ಶನಿವಾರ, 2 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿವಿಧ ದೇವಸ್ಥಾನಗಳಿಗೆ ಸಂಸದ ಅನಂತಕುಮಾರ ಹೆಗಡೆ ಭೇಟಿ

Published 22 ಜನವರಿ 2024, 15:12 IST
Last Updated 22 ಜನವರಿ 2024, 15:12 IST
ಅಕ್ಷರ ಗಾತ್ರ

ಭಟ್ಕಳ: ಅಯೋಧ್ಯೆಯಲ್ಲಿ ಶ್ರೀರಾಮನ ಪ್ರತಿಷ್ಠಾಪನೆ ಅಂಗವಾಗಿ ಉತ್ತರ ಕನ್ನಡ ಜಿಲ್ಲಾ ಲೋಕಸಭಾ ಸದಸ್ಯ ಅನಂತಕುಮಾರ ಹೆಗಡೆ ಸೋಮವಾರ ಭಟ್ಕಳದ ಹನುಮಂತನ ದೇಗುಲಗಳಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ಮೊದಲಿಗೆ ಶಿರಾಲಿಯ ಸಾರದಹೊಳೆಯ ಹಳೆಕೋಟೆ ಹನುಮಂತ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದ ಸಂಸದರು, ಅಲ್ಲಿಂದ ಭಟ್ಕಳಕ್ಕೆ ಆಗಮಿಸಿ ಪಟ್ಟಣದ ಸಂಶುದ್ದೀನ್ ಸರ್ಕಲ್‌ನಲ್ಲಿ ಹಾಕಲಾಗಿರುವ ರಾಮ ಮೂರ್ತಿಗೆ ಮಾಲಾರ್ಪಣೆ ಮಾಡಿದರು.

ನಂತರ ಚನ್ನಪಟ್ಟಣ ಹನುಮಂತ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿ ನಂತರ ಲಕ್ಷದೀಪೋತ್ಸವ ನಡೆಯುತ್ತಿರುವ ಚೌಥನಿಯ ಕುದ್ರೆಬೀರಪ್ಪ ಮುಖ್ಯಪ್ರಾಣ ದೇವಸ್ಥಾನಕ್ಕೆ ತೆರಳಿ ಮುಖ್ಯಪ್ರಾಣ ಹಾಗೂ ಕುದ್ರೆಬೀರಪ್ಪ ದೇವರಿಗೆ ಪೂಜೆ ಸಲ್ಲಿಸಿದರು.

ನಂತರ ಮಾತನಾಡಿದ ಅವರು, ‘500 ವರ್ಷದ ನಿರಂತರ ಹೋರಾಟದ ಫಲ ಇಂದು ಈ ದೇಶದ ಜನರಿಗೆ ಸಿಕ್ಕಿದೆ. ಅಯೋಧ್ಯೆ ಕೇವಲ ಒಬ್ಬ ವ್ಯಕ್ತಿಯಿಂದ ನಿರ್ಮಾಣವಾಗಿಲ್ಲ. ದೇಶದ ಪ್ರತಿ ಹಿಂದೂವಿನ ಕೊಡುಗೆ ಈ ಮಂದಿರಕ್ಕಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT