಾರ ಸಂಜೆ ಸಂಭವಿಸಿದೆ.

ಸಂಜೆ 4.30ರ ವೇಳೆಗೆ ಕುಮಟಾದಿಂದ ಅಂಕೋಲಾಕ್ಕೆ ಹೊರಟಿದ್ದ ರಾಜ್ಯ ರಸ್ತೆ ಸಾರಿಗೆ ಬಸ್ ಕುಮಟಾ ಬಸ್ ನಿಲ್ದಾಣದಿಂದ ಕೇವಲ 500 ಮೀಟರ್ ದೂರ ಸಾಗುತ್ತಿದ್ದಂತೆಯೇ ಎಂಜಿನ್ ಭಾಗದಿಂದ ಹೊಗೆ ಎದ್ದಿದ್ದು, ಕೆಲವೇ ಕ್ಷಣಗಳಲ್ಲಿ ಬಸ್ ಒಳಗೆ ಹರಡತೊಡಗಿತು. ಇದರಿಂದ ಪ್ರಯಾಣಿಕರಲ್ಲಿ ಭೀತಿ ಉಂಟಾಗಿ, ಕೆಲವರು ತುರ್ತಾಗಿ ಕೆಳಗಿಳಿಯಲು ಮುಂದಾದರು.

ಪ್ರಯಾಣಿಕರನ್ನು ಸಮಾಧಾನಪಡಿಸಿದ ಚಾಲಕ ತಕ್ಷಣ ಬಸ್ ನಿಲ್ಲಿಸಿ ನೀರು ಹಾಕಿ ಎಂಜಿನ್ ತಂಪಾಗಿಸಲು ಯತ್ನಿಸಿದರು. ಆದರೂ ಸಮಸ್ಯೆ ಸಂಪೂರ್ಣ ನಿವಾರಣೆ ಆಗಲಿಲ್ಲ. ಕುಮಟಾದಿಂದ ಅಂಕೋಲಾಕ್ಕೆ ಬರುವವರೆಗೂ ಮಧ್ಯದಲ್ಲಿ ಹಲವು ಬಾರಿ ಬಸ್ ನಿಲ್ಲಿಸಿ ನೀರು ಹಾಕುತ್ತಲೇ ಪ್ರಯಾಣ ಮುಂದುವರಿಸಲಾಯಿತು. ಆತಂಕದ ನಡುವೆಯೇ ಬಸ್ ಅಂಕೋಲಾ ಬಸ್ ನಿಲ್ದಾಣ ತಲುಪಿದಾಗ ಪ್ರಯಾಣಿಕರು ನಿಟ್ಟುಸಿರು ಬಿಟ್ಟರು. ಅಂಕೋಲಾ ಸಾರಿಗೆ ಘಟಕದಲ್ಲಿ ಸಂಚರಿಸುತ್ತಿರುವ ಅನೇಕ ಬಸ್ಗಳು ಹಳೆಯದಾಗಿದ್ದು, ದುರಸ್ತಿಗೆ ಬಂದಿವೆ. ತಕ್ಷಣ ಅಧಿಕಾರಿಗಳು ಕ್ರಮ ಕೈಗೊಂಡು ಬಸ್ಗಳ ಸುರಕ್ಷತೆ ಬಗ್ಗೆ ಖಚಿತಪಡಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260428-20-370358820

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.