ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿಲ್ಲೆಗೆ ಹೆಚ್ಚುವರಿ ಅನುದಾನ ತರುವಲ್ಲಿ ಶಾಸಕ ಡಾ.ಮಂತರ್ ಗೌಡ ವಿಫಲ: ಬಿಜೆಪಿ

Published 29 ನವೆಂಬರ್ 2023, 15:38 IST
Last Updated 29 ನವೆಂಬರ್ 2023, 15:38 IST
ಅಕ್ಷರ ಗಾತ್ರ

ಕುಶಾಲನಗರ: ‘ಮಾಜಿ ಶಾಸಕರ ಅವಧಿಯಲ್ಲಿ ಮಂಜೂರಾಗಿದ್ದ ₹ 7 ಕೋಟಿ ಅನುದಾನದಲ್ಲಿ ಅನುಷ್ಠಾನಗೊಳ್ಳಬೇಕಾಗಿದ್ದ ಕಾಮಗಾರಿಗಳನ್ನು ಹಾಲಿ ಶಾಸಕರು ಬದಲಾಯಿಸುತ್ತಿರುವುದು ಸರಿಯಲ್ಲ’ ಬಿಜೆಪಿ ಜಿಲ್ಲಾ ಘಟಕದ ಉಪಾಧ್ಯಕ್ಷ ವಿ.ಕೆ.ಲೋಕೇಶ್ ಅಸಮಾಧಾನ ವ್ಯಕ್ತಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮಳೆ ಮತ್ತು ಪ್ರವಾಹದಿಂದ ಹಾನಿಗೊಳಗಾದ ರಸ್ತೆಗಳು, ಸೇತುವೆಗಳು ಸರ್ಕಾರಿ ಕಟ್ಟಡಗಳ ಕಾಮಗಾರಿಗಳನ್ನು ನಡೆಸಲು ಬಿಜೆಪಿ ಸರ್ಕಾರದ ಅವಧಿಯಲ್ಲಿ ಮುಖ್ಯಮಂತ್ರಿಗಳ ಪರಿಹಾರ ನಿಧಿ ಪ್ರಕೃತಿ ವಿಕೋಪ ನಿಧಿ ಅಡಿ ಕೊಡಗು ಜಿಲ್ಲೆಗೆ ನೀಡಿದ ಅನುದಾನಗಳನ್ನು ಬೇರೆ ಕಾಮಗಾರಿಗಳಿಗೆ ಬದಲಾವಣೆ ಮಾಡಿದ ಕಾಂಗ್ರೆಸ್ ಸರ್ಕಾರದ ಕ್ರಮ ಖಂಡಿನೀಯ’ ಎಂದರು.

ಜಿಲ್ಲೆಗೆ ಹೆಚ್ಚುವರಿ ಅನುದಾನ ತರುವಲ್ಲಿ ಶಾಸಕ ಡಾ.ಮಂತರ್ ಗೌಡ ವಿಫಲರಾಗಿದ್ದಾರೆ. ಕುಶಾಲನಗರ ವ್ಯಾಪ್ತಿಯಲ್ಲಿ ಶಾಸಕರ ಕೆಲಸಗಳನ್ನು ಕೆಲವರು ಗುತ್ತಿಗೆ ತೆಗೆದುಕೊಂಡಿದ್ದು, ಶಾಸಕರು ಯಾರು ಎನ್ನುವ ಪ್ರಶ್ನೆ ಸಾಮಾನ್ಯ ನಾಗರಿಕರಲ್ಲಿ ಸೃಷ್ಟಿಯಾಗಿದೆ. ಶಾಸಕರ ಹೆಸರಿನಲ್ಲಿ ಎಲ್ಲಾ ಕೆಲಸಗಳಲ್ಲಿ ಮೂಗು ತೂರಿಸುವುದು ಕಂಡು ಬಂದಿದೆ’ ಎಂದು ಲೋಕೇಶ್ ದೂರಿದರು.

ಮಂಡಲ ಉಪಾಧ್ಯಕ್ಷ ಕೆ.ವರದ ಮಾತನಾಡಿ, ‘ಸ್ಥಳೀಯ ಕೆಲವು ಕಾಂಗ್ರೆಸ್ ನಾಯಕರು ಮಾಜಿ ಶಾಸಕರ ಬಗ್ಗೆ ಅವಹೇಳನವಾಗಿ ಮಾತನಾಡುತ್ತಿರುವುದು ಖಂಡನೀಯ. 25 ವರ್ಷಗಳಿಂದ ಕ್ಷೇತ್ರದ ಅಭಿವೃದ್ಧಿಯನ್ನು ಮಾಡಿದ ಅವರು ಕ್ಷೇತ್ರದಲ್ಲಿ ಪ್ರವಾಹ, ಪ್ರಕೃತಿ ವಿಕೋಪ, ಕೋವಿಡ್ ಸಂದರ್ಭ ಉತ್ತಮ ಕೆಲಸ ಕಾರ್ಯಗಳನ್ನು ಮಾಡಿದ್ದಾರೆ’ ಎಂದು ಹೇಳಿದರು.

ಬಿಜೆಪಿ ಜಿಲ್ಲಾ ಘಟಕದ ಕಾರ್ಯದರ್ಶಿ ಅಮೃತ್ ರಾಜ್ ಮಾತನಾಡಿ, ‘ಜನರನ್ನು ಸೋಮಾರಿ ಮಾಡುವ ನಿಟ್ಟಿನಲ್ಲಿ ಕಾಂಗ್ರೆಸ್ ಕಾರ್ಯ ಯೋಜನೆಗಳನ್ನು ರೂಪಿಸುತ್ತಿದೆ. ಇದೇ ರೀತಿ ಮುಂದುವರಿದಲ್ಲಿ ಬೀದಿಗೆ ಇಳಿದು ಹೋರಾಟ ಮಾಡುವುದಾಗಿ’ ಎಚ್ಚರಿಕೆ ನೀಡಿದರು.

ಗೋಷ್ಠಿಯಲ್ಲಿ ಮುಖಂಡರಾದ ಎಂ.ಎನ್ ಕುಮಾರಪ್ಪ, ವೈಶಾಖ, ಶಕ್ತಿ ಕೇಂದ್ರದ ಪ್ರಮುಖ ಕೆ.ಪ್ರವೀಣ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT