ಹಳಿಯಾಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಜೂನ್ 27ರಂದು ಹಳಿಯಾಳ ಕ್ಷೇತ್ರದ ಎಲ್ಲ ಗ್ರಾಮ ಪಂಚಾಯಿತಿಗಳಿಗೆ ಮುತ್ತಿಗೆ ಹಾಕಲಾಗುವುದು ಎಂದು ಮಾಜಿ ಶಾಸಕ ಸುನೀಲ್ ಹೆಗಡೆ ಹೇಳಿದರು.

ಬುಧವಾರ ಇಲ್ಲಿನ ಗಣೇಶ ಕಲ್ಯಾಣ ಮಂಟಪದಲ್ಲಿ ನಡದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ರಾಜ್ಯ ಸರ್ಕಾರದಿಂದ ಗ್ರಾಮ ಪಂಚಾಯಿತಿಗಳಿಗೆ ಅನುದಾನವಿಲ್ಲ. ಆಶ್ರಯ ಮನೆಗಳ ಮಂಜೂರಾತಿ ಇಲ್ಲ’ ಎಂದು ಆಕ್ಷೇಪಿಸಿದರು.

‘40ಕ್ಕೂ ಹೆಚ್ಚು ಗ್ರಾಮ ಪಂಚಾಯಿತಿಗಳಿಗೆ ಮುತ್ತಿಗೆ ಹಾಕಿ ಸರ್ಕಾರಕ್ಕೆ ಎಚ್ಚರಿಕೆಯ ಸಂದೇಶ ನೀಡಲಾಗುವುದು. ಸರ್ಕಾರ ಕೂಡಲೇ ತಪ್ಪುಗಳನ್ನು ಸರಿಪಡಿಸದೆ ಇದ್ದಲ್ಲಿ ಮುಂದಿನ ದಿನಗಳಲ್ಲಿ ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಹೋರಾಟ ತೀವ್ರಗೊಳಿಸಲಾಗುವುದು’ ಎಂದರು.

ಪಕ್ಷದ ತಾಲ್ಲೂಕು ಘಟಕದ ಅಧ್ಯಕ್ಷ ವಿಠ್ಠಲ ಸಿದ್ದಣ್ಣವರ, ಮುಖಂಡ ಸಂತೋಷ ಘಟಕಾಂಬಳೆ, ಬಸ್ಸಣ್ಣ ಕುರುಬಗಟ್ಟಿ, ಮೋಹನ ರೇಡೇಕರ, ತಾನಾಜಿ ಪಟ್ಟೇಕರ, ಯಲ್ಲಪ್ಪಾ ಹೆಳವರ, ರೆಹಮಾನ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.