ಸೋಮವಾರ, 9 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ನೈತಿಕ ಹೊಣೆ ಹೊತ್ತು ಸಿ.ಎಂ ರಾಜೀನಾಮೆ ನೀಡಲಿ: ಕಾಗೇರಿ

Published 19 ಆಗಸ್ಟ್ 2024, 14:36 IST
Last Updated 19 ಆಗಸ್ಟ್ 2024, 14:36 IST
ಅಕ್ಷರ ಗಾತ್ರ

ಅಂಕೋಲಾ: ‘ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಆರೋಪ ಎದುರಿಸುತ್ತಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ಸಲ್ಲಿಸಲಿ’ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಆಗ್ರಹಿಸಿದರು.

ಪಟ್ಟಣದಲ್ಲಿ ಸೋಮವಾರ ಮಾಧ್ಯಮದವರ ಜತೆ ಮಾತನಾಡಿದ ಅವರು, ‘ಮುಖ್ಯಮಂತ್ರಿ ಅವರನ್ನು ವಿಚಾರಣೆ ನಡೆಸಲು ರಾಜ್ಯಪಾಲ ಥಾವರಚಂದ್ ಗೆಹಲೋತ್ ಅನುಮತಿ ನೀಡಿರುವುದು ಸಂವಿಧಾನಬದ್ಧವಾಗಿದೆ. ಸಂವಿಧಾನ ಬದ್ಧವಾದ ಉನ್ನತ ಹುದ್ದೆಯಲ್ಲಿರುವ ರಾಜ್ಯಪಾಲರು ತೆಗೆದುಕೊಂಡ ನಿರ್ಣಯವನ್ನು ರಾಜಕೀಯ ದೃಷ್ಟಿಕೋನದಿಂದ ವಿಶ್ಲೇಷಿಸಿರುವುದು ಕಾಂಗ್ರೆಸ್‍ನ ಅತ್ಯಂತ ಕೆಟ್ಟ ಸಂಪ್ರದಾಯ’ ಎಂದು ಟೀಕಿಸಿದರು.

‘ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರಿದರೆ ವಿಚಾರಣೆ ಸಂದರ್ಭದಲ್ಲಿ ತನಿಖೆಗೆ ಅಡ್ಡಿಯಾಗುತ್ತದೆ. ತನಿಖೆಯ ಮೇಲೆ ಆಡಳಿತದ ಒತ್ತಡ ಉಂಟಾಗಲು ಕಾರಣವಾಗಲಿದೆ. ವಾಲ್ಮೀಕಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆಯೂ ಆರೋಪ ಎದುರಿಸುತ್ತಿರುವ ಮುಖ್ಯಮಂತ್ರಿ ಕೂಡಲೆ ತಮ್ಮ ಸ್ಥಾನ ತ್ಯಜಿಸುವುದು ಸೂಕ್ತ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT