ಕಾರವಾರ: ‘ಕಾರ್ಮಿಕ ವಿಮೆ ಕಾರ್ಡ್ದಾರರ ಸಂಖ್ಯೆ ಕಡಿಮೆ ಇರುವ ಕಾರಣಕ್ಕೆ ಉತ್ತರ ಕನ್ನಡ ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಸೂಪರ್ ಸ್ಪೆಷಾಲಿಟಿ ಸೌಲಭ್ಯದ ಇಎಸ್ಐ ಆಸ್ಪತ್ರೆ ಸ್ಥಾಪನೆ ಸಾಧ್ಯವಾಗುತ್ತಿಲ್ಲ. ನಿಯಮ ಸಡಿಲಿಸುವಂತೆ ಕೇಂದ್ರ ಸರ್ಕಾರ ಸರ್ಕಾರಕ್ಕೆ ಮನವಿ ಮಾಡಲಾಗಿದೆ’ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ಹೇಳಿದರು.

ಇಲ್ಲಿನ ಅಜ್ವಿ ಓಷನ್ ಸಭಾಂಗಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ವಿವಿಧ ವಲಯಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಮತ್ತು ಅರಿವು ಮೂಡಿಸುವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

‘ಉತ್ತರ ಕನ್ನಡದಲ್ಲಿ ಕೇವಲ 20,300 ವಿಮೆ ಕಾರ್ಡ್ದಾರರು ಇದ್ದಾರೆ. ಇಎಸ್ಐ ಆಸ್ಪತ್ರೆ ಸ್ಥಾಪನೆಗೆ ಕನಿಷ್ಠ 50 ಸಾವಿರ ಕಾರ್ಡ್ ಇರಬೇಕು ಎಂಬ ನಿಯಮವಿದೆ. ಪ್ರತಿ ಎರಡು ಜಿಲ್ಲೆಗೆ ಅನುಕೂಲವಾಗುವಂತೆ ಮಧ್ಯವರ್ತಿ ಸ್ಥಳಗಳಲ್ಲಿ ಆಸ್ಪತ್ರೆ ಸ್ಥಾಪಿಸುವಂತೆ ಕೇಂದ್ರ ಸಚಿವರಿಗೆ ಮನವರಿಕೆ ಮಾಡಿದ್ದೇನೆ’ ಎಂದರು.

‘20ಕ್ಕಿಂತ ಹೆಚ್ಚು ಉದ್ಯೋಗಿಗಳಿರುವ ಕಂಪನಿಗಳು ಗ್ರ್ಯಾಚ್ಯುಟಿ ಕಡ್ಡಾಯವಾಗಿ ನೀಡಬೇಕು. ಜೊತೆಗೆ ವಿಮೆ ಸೌಲಭ್ಯ ಕಲ್ಪಿಸಬೇಕು ಎಂಬ ನಿಯಮಾವಳಿ ರೂಪಿಸಲಾಗಿದೆ. ರಾಜ್ಯದಲ್ಲಿನ ಅಸಂಘಟಿತ ಕಾರ್ಮಿಕರಿಗೆ ಹೆಚ್ಚಿನ ಸಂಖ್ಯೆಯ ಸಾಮಾಜಿಕ ಭದ್ರತೆ ಯೋಜನೆಗಳನ್ನು ಒದಗಿಸಲು ಪೆಟ್ರೋಲ್, ಡೀಸೆಲ್ ಮೇಲೆ ವಿಧಿಸುತ್ತಿರುವ ಸುಂಕ ಏರಿಕೆ ಮಾಡಿ, ಅದರಲ್ಲಿನ ಸ್ವಲ್ಪ ಮೊತ್ತವನ್ನು ಅಸಂಘಟಿತ ಕಾರ್ಮಿಕರ ಮಂಡಳಿಗೆ ನೀಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಿದ್ದೇನೆ’ ಎಂದರು.

ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ, ‘ಕಾರ್ಮಿಕ ಇಲಾಖೆ ಎಂದರೆ ಕಟ್ಟಡ ಕಾರ್ಮಿಕರಿಗೆ ಸೀಮಿತ ಎಂಬ ಭಾವನೆ ಈ ಹಿಂದೆ ಇತ್ತು. ಆದರೆ, ಸಂತೋಷ ಲಾಡ್ ಸಚಿವರಾದ ಬಳಿಕ ಅಸಂಘಟಿತ ವಲಯಗಳ ಕಾರ್ಮಿಕರಿಗೆ ಸೌಲಭ್ಯ ಒದಗಿಸುವ ಮೂಲಕ ಕಾರ್ಮಿಕರ ಜೀವನ ಮಟ್ಟ ಸುಧಾರಿಸಲು ಮುಂದಾಗಿದ್ದಾರೆ’ ಎಂದು ತಿಳಿಸಿದರು.

ಅಧ್ಯಕ್ಷತೆ ವಹಿಸಿದ್ದ ಶಾಸಕ ಸತೀಶ ಸೈಲ್, ‘ಕಾರ್ಮಿಕರ ಮಕ್ಕಳಿಗೆ ಕಾರವಾರದಲ್ಲಿ ಶಾಲೆ ಸ್ಥಾಪಿಸುವ ಅಗತ್ಯವಿದೆ. ಕೈಗಾ ಅಣು ಸ್ಥಾವರ, ಕದಂಬ ನೌಕಾನೆಲೆ ಇರುವ ಪ್ರದೇಶದಲ್ಲಿ ಸಾವಿರಾರು ಕಾರ್ಮಿಕರಿದ್ದಾರೆ. ಅವರ ಮಕ್ಕಳಿಗೆ ಅನುಕೂಲವಾಗಿದೆ. ಕನಿಷ್ಠ ಕೂಲಿ ಕಾಯ್ದೆ ಸರಿಯಾಗಿ ಅನುಷ್ಠಾನ ಆಗುತ್ತಿಲ್ಲ. ಹೊರಗುತ್ತಿಗೆ ನೌಕರರು, ಕಾರ್ಮಿಕರಿಗೆ ಅನ್ಯಾಯ ಆಗುತ್ತಿದೆ’ ಎಂದರು.

ಕೇರಳದ ಮಂಜೇಶ್ವರ ಶಾಸಕ ಎಂ.ಕೆ.ಅಶ್ರಫ್, ನಗರಸಭೆ ಅಧ್ಯಕ್ಷ ರವಿರಾಜ ಅಂಕೋಲೇಕರ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಸತೀಶ ನಾಯ್ಕ, ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ, ಜಿಲ್ಲಾ ಪಂಚಾಯಿತಿ ಸಿಇಒ ಡಾ.ದಿಲೀಷ್ ಶಶಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್, ಕಾಂಗ್ರೆಸ್ ಮುಖಂಡರಾದ ವಿ.ಎಸ್.ಪಾಟೀಲ, ಸಾಯಿ ಗಾಂವಕರ, ನಿವೇದಿತ ಆಳ್ವ, ಮಂಜುನಾಥ ನಾಯ್ಕ ಇದ್ದರು.

ಕಾರ್ಮಿಕ ಇಲಾಖೆ ಜಂಟಿ ಆಯುಕ್ತ ನಾಗೇಶ ಡಿ.ಜಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ಕಾರ್ಮಿಕ ಅಧಿಕಾರಿ ಲಲಿತಾ ಸಾತೇನಹಳ್ಳಿ ಸ್ವಾಗತಿಸಿದರು.

ಕಾರ್ಮಿಕರ ಮಕ್ಕಳು ಕಾರ್ಮಿಕರಾಗಿ ಮುಂದುವರಿಯದೆ ಸಮಾಜದಲ್ಲಿ ಉನ್ನತ ಸ್ಥಾನಕ್ಕೆ ಏರಲು ಪೂರಕವಾಗುವಂತೆ ಕಾರ್ಮಿಕ ಇಲಾಖೆಯಿಂದ ಸಾಮಾಜಿಕ ಭದ್ರತೆ ಸೌಲಭ್ಯ ನೀಡಲಾಗುತ್ತಿದೆ
ಮಂಕಾಳ ವೈದ್ಯ ಜಿಲ್ಲಾ ಉಸ್ತುವಾರಿ ಸಚಿವ

‘ರಾಜ್ಯದ ಆರ್ಥಿಕತೆ ಸುಧಾರಿಸಿದೆ’

‘ಗ್ಯಾರಂಟಿ ಯೋಜನೆ ಸರ್ಕಾರದ ಬೊಕ್ಕಸ ದಿವಾಳಿ ಮಾಡಿಲ್ಲ. ಜನರ ಆರ್ಥಿಕ ಮಟ್ಟ ಸುಧಾರಿಸಿದೆ. ಈ ಕಾರಣದಿಂದಲೇ ಕರ್ನಾಟಕ ತಲಾ ಆದಾಯದಲ್ಲಿ ದೇಶದಲ್ಲಿ ಮೊದಲ ಸ್ಥಾನದಲ್ಲಿದೆ’ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ಹೇಳಿದರು. ‘ಕೇಂದ್ರ ಸರ್ಕಾರದ ನೋಟು ಅಮಾನ್ಯೀಕರಣ ತೆರಿಗೆ ಹೆಚ್ಚಳ ನೀತಿ ಜನಸಾಮಾನ್ಯರನ್ನು ಸಂಕಷ್ಟಕ್ಕೆ ತಳ್ಳಿತು. ಮುಂದುವರಿದ ದೇಶಗಳಿಗೆ ಹೋಲಿಸಿದರೆ ದೇಶದ ಆರ್ಥಿಕ ಸ್ಥಿತಿ ಇನ್ನೂ ಹಿಂದಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ನಾಯಕರು ಸುಳ್ಳು ಭಾಷಣದ ಮೂಲಕ ಜನರನ್ನು ಮರಳು ಮಾಡುತ್ತಿದ್ದಾರೆ. ಚುನಾವಣೆ ಬಂದಾಗ ಅಭಿವೃದ್ಧಿ ವಿಚಾರ ಚರ್ಚೆ ಮಾಡುವ ಬದಲು ಹಿಂದೂಗಳು ಅಪಾಯದಲ್ಲಿದ್ದಾರೆ ಎಂದು ಬಿಂಬಿಸುತ್ತಾರೆ. 11 ವರ್ಷದಿಂದ ಅಧಿಕಾರದಲ್ಲಿರುವ ಬಿಜೆಪಿ ನೇತೃತ್ವದ ಸರ್ಕಾರ ಹಿಂದೂಗಳಿಗಾದರೂ ಏನು ಮಾಡಿದೆ ಎಂಬುದನ್ನು ಸ್ಪಷ್ಟಪಡಿಸಲಿ. 25 ಲಕ್ಷ ಹಿಂದೂಗಳು ದೇಶ ತೊರೆದು ವಿದೇಶದಲ್ಲಿ ನೆಲೆಸಿದ್ದಕ್ಕೆ ಕಾರಣ ಹೇಳಲಿ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.