ಕಾರವಾರ: ‘ರೋಗಿಗಳ ಚಿಕಿತ್ಸೆಗೆ ಸರ್ಕಾರಿ ವೈದ್ಯಕೀಯ ಕಾಲೇಜಿನ ಆಸ್ಪತ್ರೆಯಲ್ಲಿ ಸೌಕರ್ಯಗಳಿದ್ದರೂ ಖಾಸಗಿ ಆಸ್ಪತ್ರೆಗೆ ಶಿಫಾರಸ್ಸು ಮಾಡಿದರೆ ಅಂತಹ ವೈದ್ಯರ ವಿರುದ್ಧ ಮುಲಾಜಿಲ್ಲದೆ ಶಿಸ್ತುಕ್ರಮ ಜರುಗಿಸಿ’ ಎಂದು ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಮೊಹಸೀನ್ ಸೂಚಿಸಿದರು.

ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗೆ (ಕ್ರಿಮ್ಸ್) ಸೋಮವಾರ ಭೇಟಿ ನೀಡಿ ವಿವಿಧ ವಿಭಾಗಗಳಲ್ಲಿ ಪರಿಶೀಲನೆ ನಡೆಸಿದ ಅವರು, ಬಳಿಕ ಪ್ರಗತಿ ಪರಿಶೀಲನೆ ಸಭೆ ನಡೆಸಿದರು.

‘ಆಸ್ಪತ್ರೆಗೆ ಆಗಮಿಸುವ ರೋಗಿಗಳಿಗೆ ಉತ್ತಮ ರೀತಿಯ ಆರೈಕೆ ಮತ್ತು ಚಿಕಿತ್ಸೆ ದೊರೆಯುವಂತೆ ನೋಡಿಕೊಳ್ಳಬೇಕು. ವೈದ್ಯರು, ಸಿಬ್ಬಂದಿ ಕರ್ತವ್ಯದಲ್ಲಿ ನಿರ್ಲಕ್ಷತೆ ತೋರಿದರೆ ಕಠಿಣ ಕ್ರಮ ಕೈಗೊಳ್ಳಿ. ಆಸ್ಪತ್ರೆ ಆವರಣದಲ್ಲಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಿ, ವೈದ್ಯಕೀಯ ತ್ಯಾಜ್ಯಗಳನ್ನು ಸಮರ್ಪಕ ರೀತಿಯಲ್ಲಿ ನಿಗದಿತ ಅವಧಿಯೊಳಗೆ ವಿಲೇವಾರಿ ಮಾಡಿ’ ಎಂದರು.

‘ಖರೀದಿಸಿದ ವೈದ್ಯಕೀಯ ಉಪಕರಣಗಳ ಗುಣಮಟ್ಟದಲ್ಲಿ ಯಾವುದೇ ರಾಜಿ ಮಾಡಿಕೊಳ್ಳಬಾರದು. ಚಿಕಿತ್ಸೆಗೆ ಖರೀದಿಸುವ ವೈದ್ಯಕೀಯ ಉಪಕರಣಗಳು ನಿಗಧಿತ ಮಾನದಂಡಗಳನ್ನು ಹೊಂದಿರುವ ಬಗ್ಗೆ ಪರಿಶೀಲಿಸಿ, ಅತ್ಯಾಧುನಿಕವಾದ ಮತ್ತು ಧೀರ್ಘ ಕಾಲದ ಬಳಕೆಗೆ ಯೋಗ್ಯವಾಗಬಹುದಾದ ಉಪಕರಣಗಳನ್ನು ಖರೀದಿಸುವ ಮೂಲಕ ರೋಗಿಗಳ ಉತ್ತಮ ವೈದ್ಯಕೀಯ ಸೌಲಭ್ಯಗಳು ದೊರೆಯುವಂತೆ ನೋಡಿಕೊಳ್ಳಿ’ ಎಂದರು.

ಆಸ್ಪತ್ರೆಯ ವಿವಿಧ ವಿಭಾಗಗಳಿಗೆ ಭೇಟಿ ನೀಡಿದ ಅವರು ರೋಗಿಗಳೊಂದಿಗೆ ದೊರೆಯುತ್ತಿರುವ ಚಿಕಿತ್ಸೆಯ ಗುಣಮಟ್ಟದ ಕುರಿತಂತೆ ಚರ್ಚಿಸಿದರು. ಸರಿಯಾದ ಚಿಕಿತ್ಸೆ ದೊರೆಯುತ್ತಿರುವ ಬಗ್ಗೆ ಮಾಹಿತಿ ಸಂಗ್ರಹಿಸಿದರು.

ಜಿಲ್ಲಾ ಪಂಚಾಯಿತಿ ಸಿಇಒ ಡಾ.ದಿಲೀಷ್ ಶಶಿ, ಕ್ರಿಮ್ಸ್ ನಿರ್ದೇಶಕಿ ಡಾ.ಪೂರ್ಣಿಮಾ ಆರ್.ಟಿ, ಕ್ರಿಮ್ಸ್ ಆಡಳಿತಾಧಿಕಾರಿ ಆನಂದಸಾ ಹಬೀಬ್, ವಿವಿಧ ವಿಭಾಗಗಳ ಮುಖ್ಯಸ್ಥರು ಪಾಲ್ಗೊಂಡಿದ್ದರು.

ಹೊಸ ಕಟ್ಟಡಕ್ಕೆ ಸ್ಥಳಾಂತರಗೊಳ್ಳಿ ‘ಕ್ರಿಮ್ಸ್ ಆವರಣದಲ್ಲಿ ನಿರ್ಮಾಣಗೊಂಡಿರುವ 450 ಹಾಸಿಗೆ ಸಾಮರ್ಥ್ಯದ ಹೊಸ ಕಟ್ಟಡಕ್ಕೆ ಹಳೆಯ ಜಿಲ್ಲಾಸ್ಪತ್ರೆ ಕಟ್ಟಡದಲ್ಲಿರುವ ಎಲ್ಲ ವಿಭಾಗಗಳನ್ನು ಸ್ಥಳಾಂತರಿಸಿ’ ಎಂದು ಮೊಹಮ್ಮದ್ ಮೊಹಸೀನ್ ಸೂಚಿಸಿದರು. ‘ಕೆಲವು ವಿಭಾಗಗಳು ಮಾತ್ರ ಹೊಸ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದೆ. ಎಲ್ಲ ವಿಭಾಗಗಳನ್ನು ಒಂದೆಡೆಗೆ ಸ್ಥಳಾಂತರಿಸಿದರೆ ರೋಗಿಗಳಿಗೆ ಸೇವೆ ಪಡೆಯಲು ಅನುಕೂಲವಾಗುತ್ತದೆ. ಹೊರರೋಗಿಗಳು ಮತ್ತು ಒಳರೋಗಿಗಳಿಗೆ ನೀಡುತ್ತಿರುವ ಚಿಕಿತ್ಸೆಯ ಸಂಖ್ಯೆಯಲ್ಲಿ ಹೆಚ್ಚಳವಾಗಬೇಕು. ಸಾರ್ವಜನಿಕರು ಮತ್ತು ರೋಗಿಗಳಿಂದ ದೂರುಗಳು ಬಾರದಂತೆ ಪ್ರತಿಯೊಬ್ಬರೂ ಕರ್ತವ್ಯ ನಿರ್ವಹಿಸಬೇಕು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.