ಮಂಗಳವಾರ, 21 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿದ್ದಾಪುರ | ನೀರಿನ ಟ್ಯಾಂಕ್‍ನಲ್ಲಿ ಮಂಗನ ಕಳೇಬರ: ಆತಂಕ

Published 1 ಮೇ 2024, 1:13 IST
Last Updated 1 ಮೇ 2024, 1:13 IST
ಅಕ್ಷರ ಗಾತ್ರ

ಸಿದ್ದಾಪುರ (ಉತ್ತರ ಕನ್ನಡ ಜಿಲ್ಲೆ): ಮಂಗನ ಕಾಯಿಲೆ ಪ್ರಕರಣಗಳಿಂದ ನಲುಗಿದ ತಾಲ್ಲೂಕಿನ ಹಲಗೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೆಣಸಿ ಗ್ರಾಮದಲ್ಲಿ ಕುಡಿಯುವ ನೀರಿನ ಟ್ಯಾಂಕ್ ಒಂದರಲ್ಲಿ ಕೊಳೆತ ಸ್ಥಿತಿಯಲ್ಲಿ ಮಂಗನ ಕಳೇಬರ ಮಂಗಳವಾರ ಪತ್ತೆಯಾಗಿದೆ. ಇದು ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ.

ಮಂಗನ ಕಳೇಬರ ಪತ್ತೆಯಾದದ್ದರಿಂದ ಸಿಟ್ಟಿಗೆದ್ದ ಗ್ರಾಮಸ್ಥರು ಗ್ರಾಮ ಪಂಚಾಯಿತಿ ಕಚೇರಿಗೆ ತೆರಳಿ ಅಧಿಕಾರಿಗಳ ನಿರ್ಲಕ್ಷ್ಯ ಖಂಡಿಸಿದರು. ಸ್ಥಳಕ್ಕೆ ಭೇಟಿ ನೀಡಿದ ಗ್ರಾಮ ಪಂಚಾಯಿತಿ ಅಧಿಕಾರಿಗಳು ನೀರಿನ ಟ್ಯಾಂಕ್‍ಗಳಿಗೆ ಮುಚ್ಚಳ ಮುಚ್ಚಿಸಿದರು.

ಹಲಗೇರಿ ಗ್ರಾಮ ಪಂಚಾಯಿತಿ ಮತ್ತು ಸುತ್ತಮುತ್ತಲಿನ ವ್ಯಾಪ್ತಿಯಲ್ಲೇ 87 ಮಂಗನ ಕಾಯಿಲೆ ಪ್ರಕರಣ ವರದಿಯಾಗಿದೆ. ಈ ಪೈಕಿ ಏಳು ಮಂದಿ ಸಾವನ್ನಪ್ಪಿದ್ದಾರೆ.

‘ಮಂಗವು ನೀರಲ್ಲಿ ಬಿದ್ದರೆ ಕೊಳೆಯಲು ಐದಾರು ದಿನ ಬೇಕು. ಮಂಗನ ಕಾಯಿಲೆ ಬರಲು ಸಾಧ್ಯವಿಲ್ಲ. ಆದರೆ ಸಣ್ಣಪುಟ್ಟ ಜ್ವರ ವಾಂತಿ ಭೇದಿ, ತುರಿಕೆ ಲಕ್ಷಣಗಳು ಕಂಡು ಬರಬಹುದು. ಗ್ರಾಮಸ್ಥರ ರಕ್ತ ಮಾದರಿ ಸಂಗ್ರಹಿಸಲಾಗಿದೆ. ಈವರೆಗೆ ಯಾರಲ್ಲೂ ರೋಗ ಲಕ್ಷಣ ಕಂಡುಬಂದಿಲ್ಲ. ಪುನಃ ಮಾದರಿ ಸಂಗ್ರಹಿಸಿ ರೋಗ ಲಕ್ಷಣ ಕಂಡುಬಂದರೆ ಸೂಕ್ತ ಚಿಕಿತ್ಸೆ ನೀಡಲು ಕ್ರಮ ಕೈಗೊಳ್ಳಲಾಗುವುದು’ ಎಂದು ತಾಲ್ಲೂಕು ವೈದ್ಯಾಧಿಕಾರಿ ಲಕ್ಷ್ಮೀಕಾಂತ ನಾಯ್ಕ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT