ಕಾರವಾರ: ‘ಜಿಲ್ಲೆಯಲ್ಲಿ ಈ ಹಿಂದೆ ಮಂಗನ ಕಾಯಿಲೆ ಕಂಡುಬಂದಿದ್ದ ಪ್ರದೇಶಗಳಲ್ಲಿ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವ ಜೊತೆಗೆ ಜನರಿಗೆ ಈಗಿಂದಲೇ ತಿಳಿವಳಿಕೆ ನೀಡುವ ಕೆಲಸ ಆರಂಭಿಸಿ. ಈ ವಿಚಾರದಲ್ಲಿ ನಿರ್ಲಕ್ಷ ಮಾಡದಿರಿ’ ಎಂದು ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ ಸೂಚನೆ ನೀಡಿದರು.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಆರೋಗ್ಯ ಇಲಾಖೆಯ ವಿವಿಧ ಸಮಿತಿಗಳ ಸಭೆ ನಡೆಸಿದ ಅವರು, ‘ಡಿಸೆಂಬರ್ ತಿಂಗಳಿನಿಂದಲೇ ಮಂಗನ ಕಾಯಿಲೆ ಪ್ರಕರಣಗಳು ವರದಿಯಾದ ಉದಾಹರಣೆಗಳಿವೆ. ಆರಂಭಿಕ ಹಂತದಿಂದಲೇ ರೋಗ ಹರಡದಂತೆ ಕಾಯಿಲೆ ಬಾಧಿತವಾಗಿದ್ದ ಪ್ರದೇಶಗಳಲ್ಲಿ ಮುನ್ನೆಚ್ಚರಿಕೆ ವಹಿಸಿ. ರೋಗ ಹರಡುವ ಕೀಟದಿಂದ ರಕ್ಷಿಸುವ ಡೆಪಾ ತೈಲವನ್ನು ದಾಸ್ತಾನಿಟ್ಟುಕೊಳ್ಳಿ. ಅದನ್ನು ಜನರಿಗೆ ವಿತರಿಸಿ’ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

‘ಪ್ರಸಕ್ತ ವರ್ಷದ ಬೇಸಿಗೆಯಲ್ಲಿ ಜಿಲ್ಲೆಯಲ್ಲಿ 9 ಮಂಗನ ಕಾಯಿಲೆ ಪ್ರಕರಣ ಕಂಡು ಬಂದಿದ್ದು ಮೂರು ಮಂದಿ ಮೃತಪಟ್ಟಿದ್ದರು. ಈ ಬಾರಿ ಮಂಗನ ಕಾಯಿಲೆ ಬಾಧಿತ 8 ತಾಲ್ಲೂಕುಗಳಲ್ಲಿ ಮುಂಚಿತವಾಗಿ ಜಾಗೃತಿ ಆರಂಭಿಸಲಾಗುವುದು’ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ನೀರಜ್ ಬಿ.ವಿ ತಿಳಿಸಿದರು.

‘ಶಾಲೆಗಳು ಮತ್ತು ಕಾಲೇಜುಗಳ 100 ಮೀ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳ ಮಾರಾಟ, ಪ್ರದರ್ಶನ ಮತ್ತು ಸೇವನೆ ನಡೆಯದಂತೆ ಕಟುನಿಟ್ಟಿನ ಎಚ್ಚರವಹಿಸಿ. ಉಲ್ಲಂಘಿಸುವವರ ವಿರುದ್ದ ಕೋಟ್ಪಾ ಕಾಯ್ದೆಯಡಿ ಕ್ರಮ ಕೈಗೊಳ್ಳಿ. ವಿದ್ಯಾರ್ಥಿಗಳು ದುಶ್ಟಟಕ್ಕೆ ಬಲಿಯಾಗದಂತೆ ಎಚ್ಚರವಹಿಸಿ’ ಎಂದು ಜಿಲ್ಲಾಧಿಕಾರಿ ಹೇಳಿದರು.

‘ಕೋಟ್ಪಾ ಕಾಯ್ದೆ ಅಡಿಯಲ್ಲಿ ಈ ವರ್ಷ 675 ಪ್ರಕರಣ ದಾಖಲಿಸಿ ₹88,900 ದಂಡ ಸಂಗ್ರಹಿಸಲಾಗಿದೆ. ಕಾಯ್ದೆ ಉಲ್ಲಂಘಿಸುವವರ ವ್ಯಾಪಾರ ಪರವಾನಗಿ ರದ್ದುಗೊಳಿಸಲಾಗುತ್ತಿದೆ’ ಎಂದು ಜಿಲ್ಲಾ ಸರ್ವೇಕ್ಞಣಾಧಿಕಾರಿ ಡಾ.ಅರ್ಚನಾ ನಾಯಕ ಹೇಳಿದರು.

ಜಿಲ್ಲಾ ಪಂಚಾಯಿತಿ ಸಿಇಒ ಡಾ.ದಿಲೀಷ್ ಶಶಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಜಿ.ಕೃಷ್ಣಮೂರ್ತಿ, ಆರ್ಸಿಎಚ್ ಅಧಿಕಾರಿ ಡಾ.ನಟರಾಜ್, ಕ್ಷಯರೋಗ ನಿಯಂತ್ರಣಾಧಿಕಾರಿ ಡಾ.ಹರ್ಷಾ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಕ್ಯಾಪ್ಟನ್ ರಮೇಶ್ ರಾವ್ ಪಾಲ್ಗೊಂಡಿದ್ದರು.

ಕುಷ್ಠರೋಗ ಪತ್ತೆಗೆ ಅಭಿಯಾನ

‘ಕುಷ್ಠರೋಗ ಪ್ರಕರಣಗಳನ್ನು ಶೀಘ್ರವಾಗಿ ಪತ್ತೆಹಚ್ಚಲು ಮತ್ತು ಕುಷ್ಠರೋಗದಿಂದ ಉಂಟಾಗುವ ನ್ಯೂನತೆಯನ್ನು ಕಡಿಮೆ ಮಾಡಲು ಜಿಲ್ಲೆಯಾದ್ಯಂತ ನ.11 ರಿಂದ ಡಿ.9ರ ವರೆಗೆ ಕುಷ್ಠರೋಗ ಪ್ರಕರಣ ಪತ್ತೆ ಹಚ್ಚುವ ಅಭಿಯಾನದ ಸರ್ವೆ ಕಾರ್ಯ ನಡೆಸಲಾಗುವುದು’ ಎಂದು ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ.ಶಂಕರ ರಾವ್ ತಿಳಿಸಿದರು. ‘ಅಭಿಯಾನದ ಜೊತೆಗೆ ಕುಷ್ಠರೋಗ ತಡೆಗೆ ವ್ಯಾಪಕ ಪ್ರಮಾಣದಲ್ಲಿ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಿ. ವಿವಿಧ ಇಲಾಖೆಗಳ ನೆರವನ್ನೂ ಇದಕ್ಕೆ ಪಡೆದುಕೊಳ್ಳಿ’ ಎಂದು ಜಿಲ್ಲಾಧಿಕಾರಿ ಸಲಹೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.