ಬುಧವಾರ, 22 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಮಪತ್ರ ಸಲ್ಲಿಕೆ ಭರಾಟೆ: ಇಂದು ಕೊನೇ ದಿನ

Published 18 ಏಪ್ರಿಲ್ 2024, 18:35 IST
Last Updated 18 ಏಪ್ರಿಲ್ 2024, 18:35 IST
ಅಕ್ಷರ ಗಾತ್ರ

ಪ್ರಜಾವಾಣಿ ವಾರ್ತೆ

ಕಾರವಾರ: ಉತ್ತರ ಕನ್ನಡ ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸಲು ಅಭ್ಯರ್ಥಿಗಳಲ್ಲಿ ಈ ಬಾರಿ ಹೆಚ್ಚಿನ ಉತ್ಸಾಹ ಕಂಡುಬಂದಿದ್ದು ಗುರುವಾರ ಐದು ಮಂದಿ ನಾಮಪತ್ರ ಸಲ್ಲಿಸಿದರು.

ಹಿಂದಿನ ಎರಡು ಚುನಾವಣೆಗಳಲ್ಲಿ ಅಭ್ಯರ್ಥಿಗಳ ಸಂಖ್ಯೆ ಎರಡಂಕಿ ಇರಲಿಲ್ಲ. ನಾಮಪತ್ರ ಸಲ್ಲಿಕೆಗೆ ಕೊನೇ ದಿನಕ್ಕೆ ಒಂದು ದಿನ ಬಾಕಿ ಇರುವಾಗಲೇ 17 ಮಂದಿ ನಾಮಪತ್ರ ಸಲ್ಲಿಸಿದ್ದಾರೆ.

ರಾಷ್ಟ್ರೀಯ ಜನ ಸಂಭಾವನಾ ಪಕ್ಷದಿಂದ ಕುಮಟಾದ ನಾಗರಾಜ ಶ್ರೀಧರ್ ಶೇಟ್, ಪಕ್ಷೇತರ ಅಭ್ಯರ್ಥಿಯಾಗಿ ಉಮೇಶ್ ದೈವಜ್ಞ, ಪ್ರಮೋದ್ ಮಡಗಾಂವಕರ್, ಅರವಿಂದ ಗೌಡ ಮತ್ತು ಸುಜಯ್ ಸುಧೀರ್ ಗೋಕರ್ಣ ತಮ್ಮ ನಾಮಪತ್ರಗಳನ್ನು ಸಲ್ಲಿಸಿದ್ದಾರೆ.

ಈವರೆಗೆ 17 ಮಂದಿಯಿಂದ ಒಟ್ಟು 29 ನಾಮಪತ್ರಗಳು ಸಲ್ಲಿಕೆಯಾದಂತಾಗಿದೆ. ಕೊನೇ ದಿನ ಎಷ್ಟು ನಾಮಪತ್ರ ಸಲ್ಲಿಕೆಯಾಗಬಹುದು ಎಂಬ ಕುತೂಹಲವೂ ಇದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT