ಸೋಮವಾರ, 15 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾರವಾರ: ಜಿಲ್ಲೆಯಲ್ಲಿ 1,272 ಪ್ರಚಾರ ಸಾಮಗ್ರಿ ತೆರವು

ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಮಾಹಿತಿ
Published 21 ಮಾರ್ಚ್ 2024, 14:10 IST
Last Updated 21 ಮಾರ್ಚ್ 2024, 14:10 IST
ಅಕ್ಷರ ಗಾತ್ರ

ಕಾರವಾರ: ‘ಜಿಲ್ಲೆಯಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಾದ 72 ಗಂಟೆ ಅವಧಿಯಲ್ಲಿ ಸರ್ಕಾರಿ, ಸಾರ್ವಜನಿಕ ಸ್ಥಳಗಳಲ್ಲಿ ಮತ್ತು ಖಾಸಗಿ ಒಡೆತನದಲ್ಲಿರುವ ಸ್ಥಳ, ಕಟ್ಟಡಗಳ ಮೇಲೆ ಪ್ರಕಟಿಸಲಾಗಿದ್ದ ವಿವಿಧ ರೀತಿಯ ಪ್ರಚಾರ ಹಾಗೂ ಮತದಾರರ ಮೇಲೆ ಪ್ರಭಾವ ಬೀರುವಂತಹ ಸುಮಾರು 1,272 ಪ್ರಚಾರ ಸಾಮಗ್ರಿಗಳನ್ನು ತೆರವುಗೊಳಿಸಲಾಗಿದೆ’ ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ತಿಳಿಸಿದ್ದಾರೆ.

‘ಚುನಾವಣಾ ಆಯೋಗದ ನಿರ್ದೇಶನದಂತೆ ಮಾದರಿ ನೀತಿ ಸಂಹಿತೆ ಜಾರಿಯಾದ ಮರುಕ್ಷಣದಿಂದಲೇ ಜಿಲ್ಲೆಯ ಎಲ್ಲ ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮಗಳಲ್ಲಿನ ಸರ್ಕಾರಿ, ಸಾರ್ವಜನಿಕ ಮತ್ತು ಖಾಸಗಿ ಸ್ಥಳ, ಕಟ್ಟಡಗಳಲ್ಲಿ ಅಳವಡಿಸಿದ್ದ ಬ್ಯಾನರ್, ಬಂಟಿಂಗ್ಸ್, ಭಿತ್ತಿಚಿತ್ರಗಳು, ಗೋಡೆ ಬರಹಗಳನ್ನು ತೆರವುಗೊಳಿಸಲು ಕ್ರಮಕೈಗೊಳ್ಳಲಾಗಿದೆ’ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

‘251 ಗೋಡೆ ಬರಹಗಳು, 349 ಭಿತ್ತಿಚಿತ್ರಗಳು, 255 ಬ್ಯಾನರ್‌ಗಳು ಹಾಗೂ 417 ಇತರ ಪ್ರಚಾರ ವ್ಯವಸ್ಥೆಗಳನ್ನು ತೆರವು ಮಾಡಲಾಗಿದೆ. ಒಟ್ಟು 33 ತಂಡಗಳು ತೆರವು ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದವು’ ಎಂದು ತಿಳಿಸಿದ್ದಾರೆ.

‘ಜೋಯಿಡಾ ತಾಲ್ಲೂಕಿನಲ್ಲಿ 96, ದಾಂಡೇಲಿಯಲ್ಲಿ 69, ಹಳಿಯಾಳದಲ್ಲಿ 85, ಕಾರವಾರದಲ್ಲಿ 229, ಅಂಕೋಲಾದಲ್ಲಿ 81, ಕುಮಟಾದಲ್ಲಿ 120, ಹೊನ್ನಾವರದಲ್ಲಿ 192, ಭಟ್ಕಳದಲ್ಲಿ 49, ಶಿರಸಿಯಲ್ಲಿ 152, ಸಿದ್ದಾಪುರದಲ್ಲಿ 65, ಯಲ್ಲಾಪುರದಲ್ಲಿ 86 ಹಾಗೂ ಮುಂಡಗೋಡದಲ್ಲಿ 48 ಪ್ರಚಾರ ಸಾಮಗ್ರಿಗಳನ್ನು ತೆರವುಗೊಳಿಸಲಾಗಿದೆ’ ಎಂದು ವಿವರಿಸಿದ್ದಾರೆ.

‘ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರದ ಜಾಹೀರಾತುಗಳನ್ನು ನೀಡಲು ಜಿಲ್ಲಾ ಮಾಧ್ಯಮ ಮಾನ್ಯತೆ ಮತ್ತು ಮೇಲುಸ್ತುವಾರಿ ಸಮಿತಿ (ಎಂ.ಸಿ.ಎಂ.ಸಿ) ಪೂರ್ವಾನುಮತಿಯನ್ನು ಪಡೆಯುವುದು ಕಡ್ಡಾಯವಾಗಿದ್ದು, ಇದನ್ನು ಉಲ್ಲಂಘಿಸಿಸುವವರ ವಿರುದ್ಧ ಕಾಯ್ದೆ ಅನ್ವಯ ಕ್ರಮ ಕೈಗೊಳ್ಳಲಾಗುವುದು’ ಎಂದೂ ಎಚ್ಚರಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT