ಶಿರಸಿ: ತಾಲ್ಲೂಕಿನ ಬಿಸಲಕೊಪ್ಪ ಬಳಿ ಒಣಹುಲ್ಲು ತುಂಬಿದ್ದ ಲಾರಿಗೆ ವಿದ್ಯುತ್ ತಂತಿತಾಗಿ, ಬೆಂಕಿ ಹೊತ್ತಿಕೊಂಡು ಸಂಪೂರ್ಣ ಭಸ್ಮವಾದ ಘಟನೆ ಗುರುವಾರ ನಡೆದಿದೆ.
ದಾಸನಕೊಪ್ಪದ ರಂಗಾಪುರದಿಂದ ಒಣಹುಲ್ಲು ತುಂಬಿಕೊಂಡು ಬರುತ್ತಿದ್ದ ಲಾರಿಗೆ ಮೇಲಿನ ಬಿಸಲಕೊಪ್ಪ ಸಮೀಪದಲ್ಲಿ ವಿದ್ಯುತ್ ತಂತಿ ತಾಗಿ ಬೆಂಕಿ ಹೊತ್ತಿಕೊಂಡಿತ್ತು. ಕ್ಷಣಾರ್ಧದಲ್ಲಿ ಪೂರ್ತಿ ಲಾರಿಗೆ ಆವರಿಸಿದ ಬೆಂಕಿಗೆ ಲಕ್ಷಾಂತರ ಮೌಲ್ಯದ ಹುಲ್ಲು ಹಾಗು ಲಾರಿ ಸಿಲುಕಿ ಸಂಪೂರ್ಣ ಸುಟ್ಟು ಕರಕಲಾಗಿದೆ. ಬೆಂಕಿ ನಂದಿಸಲು ಸಾರ್ವಜನಿಕರು, ಗ್ರಾಮಸ್ಥರು ಹರಸಾಹಸ ಪಟ್ಟಿದ್ದು, ಲಾರಿ ಚಾಲಕ ಹಾಗೂ ಇತರ ಸಹಾಯಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಶಿರಸಿ ಗ್ರಾಮೀಣ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ವಿದ್ಯುತ್ ತಂತಿಗಳು ಜೋತು ಬಿದ್ದಿರುವುದೇ ಈ ಘಟನೆಗೆ ಕಾರಣ ಎಂಬ ಮಾತುಗಳು ಕೇಳಿಬರುತ್ತಿವೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.