ಮಂಗಳವಾರ, 6 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿರಸಿ–ಹುಬ್ಬಳ್ಳಿ ರಸ್ತೆಯಲ್ಲಿ ಕಾರು ಅಪಘಾತ: ಯುವ ಸಹೋದರಿಬ್ಬರು ಸೇರಿ ಮೂವರು ಸಾವು

Last Updated 9 ಮಾರ್ಚ್ 2023, 15:44 IST
ಅಕ್ಷರ ಗಾತ್ರ

ಮುಂಡಗೋಡ: ತಾಲ್ಲೂಕಿನ ಪಾಳಾ ಸನಿಹದ ರಾಮಾಪುರ ಕ್ರಾಸ್‌ನಲ್ಲಿ ಬುಧವಾರ ರಾತ್ರಿ ಸಂಭವಿಸಿದ ರಸ್ತೆ ಅಪಘಾತದಲ್ಲಿ, ಪಟ್ಟಣದ ಮೂವರು ಯುವಕರು ಮೃತಪಟ್ಟಿದ್ದಾರೆ.

ಕಾರಿನಲ್ಲಿ ಒಟ್ಟು ಐದು ಮಂದಿ ಪಾಳಾ ಜಾತ್ರೆಗೆ ಹೊರಟಿದ್ದ ಸಂದರ್ಭದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದಿದೆ.

ಪಟ್ಟಣದ ಬಸವನಬೀದಿಯ ನಿವಾಸಿಗಳಾದ ಗಣೇಶ ಶಿವಾನಂದ ಗಾಣಿಗೇರ (27), ವಿರೇಶ ಶಿವಾನಂದ ಗಾಣಿಗೇರ(26) ಹಾಗೂ ಹುಬ್ಬಳ್ಳಿ ರಸ್ತೆಯ ನಿವಾಸಿ ಶಂಕರಯ್ಯ ಮಲ್ಲಯ್ಯ ಹಿರೇಮಠ(25) ಮೃತಪಟ್ಟವರು. ಕಾರಿನಲ್ಲಿದ್ದ ಗೌತಮ ಹದಳಗಿ ಹಾಗೂ ಪ್ರವೀಣ ಭಟ್ಕಳ ಗಾಯಗೊಂಡಿದ್ದು, ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.

ಗಣೇಶ, ವಿರೇಶ ಸಹೋದರರಿಬ್ಬರೂ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಮತ್ತೊಬ್ಬ ಯುವಕ ಶಂಕ್ರಯ್ಯ ಹುಬ್ಬಳ್ಳಿ ಕಿಮ್ಸ್‌ನಲ್ಲಿ ಗುರುವಾರ ಮೃತಪಟ್ಟಿದ್ದಾರೆ. ಮೂವರ ಅಂತ್ಯಕ್ರಿಯೆ ಗುರುವಾರ ನಡೆಯಿತು. ಮೃತ ಯುವಕರ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿತ್ತು. ಈ ಕುರಿತು ಪ್ರಕರಣದಾಖಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT