ಮುಂಡಗೋಡ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ದಿಲೀಷ್ ಶಶಿ ವಿವಿಧ ಇಲಾಖೆಗಳ ಕಚೇರಿಗಳಿಗೆ ಗುರುವಾರ ದಿಢೀರ್ ಭೇಟಿ ನೀಡಿ, ಕಡತಗಳನ್ನು ಪರಿಶೀಲಿಸಿದರು.

ಪಟ್ಟಣದ ಗ್ರಾಮೀಣ ಕುಡಿಯುವ ನೀರು ವಿಭಾಗದ ಕಚೇರಿಗೆ ಭೇಟಿ ನೀಡಿ, ಸಿಬ್ಬಂದಿ ಹಾಜರಾತಿ ಪುಸ್ತಕ ಹಾಗೂ ಕೆಲವು ಕಡತಗಳನ್ನು ಪರಿಶೀಲಿಸಿದರು. ತಾಲ್ಲೂಕಿನಲ್ಲಿ ನೀರಿನ ಸಮಸ್ಯೆ ಹಾಗೂ ಕೈಗೊಂಡ ಕ್ರಮಗಳ ಕುರಿತು ಎಂಜಿನಿಯರ್ ರಾಜೇಶ್ವರಿ ಕದಂ ಅವರಿಂದ ಮಾಹಿತಿ ಪಡೆದರು.

‘ಮೈನಳ್ಳಿ ಗ್ರಾಮದಲ್ಲಿ ಪ್ರತಿ ವರ್ಷ ಕುಡಿಯುವ ನೀರಿನ ಸಮಸ್ಯೆ ಎದುರಾಗುತ್ತದೆ. ತಾತ್ಕಾಲಿಕ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ. ಆದರೆ, ಅಲ್ಲಿನ ಜನರು ಶಾಶ್ವತ ಪರಿಹಾರಕ್ಕೆ ಬೇಡಿಕೆ ಇಡುತ್ತಿದ್ದಾರೆ. ಅತ್ತಿವೇರಿ ಜಲಾಶಯದಿಂದ ಹುನಗುಂದ, ನಂದಿಕಟ್ಟಾ ಮಾರ್ಗವಾಗಿ ಮೈನಳ್ಳಿವರೆಗೆ ಪೈಪ್ಲೈನ್ ಅಳವಡಿಸಿದರೆ ನೀರಿನ ಸಮಸ್ಯೆ ಬಗೆಹರಿಸಬಹುದು’ ಎಂದು ಎಂಜಿನಿಯರ್ ರಾಜೇಶ್ವರಿ ಕದಂ ಹೇಳಿದರು.

ಈ ಕುರಿತು ಯೋಜನಾ ವರದಿಯನ್ನು ಸಲ್ಲಿಸುವಂತೆ ಸೂಚಿಸಿದ ಸಿಇಒ, ಪ್ರತಿ ಇಲಾಖೆಯಲ್ಲಿ ತಾಲ್ಲೂಕಿನ ಮಾಹಿತಿವುಳ್ಳ ನಕಾಶೆ ಅಳವಡಿಸಬೇಕು ಎಂದರು. ನಂತರ ಪಂಚಾಯತ್ ರಾಜ್ ಇಲಾಖೆಗೆ ಭೇಟಿ ನೀಡಿ, ಪರಿಶೀಲಿಸಿದರು.

ಪತ್ರಕರ್ತರೊಂದಿಗೆ ಮಾತನಾಡಿದ ಡಾ.ದಿಲೀಷ್ ಶಶಿ, ‘ತಾಲ್ಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದೇನೆ. ಮೈನಳ್ಳಿ ಮತ್ತು ಸಾಲಗಾಂವ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಹಾಗೂ ಶಾಶ್ವತ ಪರಿಹಾರಕ್ಕಾಗಿ ಯೋಜನೆ ರೂಪಿಸಿ, ಸಲ್ಲಿಸುವಂತೆ ಸೂಚಿಸಿದ್ದೇನೆ’ ಎಂದರು.

ತಾಲ್ಲೂಕು ಪಂಚಾಯಿತಿ ಇಒ ಟಿ.ವೈ.ದಾಸನಕೊಪ್ಪ, ನರೇಗಾ ಸಹಾಯಕ ನಿರ್ದೇಶಕ ಸೋಮಲಿಂಗ ಛಬ್ಬಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260327-20-203956327

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.