ಮುಂಡಗೋಡ:ಸೂಕ್ತ ದಾಖಲೆ ಇಲ್ಲದೇ ಸ್ಕೂಟಿಯಲ್ಲಿ ಸಾಗಿಸುತ್ತಿದ್ದ ₹3.39 ಲಕ್ಷ ಹಣವನ್ನು ತಾಲ್ಲೂಕಿನ ಅಗಡಿ ಚೆಕ್ ಪೋಸ್ಟ್ ನಲ್ಲಿ ಶುಕ್ರವಾರ ವಶಪಡಿಸಿಕೊಳ್ಳಲಾಗಿದೆ.
ಪಟ್ಟಣದ ನಿವಾಸಿಯೊಬ್ಬರು ಹುಬ್ಬಳ್ಳಿಯಿಂದ ಕಲಘಟಗಿ ಮಾರ್ಗವಾಗಿ ಸ್ಕೂಟಿಯಲ್ಲಿ ಬರುತ್ತಿದ್ದರು. ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ತೆರೆದಿರುವ ಅಗಡಿ ಚೆಕ್ ಪೋಸ್ಟ್ ನಲ್ಲಿ ಸ್ಕೂಟಿ ತಪಾಸಣೆ ನಡೆಸಿದಾಗ ಹಣ ಪತ್ತೆಯಾಗಿದೆ. ಜಮೀನು ವ್ಯಾಪಾರ ಮಾಡಿರುವ ಹಣ ಎಂದು ಸ್ಕೂಟಿ ಸವಾರ ವಿವರಣೆ ನೀಡಿದರೂ, ಅದಕ್ಕೆ ಸಂಬಂಧಿಸಿದ ದಾಖಲೆಗಳನ್ನು ತೋರಿಸಲು ಸಾಧ್ಯವಾಗಿಲ್ಲ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಚೆಕ್ ಪೋಸ್ಟ್ ಅಧಿಕಾರಿ, ಸಿಬ್ಬಂದಿ ಹಾಗೂ ಪೊಲೀಸರು ಹಣವನ್ನು ವಶಕ್ಕೆ ಪಡೆದು ಮುಂದಿನ ಕ್ರಮ ಕೈಗೊಂಡಿದ್ದಾರೆ
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.