ಬುಧವಾರ, 22 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಡವರಿಗೆ ಆರ್ಥಿಕ ಹೊರೆ ಹೊರೆಸಿದ ಬಿಜೆಪಿ: ಮೀನಾಕ್ಷಿ ಸುಂದರಂ

ಮಾರ್ಕ್ಸ್‌ವಾದಿ ಕಮ್ಯುನಿಸ್ಟ್ ಪಕ್ಷದ ರಾಜ್ಯ ಕಾರ್ಯದರ್ಶಿ ಮಂಡಳಿಯ ಸದಸ್ಯೆ ಮೀನಾಕ್ಷಿ ಸುಂದರಂ ಟೀಕೆ
Published 4 ಮೇ 2024, 15:45 IST
Last Updated 4 ಮೇ 2024, 15:45 IST
ಅಕ್ಷರ ಗಾತ್ರ

ದಾಂಡೇಲಿ: ಕೇಂದ್ರ ಬಿಜೆಪಿ ಸರ್ಕಾರ ಜನಸಾಮಾನ್ಯರ, ಬಡವರ ವಿರೋಧಿ ನಿಲುವು ತಳೆದಿದ್ದು, ಶ್ರೀಮಂತರ ಪರವಾದ ನಿಲುವು ಹೊಂದಿದೆ ಎಂದು ಮಾರ್ಕ್ಸ್‌ವಾದಿ ಕಮ್ಯುನಿಸ್ಟ್ ಪಕ್ಷದ ರಾಜ್ಯ ಕಾರ್ಯದರ್ಶಿ ಮಂಡಳಿಯ ಸದಸ್ಯೆ ಮೀನಾಕ್ಷಿ ಸುಂದರಂ ಹೇಳಿದರು.

ಪಕ್ಷದ ನೇತೃತ್ವದಲ್ಲಿ ದಾಂಡೇಲಿಯ ಸಿಐಟಿಯು ಸಭಾ ಭವನದಲ್ಲಿ ಶನಿವಾರ ನಡೆದ ಶ್ರಮಜೀವಿಗಳ ಸಮಾವೇಶದಲ್ಲಿ ಮಾತನಾಡಿದರು.

ಖಾಸಗೀಕರಣದ ಮೂಲಕ ದುಡಿಯುವ ವರ್ಗದ ಜನರ ಬದುಕಿನ ಮೇಲೆ ಬರೆ ಎಳೆಯುತ್ತಿದೆ. ಉಳ್ಳವರ ಸಾಲಗಳನ್ನು ಮನ್ನಾ ಮಾಡಿ ಬಡವರಿಗೆ ಆರ್ಥಿಕ ಹೊರೆ ಮಾಡುತ್ತಿದೆ ಎಂದು ದೂರಿದರು.

ಸಿಪಿಐಎಂನ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯಮನಾ ಗಾಂವಕರ, ಪ್ರಜಾಸತ್ತಾತ್ಮಕ ವಿಚಾರಗಳನ್ನು ಹೊಂದಿರುವ ರಾಜಕೀಯ ಪಕ್ಷಕ್ಕೆ ಬೆಂಬಲ ನೀಡುವ ಅಗತ್ಯವಿದೆ. ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸಲು ಹಾಗೂ ಸಂವಿಧಾನದ ಮೌಲ್ಯಗಳನ್ನು ಉಳಿಸಿಕೊಳ್ಳಲು ಈ ಬಾರಿ ಬಿಜೆಪಿಯನ್ನು ತಿರಸ್ಕರಿಸಬೇಕಿದೆ ಎಂದರು.

ಪೌರ ಕಾರ್ಮಿಕರ ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ಡಿ. ಸ್ಯಾಮಸನ್ ಮಾತನಾಡಿ, ನಮ್ಮ ಜಿಲ್ಲೆ ಹಾಗೂ ಹಳಿಯಾಳ, ದಾಂಡೇಲಿ, ಜೋಯಿಡಾ ಕ್ಷೇತ್ರದಲ್ಲಿ ಕೂಡ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ನೇರ ಹಣಾಹಣಿ ಕಂಡುಬರುತ್ತಿದೆ. ಈ ಬಾರಿ ಈ ಕ್ಷೇತ್ರದ ಮತದಾರರು ಅಭಿವೃದ್ಧಿ ಪರವಾಗಿದ್ದು, ಕೋಮುಶಕ್ತಿಗಳನ್ನು ಸೋಲಿಸಬೇಕಾಗಿದೆ ಎಂದು ಹೇಳಿದರು.

ವೆಸ್ಟ್ ಕೋಸ್ಟ್ ಪೇಪರ್ ಮಿಲ್ ಎಂಪ್ಲಾಯಿಸ್ ಯೂನಿಯನ್ ನ ಸಲಿಂ ಸೈಯದ್, ಕರ್ನಾಟಕ ಪ್ರಾಂತ ರೈತ ಸಂಘದ ಪ್ರೇಮಾನಂದ ವೇಳೆಪ, ಸಿಐಟಿಯುನ ನಾಗಪ್ಪ ನಾಯ್ಕ, ಹನುಮಂತ್ ಸಿದ್ದುಗಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT