ಗೋಕರ್ಣ: ಕುಮಟಾ ತಾಲ್ಲೂಕಿನ ಬರ್ಗಿಯಲ್ಲಿ ಗುರುವಾರ ಬೆಳಗಿನ ಜಾವ ರಸ್ತೆ ಬದಿ ಕೆಟ್ಟು ನಿಂತಿದ್ದ ಕಾರಿನಲ್ಲಿದ್ದ ಸಾವಿರಾರು ರೂಪಾಯಿ ಮೌಲ್ಯದ ಮದ್ಯ ಮತ್ತು ಅದನ್ನು ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಸ್ಥಳೀಯ ಯುವಕರು ಪೊಲೀಸರ ವಶಕ್ಕೆ ನೀಡಿದ್ದಾರೆ.

ಸ್ಥಳೀಯ ಬಾರ್‌ನಲ್ಲಿ ಕೆಲಸ ಮಾಡುವ ಬಂಕಿಕೊಡ್ಲ ಜನಾರ್ದನ ರೆಡ್ಡಿ (42) ಹಾಗೂ ಕಾರು ಚಾಲಕ ಈಶ್ವರ ನಾರಾಯಣ ನಾಯ್ಕ (48) ಪೊಲೀಸರ ವಶದಲ್ಲಿ ಇರುವವರು. ಕಾರಿನಲ್ಲಿ ಸುಮಾರು ₹43,500 ಮೌಲ್ಯದ ಮದ್ಯ ಪತ್ತೆಯಾಗಿದೆ.

ಬರ್ಗಿಯ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ರಸ್ತೆಯಲ್ಲಿ ಕಾರು ಕೆಟ್ಟು ನಿಂತಿತ್ತು. ಅದರಲ್ಲಿ ಮದ್ಯದ ಬಾಟಲಿಗಳು ಇರುವುದನ್ನು ಗಮನಿಸಿದ ಯುವಕರು, ಕಾರಿನ ಬಳಿ ಸೇರಿ, ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದರು. ಸ್ಥಳಕ್ಕೆ ಬಂದ ಗೋಕರ್ಣ ಪೊಲೀಸರು ಪರಿಶೀಲಿಸಿದಾಗ ವಿವಿಧ ಬ್ರ್ಯಾಂಡ್‌ಗಳ ಮದ್ಯದ ಬಾಟಲಿಗಳನ್ನು ತುಂಬಿರುವುದು ಕಂಡುಬಂತು.

ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಮದ್ಯವನ್ನು ಎಲ್ಲಿಂದ, ಎಲ್ಲಿಗೆ ಸಾಗಿಸಲಾಗುತ್ತಿತ್ತು ಎಂಬ ಬಗ್ಗೆ ತನಿಖೆ ಕೈಗೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.