ಕಾರವಾರ: ಜಿಲ್ಲೆಯ 10 ಉಪ ನೋಂದಣಾಧಿಕಾರಿ ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳ ತಂಡವು ಬುಧವಾರ ದಿಢೀರ್ ದಾಳಿ ನಡೆಸಿದೆ.

ಕಾರವಾರ, ಉಡುಪಿ ಡಿಎಸ್ಪಿಗಳ ನೇತೃತ್ವದಲ್ಲಿ ಪ್ರತ್ಯೇಕ ತಂಡ ರಚಿಸಿಕೊಂಡು ದಾಖಲೆಗಳ ಪರಿಶೀಲನೆ ನಡೆಸುವ ಕೆಲಸ ನಡೆಯುತ್ತಿದೆ.

ಉಪ ನೋಂದಣಾಧಿಕಾರಿ ಕಚೇರಿಗೆ ಬಂದಿರುವ ಸಾರ್ವಜನಿಕರ ವಿಚಾರಣೆ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ಸರ್ಕಾರ ನಿಗದಿಪಡಿಸಿದ ಶುಲ್ಕ ಮೀರಿ ಹಣ ಪಡೆಯಲಾಗುತ್ತಿದೆಯೇ ಎಂದು ಪ್ರಶ್ನಿಸಿದರು.

'ಉಪ ನೋಂದಣಾಧಿಕಾರಿಗಳ ಕಚೇರಿಯಲ್ಲಿ ಸಾರ್ವಜನಿಕರ ಕೆಲಸಕ್ಕೆ ಲಂಚ ಪಡೆಯುತ್ತಿರುವ ದೂರು ಹೆಚ್ಚಿವೆ. ಕೆಲಸ ಮಾಡಿಕೊಡಲು ವಿಳಂಬ ಮಾಡುತ್ತಿರುವ ದೂರುಗಳಿವೆ. ಇವೆಲ್ಲವುಗಳ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ' ಎಂದು ಲೋಕಾಯುಕ್ತ ಎಸ್ಪಿ ಕುಮಾರಚಂದ್ರ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.