ಮುಂಡಗೋಡ: ‘ತಾಲ್ಲೂಕು ಮಟ್ಟದ 8ನೇ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿಯಾಗಬೇಕು. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು, ಕನ್ನಡದ ರಥ ಎಳೆಯುವ ಕೆಲಸವಾಗಲಿ. ಅಕ್ಷರಜಾತ್ರೆಗೆ ಪ್ರತಿಯೊಬ್ಬರೂ ಸಹಕಾರ ನೀಡಲಿ’ ಎಂದು ಶಾಸಕ ಶಿವರಾಮ ಹೆಬ್ಬಾರ ಹೇಳಿದರು.

ಏ.23ರಂದು ಇಲ್ಲಿನ ಎಲ್ವಿಕೆ ಸಭಾಂಗಣದಲ್ಲಿ ಜರುಗುವ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆಯನ್ನು ಸೋಮವಾರ ಬಿಡುಗಡೆಗೊಳಿಸಿ ಮಾತನಾಡಿದ ಅವರು, ‘ಸಾಹಿತ್ಯ ಸಮ್ಮೇಳನ ಯುವ ಸಾಹಿತಿಗಳಿಗೆ ಸೂಕ್ತ ವೇದಿಕೆಯಾಗಿದ್ದು, ಸಮರ್ಪಕವಾಗಿ ಬಳಸಿಕೊಳ್ಳಬೇಕು’ ಎಂದು ಸೂಚಿಸಿದರು.

ಕನ್ನಡ ನಾಡು, ನುಡಿಯ ವಿಚಾರದಲ್ಲಿ ನಿರಂತರವಾಗಿ ಕೆಲಸ ಮಾಡುತ್ತಿರುವ ಕನ್ನಡಾಭಿಮಾನಿಗಳು ಹಾಗೂ ಸಾಹಿತ್ಯಾಸಕ್ತರು ಉತ್ಸಾಹದಿಂದ ಪಾಲ್ಗೊಳ್ಳಬೇಕು’ ಎಂದರು.

ಸಮ್ಮೇಳನ ಅಧ್ಯಕ್ಷ ಡಾ.ಪಿ.ಪಿ.ಛಬ್ಬಿ, ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕದ ಅಧ್ಯಕ್ಷ ವಸಂತ ಕೊಣಸಾಲಿ, ಗೌರವ ಕಾರ್ಯದರ್ಶಿ ಎಸ್.ಡಿ. ಮುಡೆಣ್ಣವರ, ಕಾರ್ಯಕಾರಿ ಸಮಿತಿ ಸದಸ್ಯರಾದ ಸುಭಾಷ್ ಡೋರಿ, ಚಿದಾನಂದ ಪಾಟೀಲ, ಸುಭಾಷ್ ವಡ್ಡರ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260414-20-1825263263

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.