ಹೊನ್ನಾವರ: ಹೊಸದಾಗಿ ರಚನೆಗೊಂಡು ಇದೇ ಮೊದಲ ಬಾರಿಗೆ ಚುನಾವಣೆ ನಡೆದ ಮಂಕಿ ಪಟ್ಟಣ ಪಂಚಾಯಿತಿಯಲ್ಲಿ ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿಯಲು ಅವಕಾಶ ಪಡೆದುಕೊಂಡಿದೆ.

ಪಟ್ಟಣ ಪಂಚಾಯಿತಿಯ 20 ವಾರ್ಡುಗಳಿಗೆ ನಡೆದ ಚುನಾವಣೆಯಲ್ಲಿ 12 ಸ್ಥಾನ ಗಳಿಸುವ ಮೂಲಕ ಬಿಜೆಪಿ ಸ್ಪಷ್ಟ ಬಹುಮತ ಗಳಿಸಿದೆ.

20 ಸ್ಥಾನಗಳ ಪೈಕಿ 2 ಸ್ಥಾನಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಅವಿರೋಧ ಆಯ್ಕೆಯಾಗಿದ್ದರು. ಮತದಾನ ನಡೆದ 18 ಸ್ಥಾನಗಳಲ್ಲಿ ಕೇವಲ 6 ಕ್ಷೇತ್ರ ಗೆಲ್ಲುವ ಮೂಲಕ ಒಟ್ಟು 8 ಸ್ಥಾನ ಪಡೆದು ಎರಡನೇ ಸ್ಥಾನಕ್ಕೆ ತೃಪ್ತಿಪಡಬೇಕಾಗಿದೆ.

ಬಿಜೆಪಿ ಬಹುಮತ ಪಡೆಯುವುದರೊಂದಿಗೆ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ತಮ್ಮದೇ ಕ್ಷೇತ್ರದಲ್ಲಿ ಹಿನ್ನಡೆ ಅನುಭವಿಸಿದ್ದಾರೆ ಎಂದು ವಿಶ್ಲೇಷಿಸಲಾಗುತ್ತಿದೆ.

2020ರ ನವೆಂಬರ್ನಲ್ಲಿ ಮಂಕಿ ಗ್ರಾಮ ಪಂಚಾಯಿತಿಯನ್ನು ಪಟ್ಟಣ ಪಂಚಾಯಿತಿ ಮೇಲ್ದರ್ಜೆಗೆ ಏರಿಸಲಾಗಿತ್ತು. ಐದು ವರ್ಷಗಳ ಬಳಿಕ ಚುನಾವಣೆ ನಡೆಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.