ಗುರುವಾರ, 10 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಬಡ ಮಕ್ಕಳ ಪ್ರತಿಭೆಗೆ ವೇದಿಕೆ ಕಲ್ಪಿಸಿ: ಸಚಿವ ವೈದ್ಯ

Published : 1 ಅಕ್ಟೋಬರ್ 2024, 14:15 IST
Last Updated : 1 ಅಕ್ಟೋಬರ್ 2024, 14:15 IST
ಫಾಲೋ ಮಾಡಿ
Comments

ಕಾರವಾರ: ‘ಉಳ್ಳವರು ತಮ್ಮ ಮಕ್ಕಳಿಗೆ ಉತ್ತಮ ಸೌಕರ್ಯ, ತರಬೇತಿ ನೀಡಿ ಸೂಕ್ತ ವೇದಿಕೆಯನ್ನು ಕಲ್ಪಿಸಿಕೊಡುತ್ತಾರೆ. ಬಡ ಮಕ್ಕಳಲ್ಲಿ ಹುದುಗಿರುವ ಪ್ರತಿಭೆಗೆ ಸೂಕ್ತ ವೇದಿಕೆಯನ್ನು ಕಲ್ಪಿಸುವ ಕೆಲಸ ಶಿಕ್ಷಕರು ಮಾಡಬೇಕು’ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಹೇಳಿದರು.

ಇಲ್ಲಿನ ಅಜ್ವಿ ಓಶನ್ ಸಭಾಂಗಣದಲ್ಲಿ ಮಂಗಳವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಹಮ್ಮಿಕೊಂಡಿದ್ದ ಮಕ್ಕಳ ಹಬ್ಬ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

‘ಮಕ್ಕಳಲ್ಲಿ ಅಡಗಿರುವ ಸುಪ್ತ ಪ್ರತಿಭೆ ಗುರುತಿಸಿ, ಸೂಕ್ತ ವೇದಿಕೆಯನ್ನು ಕಲ್ಪಿಸುವ ಮೂಲಕ ಮಕ್ಕಳಲ್ಲಿರುವ ಕೌಶಲ್ಯಗಳನ್ನು ಅನಾವರಣ ಮಾಡುವಲ್ಲಿ ಶಿಕ್ಷಕರ ಪಾತ್ರ ಮುಖ್ಯವಾಗಿದೆ. ಕಲೆ, ಸಂಸ್ಕೃತಿಯನ್ನು ಉಳಿಸಲು ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ’ ಎಂದರು.

ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ, ‘ಶಾಲೆಗಳಲ್ಲಿ ಶಿಕ್ಷಣದ ಜತೆಗೆ ಸಮಾಜದಲ್ಲಿ ಸಂಭವಿಸುವ ಸಮಸ್ಯೆಗಳನ್ನು ಯಾವ ರೀತಿ ಎದುರಿಸಿ ನಿಲ್ಲಬೇಕು ಎಂಬುದರ ಬಗ್ಗೆ ತರಬೇತಿ ನೀಡಬೇಕು. ಪುಸ್ತಕಗಳನ್ನು ಓದುವ ಹವ್ಯಾಸವನ್ನು ರೂಢಿಸಬೇಕು’ ಎಂದರು.

ಪ್ರಾಥಮಿಕ ಶಾಲೆಗಳ ವಿದ್ಯಾರ್ಥಿಗಳಿಗೆ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳನ್ನು ನಡೆಸಲಾಯಿತು.

ಗ್ಯಾರಂಟಿ ಯೋಜನೆಗಳ ಉಪಾಧ್ಯಕ್ಷ ಎಸ್.ಆರ್.ಪಾಟೀಲ್, ಜಿಲ್ಲಾ ಪಂಚಾಯಿತಿ ಸಿಇಒ ಈಶ್ವರ ಕಾಂದೂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ವಿರೂಪಾಕ್ಷಗೌಡ ಪಾಟೀಲ್, ಇತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT