ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬಿಜೆಪಿಯವರದ್ದು ಸುಳ್ಳು ಭರವಸೆ: ಅಂಜಲಿ ನಿಂಬಾಳ್ಕರ್

Published 8 ಏಪ್ರಿಲ್ 2024, 5:20 IST
Last Updated 8 ಏಪ್ರಿಲ್ 2024, 5:20 IST
ಅಕ್ಷರ ಗಾತ್ರ

ಜೊಯಿಡಾ: ‘ಜೀರೋ ಬ್ಯಾಂಕ್ ಖಾತೆಗಳನ್ನು ಮಾಡಿಸಿ ಪ್ರತಿಯೋಬ್ಬರಿಗೂ ₹ 15 ಲಕ್ಷ ರೂಪಾಯಿ ಹಾಕುತ್ತೇವೆ ಎಂದು 2014 ರಿಂದ ಬಿಜೆಪಿಯವರು ಹೇಳುತ್ತಿದ್ದಾರೆ. ಯಾವುದೇ ವ್ಯಕ್ತಿಗೆ ಅಥವಾ ಬಿಜೆಪಿ ಕಾರ್ಯಕರ್ತರಿಗೆ ಹಣ ಬಂದಿದ್ದರೆ ಹೇಳಲಿ ನಾವೆಲ್ಲರೂ ರಾಜೀನಾಮೆ ಕೊಡುತ್ತೇವೆ’ ಎಂದು ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ ಸವಾಲೆಸೆದರು.

ಜೊಯಿಡಾದ ಗಣೇಶಗುಡಿಯಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಉತ್ತರಕನ್ನಡ ಲೋಕಸಭಾ ಚುನಾವಣಾ ಪೂರ್ವಸಿದ್ಧತಾ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ‘ಕಾಂಗ್ರೆಸ್ ಬಿಜೆಪಿಗರಂತೆ ಸುಳ್ಳು ಹೇಳುವುದಿಲ್ಲ. ಯಾವ ಪಕ್ಷ, ಜಾತಿ ಭೇದ ನೋಡದೇ ಐದೂ ಗ್ಯಾರಂಟಿಯನ್ನು ಮುಟ್ಟಿಸಿದ್ದೇವೆ. ನುಡಿದಂತೆ ನಡೆದ ಪಕ್ಷವೆಂದರೆ ಅದು ಕಾಂಗ್ರೆಸ್’ ಎಂದರು‌.

‘ಸಿಲಿಂಡರ್ ₹ 400 ಇದ್ದಾಗ ಬಿಜೆಪಿಯ ಸ್ಮೃತಿ ಇರಾನಿ ಸಿಲಿಂಡರ್ ಹಿಡಿದು ರಸ್ತೆಗೆ ಇಳಿಯುತ್ತಿದ್ದರು. ಈಗ ಸಾವಿರ ದಾಟಿದೆ, ಆದರೆ ಅವರೆಲ್ಲ ಮೌನವಾಗಿದ್ದಾರೆ. ಹೀಗಾಗಿ ನಾವು ಮಾತನಾಡಬೇಕಿದೆ. ಅದಕ್ಕಾಗಿ ಗ್ಯಾರಂಟಿ ಯೋಜನೆಗಳ ಬಗ್ಗೆ ಜನರಿಗೆ ಮಾಹಿತಿ ತಿಳಿಸಿ ಲೋಕಸಭೆಯಲ್ಲಿ ಕಾಂಗ್ರೆಸ್ ಗೆಲ್ಲಿಸಬೇಕಿದೆ’ ಎಂದರು.

ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರೂ, ಶಾಸಕರೂ ಆದ ಆರ್.ವಿ. ದೇಶಪಾಂಡೆ ಮಾತನಾಡಿ, ‘ಜೊಯಿಡಾದಲ್ಲಿ ಕುಣಬಿ ಸಮಾಜದವರ ಸಂಖ್ಯೆ ಹೆಚ್ಚಿದೆ. ಗೋವಾ ಕುಣಬಿಗಳು ಪರಶಿಷ್ಟ ಪಂಗಡದಲ್ಲಿದ್ದಾರೆ. ಜೊಯಿಡಾದ ಕುಣಬಿಗಳೂ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಎಲ್ಲಾ ಕ್ಷೇತ್ರದಿಂದಲೂ ಹಿಂದುಳಿದಿದ್ದಾರೆ. ಹೀಗಾಗಿ ಇಲ್ಲಿಯ ಕುಣಬಿಗಳನ್ನೂ ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕಂಬ ಪ್ರಯತ್ನ ನಡೆದಿವೆ. ಆದರೆ ಈ ಪ್ರಕ್ರಿಯೆ ಅಂತಿಮ ಹಂತದಲ್ಲಿ ಕೇಂದ್ರ ಸರ್ಕಾರದಲ್ಲಿದೆ. ಕಾಂಗ್ರೆಸ್ ಬಡವರ, ಕೂಲಿಕಾರರ ಪಕ್ಷ. ಕುಣಬಿಗಳ ಅಭ್ಯುದಯಕ್ಕಾಗಿ ಲೋಕಸಭೆಗೆ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಬೇಕಿದೆ’ ಎಂದರು.

ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಮಾತನಾಡಿ, ‘ಬಿಜೆಪಿಗರು 30 ವರ್ಷಗಳಿಂದ ಸುಳ್ಳು ಹೇಳುತ್ತ, ಭ್ರಷ್ಟಾಚಾರ ಮಾಡುತ್ತ ಅಧಿಕಾರ ಮಾಡಿದರು. ಅವರ ಸುಳ್ಳು ಈಗ ಜನರಿಗೆ ಗೊತ್ತಾಗಿದೆ. ಸುಳ್ಳು ಬಿಟ್ಟರೆ ಅವರು ಬೇರೇನೂ ಮಾಡಿಲ್ಲ. ಬಿಜೆಪಿಯಿಂದ ಸಾಮಾನ್ಯ ಜನರಿಗೆ ಒಂದೇ ಒಂದು ಪ್ರಯೋಜನಕಾರಿ ಕೆಲಸ ಆಗಿಲ್ಲ. ಕಾಂಗ್ರೆಸ್ ನುಡಿದಂತೆ ನಡೆದಿದೆ. ಗ್ಯಾರಂಟಿಯನ್ನು ಜನರಿಗೆ ತಲುಪಿಸಿದೆ. ಬಿಜೆಪಿಗರು ಚುನಾವಣೆಗಾಗಿ ಮತ್ತೆ ಸುಳ್ಳು ಹೇಳಿಕೊಂಡು ಬರುತ್ತಾರೆ. ಜನ ಅವರನ್ನು ನಂಬಬಾರದು‌. ನಾವೆಲ್ಲರೂ ಸೇರಿ ಈ ಬಾರಿ ಡಾ.ಅಂಜಲಿ ನಿಂಬಾಳ್ಕರ್ ಅವರನ್ನ ಸಂಸತ್‌ಗೆ ಕಳುಹಿಸೋಣ. ಅರಣ್ಯ ಅತಿಕ್ರಮಣಕ್ಕೆ ಸಂಬಂಧಿಸಿ ಕುಟುಂಬಗಳಿಗೆ ಹಕ್ಕು ಪತ್ರ ವಿತರಿಸಲು ಸಂಸತ್ತಿನಲ್ಲಿ ಅಗತ್ಯ ತಿದ್ದುಪಡಿಗೆ ಅವರು ಶ್ರಮಿಸಲಿದ್ದಾರೆ. ಅರಣ್ಯ ಅತಿಕ್ರಮಣ ಸಕ್ರಮಾತಿ ಕೂಡ ನಮ್ಮ ಮತ್ತೊಂದು ಗ್ಯಾರಂಟಿ’ ಎಂದು ಘೋಷಿಸಿದರು‌.

ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಸಾಯಿ ಗಾಂವ್ಕರ್, ‘ನಮ್ಮ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ ಹೋರಾಟದ ಸಮುದಾಯದಿಂದ ಬಂದವರು. ಕಾಂಗ್ರೆಸ್‌ನ ಅಭ್ಯರ್ಥಿಯ ಗೆಲುವಿಗಾಗಿ ಎಲ್ಲರೂ ಶ್ರಮಿಸಬೇಕು’ ಎಂದು ಕರೆ ನೀಡಿದರು.

ಬ್ಲಾಕ್ ಮಹಿಳಾ ಕಾಂಗ್ರೆಸ್‌ನಿಂದ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ ಅವರಿಗೆ ಅರಿಸಿಣ- ಕುಂಕುಮ ನೀಡಿ, ಬಳೆ ತೊಡಿಸಿ ಉಡಿ ತುಂಬಲಾಯಿತು. ಬ್ಲಾಕ್ ಕಾಂಗ್ರೆಸ್‌ನಿಂದ ವೇದಿಕೆಯಲ್ಲಿ ಉಪಸ್ಥಿತರಿದ್ದ ಗಣ್ಯರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದ ಪೂರ್ವ ಅವೇಡಾ ಬಸ್ ತಂಗುದಾಣದ ಬಳಿಯ ಶಿವಾಜಿ ಮೂರ್ತಿಗೆ ಗಣ್ಯರೆಲ್ಲರೂ ಮಾಲಾರ್ಪಣೆ ಮಾಡಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿನಯ್ ದೇಸಾಯಿ, ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಘಟಕದ ಅಧ್ಯಕ್ಷ ಸತೀಶ್ ನಾಯ್ಕ, ಕಿಸಾನ್ ಮೋರ್ಚಾ ಅಧ್ಯಕ್ಷ ರವಿ ರೇಡ್ಕರ್, ರಮೇಶ್ ನಾಯ್ಕ, ಸಂಜಯ್ ಹಣಬರ, ಸದಾನಂದ ದಬ್ಗಾರ ಇದ್ದರು.

ಜೊಯಿಡಾ ತಾಲ್ಲೂಕಿನ ಗಣೇಶಗುಡಿಯಲ್ಲಿ ಭಾನುವಾರ ನಡೆದ ಕಾರ್ಯರ್ತರ ಸಭೆಯಲ್ಲಿ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್ ಮಾತನಾಡಿದರು
ಜೊಯಿಡಾ ತಾಲ್ಲೂಕಿನ ಗಣೇಶಗುಡಿಯಲ್ಲಿ ಭಾನುವಾರ ನಡೆದ ಕಾರ್ಯರ್ತರ ಸಭೆಯಲ್ಲಿ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್ ಮಾತನಾಡಿದರು
ಜೊಯಿಡಾ ತಾಲ್ಲೂಕಿನ ಗಣೇಶಗುಡಿಯಲ್ಲಿ ಭಾನುವಾರ ನಡೆದ ಕಾರ್ಯರ್ತರ ಸಭೆಯಲ್ಲಿ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್ ಮಾತನಾಡಿದರು
ಜೊಯಿಡಾ ತಾಲ್ಲೂಕಿನ ಗಣೇಶಗುಡಿಯಲ್ಲಿ ಭಾನುವಾರ ನಡೆದ ಕಾರ್ಯರ್ತರ ಸಭೆಯಲ್ಲಿ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್ ಮಾತನಾಡಿದರು
ಜೊಯಿಡಾ ತಾಲ್ಲೂಕಿನ ಗಣೇಶಗುಡಿಯಲ್ಲಿ ಭಾನುವಾರ ನಡೆದ ಕಾರ್ಯರ್ತರ ಸಭೆಯಲ್ಲಿ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್ ಪಾಲ್ಗೊಂಡರು
ಜೊಯಿಡಾ ತಾಲ್ಲೂಕಿನ ಗಣೇಶಗುಡಿಯಲ್ಲಿ ಭಾನುವಾರ ನಡೆದ ಕಾರ್ಯರ್ತರ ಸಭೆಯಲ್ಲಿ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್ ಪಾಲ್ಗೊಂಡರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT