ಭಾನುವಾರ, 28 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿವರಾತ್ರಿ ವಿಶೇಷ | ಗೋಕರ್ಣದಲ್ಲಿ ಆತ್ಮಲಿಂಗ ಪೂಜೆಗೈದು ಪಾವನರಾದ ಶಿವ ಭಕ್ತರು

Last Updated 18 ಫೆಬ್ರವರಿ 2023, 5:32 IST
ಅಕ್ಷರ ಗಾತ್ರ

ಗೋಕರ್ಣ: ಶಿವರಾತ್ರಿ ಅಂಗವಾಗಿ ಪುರಾಣ ಪ್ರಸಿದ್ಧ ಕ್ಷೇತ್ರ ಗೋಕರ್ಣದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಭಕ್ತರು ಬಹಳ ಉತ್ಸಾಹದಲ್ಲಿ ಪೂಜೆಯಲ್ಲಿ ಭಾಗವಹಿಸಿ ಈಶ್ವರನ ಕೃಪೆಗೆ ಪಾತ್ರರಾಗಿದ್ದಾರೆ.

ಸಮುದ್ರ, ಕೋಟಿತೀರ್ಥದಲ್ಲಿ ಸ್ನಾನ ಮಾಡಿ, ಮಧ್ಯರಾತ್ರಿಯಿಂದಲೇ ಮಹಾಗಣಪತಿ ಮತ್ತು ಮಹಾಬಲೇಶ್ವರನ ಪೂಜೆಗಾಗಿ ಸರತಿ ಸಾಲಿನಲ್ಲಿ ಭಕ್ತರು ನಿಂತು ಬೆಳಗಿನ ಜಾವ ಪೂಜೆ ಅರ್ಪಿಸಿ ಧನ್ಯತಾಭಾವಕ್ಕೆ ಒಳಗಾದರು.

ಸ್ಥಳೀಯ ಸುತ್ತ-ಮುತ್ತಲಿನ ಹಳ್ಳಿಯ ಜನರು ಬೆಳಗಿನ ಸಮಯದಲ್ಲಿ ಆತ್ಮಲಿಂಗದ ದರ್ಶನ ಪಡೆದು ಪೂಜೆ ಸಲ್ಲಿಸಿದರು. ಕೋವಿಡ್ ನಿಯಮ ಇಲ್ಲದ ಕಾರಣ ಮಹಾರಾಷ್ಟ್ರ ಮತ್ತು ಗೋವಾದಿಂದ ಹೆಚ್ಚಿನ ಭಕ್ತರು ಬಂದಿದ್ದರು. ಅನೇಕ ಶಿವಭಕ್ತರು ಸಮುದ್ರ ತೀರದಲ್ಲಿ ಮರಳಿನ ಶಿವಲಿಂಗ ಮಾಡಿ ಪೂಜೆ ಸಲ್ಲಿಸಿದರು.

ಶಿವರಾತ್ರಿ ವಿಶೇಷ | ಗೋಕರ್ಣದಲ್ಲಿ ಆತ್ಮಲಿಂಗ ಪೂಜೆಗೈದು ಪಾವನರಾದ ಶಿವ ಭಕ್ತರು

ಸ್ಥಳೀಯ ಗ್ರಾಮ ಪಂಚಾಯ್ತಿ ಜಾತ್ರೆ ವ್ಯವಸ್ಥಿತ ರೀತಿಯಲ್ಲಿ ನಡೆಯುವಂತೆ ಸಕಲ ಏರ್ಪಾಡು ಮಾಡಿದೆ. ಕೋಟಿತೀರ್ಥ ಮತ್ತು ಸಮುದ್ರದಲ್ಲಿ ಪ್ರವಾಸಿಗರು ಎಚ್ಚರಿಕೆ ವಹಿಸುವಂತೆ ಫಲಕ ಅಳವಡಿಸಲಾಗಿದೆ. ಪೊಲೀಸರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದು ಸೂಕ್ತ ಬಂದೋಬಸ್ತ್ ಏರ್ಪಡಿಸಿದ್ದಾರೆ. ಸಮುದ್ರ ತೀರದಲ್ಲಿ ಹೆಚ್ಚಿನ ನಿಗಾ ವಹಿಸಲಾಗಿದೆ.

ಶಿವ ಭಕ್ತರಿಗೆ ಮಜ್ಜಿಗೆ, ತಂಪು ಪಾನೀಯ ವಿತರಣೆ: ಸ್ಥಳೀಯ ಲಯನ್ಸ್ ಕ್ಲಬ್ ಘಟಕ ಜಾತ್ರೆಗೆ ಬಂದ ಭಕ್ತರಿಗೆ ಗಣಪತಿ ದೇವಸ್ಥಾನದ ಹತ್ತಿರ ಮಜ್ಜಿಗೆ ವಿತರಣೆ ಮಾಡಿದರು. ರೋಟರಿ ಕ್ಲಬ್ ಗೋಕರ್ಣ ಘಟಕದ ವತಿಯಿಂದ ಭಕ್ತರಿಗೆ ಕೋಕಂ ವಿತರಿಸಲಾಯಿತು. ಸರತಿ ಸಾಲಿನಲ್ಲಿ ನಿಂತು ಬಳಲಿದ ಸಾವಿರಾರು ಜನರು ತಂಪು ಪಾನೀಯ ಕುಡಿದು ಮನ ತಣಿಸಿಕೊಂಡರು.

ಶಿವರಾತ್ರಿ ವಿಶೇಷ | ಗೋಕರ್ಣದಲ್ಲಿ ಆತ್ಮಲಿಂಗ ಪೂಜೆಗೈದು ಪಾವನರಾದ ಶಿವ ಭಕ್ತರು

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT