ಯಲ್ಲಾಪುರ: 'ಕನ್ನಡ ಭಾಷೆ, ಇಲ್ಲಿನ ನೆಲ-ಜಲಕ್ಕೆ ಯಾವುದೇ ರೀತಿಯ ತೊಂದರೆ ಆಗದಂತೆ ನೋಡಿಕೊಳ್ಳುವುದು ನಮ್ಮ ಜವಾಬ್ದಾರಿ. ಅದೇ ನಾವು ಈ ನೆಲಕ್ಕೆ ಸಲ್ಲಿಸಬೇಕಾದ ಗೌರವ' ಎಂದು ಶಾಸಕ ಶಿವರಾಮ ಹೆಬ್ಬಾರ ಹೇಳಿದರು.

ಪಟ್ಟಣದ ಗಾಂಧಿ ಕುಟೀರದಲ್ಲಿ ಶನಿವಾರ ನಡೆದ ಕನ್ನಡ ರಾಜ್ಯೋತ್ಸವದ ಸಭಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

'ಕನ್ನಡ ಎಲ್ಲರ ಆಡು ಭಾಷೆಯಾಗಬೇಕು. ಆಗ ಮಾತ್ರ ಅದು ಉಳಿಯುತ್ತದೆ, ಬೆಳೆಯುತ್ತದೆ' ಎಂದರು.

ತಹಶೀಲ್ದಾರ ಚಂದ್ರಶೇಖರ ಹೊಸಮನಿ ಮಾತನಾಡಿ, 'ಆಚರಣೆಗಳು ಕೇವಲ ಸಾಂಕೇತಿಕವಾಗದೇ ನಮ್ಮ ಬದ್ದತೆಯ ಪ್ರತೀಕವಾಗಬೇಕು' ಎಂದರು.

ವಿದ್ಯಾರ್ಥಿಗಳಿಂದ ಪಟ್ಟಣದ ಪ್ರಮುಖ ರಸ್ತೆಯಲ್ಲಿ ಮೆರವಣಿಗೆ ನಡೆಯಿತು. ಮೆರವಣಿಗೆಯಲ್ಲಿ ವಿವಿಧ ಶಾಲೆಗಳ ಮತ್ತು ಇಲಾಖೆಗಳ ಸ್ತಬ್ಧಚಿತ್ರಗಳು ಗಮನ ಸೆಳೆದವು. ಮೊರಾರ್ಜಿ ಶಾಲೆಯ ವಿದ್ಯಾರ್ಥಿಗಳು ನಾಡಗೀತೆ ಮತ್ತು ರೈತ ಗೀತೆ ಹಾಡಿದರು,

ಬಿಇಒ ರೇಖಾ ನಾಯ್ಕ ಸ್ವಾಗತಿಸಿದರು. ಶಿಕ್ಷಣ ಇಲಾಖೆ ಅಧಿಕಾರಿ ಪ್ರಶಾಂತ ಜಿ.ಎನ್ ವಂದಿಸಿದರು. ಪಟ್ಟಣ ಪಂಚಾಯತಿ ಉಪಾಧ್ಯಕ್ಷ ಅಮಿತ್ ಅಂಗಡಿ, ತಾಲ್ಲೂಕು ಪಂಚಾಯಿತಿ ಇಒ ರಾಜೇಶ್ ಧನವಾಡಕರ್, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಉಲ್ಲಾಸ್ ಶಾನಭಾಗ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.