ಹೊನ್ನಾವರ ತಾಲ್ಲೂಕಿನ ಚಿಕ್ಕನಕೋಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಂಡಿಬೈಲ್‌ನಲ್ಲಿ ಮನೆಯೊಂದರ ಹಿಂದೆ ಗುಡ್ಡ ಕುಸಿದಿದೆ
ಜನರ ಜೀವ ಹಾಗೂ ಆಸ್ತಿ-ಪಾಸ್ತಿ ರಕ್ಷಣೆಗೆ ಆಡಳಿತ ವ್ಯವಸ್ಥೆ ಮುಂಜಾಗ್ರತಾ ಕ್ರಮವಾಗಿ ನಿಯಮಾನುಸಾರ ಧರೆ ಪಕ್ಕದ ನಿವಾಸಿಗಳಿಗೆ ನೋಟಿಸ್ ಜಾರಿಗೊಳಿಸುತ್ತಿದೆ. ಜನರಿಗೆ ಆತಂಕ ಬೇಡ
ಪ್ರವೀಣ ಕರಾಂಡೆ ತಹಶೀಲ್ದಾರ್
ನೋಟಿಸ್‌ನಲ್ಲಿ ಏನಿದೆ?
‘ತಾಲ್ಲೂಕಿನಲ್ಲಿ ನಿರೀಕ್ಷೆಗಿಂತ ಹೆಚ್ಚು ಮಳೆಯಾಗುತ್ತಿರುವುದರಿಂದ ತಾವು ವಾಸಿಸುವ ಮನೆಯ ಹಿಂದಿನ ಧರೆ ಕುಸಿದು ಅನಾಹುತವಾಗುವ ಸಂಭವ ಕಂಡುಬಂದಿದ್ದು ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಡಳಿತದ ನಿರ್ದೇಶನದಂತೆ ಸುರಕ್ಷಿತ ಸ್ಥಳಕ್ಕೆ ತೆರಳಲು ಅಥವಾ ಕಾಳಜಿ ಕೇಂದ್ರಕ್ಕೆ ಬರಲು ಸೂಚಿಸಲಾಗಿದೆ’ ಎನ್ನುವ ಸಾಮಾನ್ಯ ಒಕ್ಕಣಿಕೆಯುಳ್ಳ ನೋಟಿಸ್ ಅನ್ನು ಧರೆ ಸಮೀಪದ ನಿವಾಸಿಗಳಿಗೆ ನೀಡಲಾಗುತ್ತಿದೆ.