ಮುಂಡಗೋಡ: ‘ಅಹಿಂಸೆಯೇ ಪರಮೋಧರ್ಮ ಎಂಬ ತತ್ವ ಪ್ರತಿಪಾದಿಸಿದ ಮಹಾವೀರರ ಸಂದೇಶವು ಮಾನವೀಯತೆಯ ಮಹತ್ವ ಸಾರುತ್ತದೆ. ಅವರು ನೀಡಿರುವ ಪಂಚ ತತ್ವಗಳು ಸರ್ವಕಾಲಕ್ಕೂ ಸಲ್ಲುತ್ತವೆ’ ಎಂದು ತಹಶೀಲ್ದಾರ್ ಶಂಕರ ಗೌಡಿ ಹೇಳಿದರು.

ತಾಲ್ಲೂಕು ಆಡಳಿತ ಹಾಗೂ ಜೈನ ಸಮುದಾಯದ ಆಶ್ರಯದಲ್ಲಿ ಪಟ್ಟಣದ ಶಿರಸಿ ರಸ್ತೆಯಲ್ಲಿನ ಜೈನ ಬಸದಿಯ ಆವರಣದಲ್ಲಿ ಸೋಮವಾರ ಜರುಗಿದ ಮಹಾವೀರ ಜಯಂತ್ಯುತ್ಸವದಲ್ಲಿ ಅವರು ಮಾತನಾಡಿದರು.

ತಾಲ್ಲೂಕು ಆಸ್ಪತ್ರೆ ಆಡಳಿತಾಧಿಕಾರಿ ಡಾ.ಸ್ವರೂಪರಾಣಿ ಪಾಟೀಲ ಮಾತನಾಡಿ, ‘ಮಹಾಪುರುಷರ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ಜಯಂತಿ ಆಚರಣೆಗೆ ಅರ್ಥ ಬರುತ್ತದೆ’ ಎಂದರು.

ಜೈನ ಬಸದಿಯಿಂದ ಶಂಭವನಾಥ ಮತ್ತು ಮಹಾವೀರರ ಚಿತ್ರಪಟದೊಂದಿಗೆ ಪಟ್ಟಣದ ಬನ್ನಿ ಮಹಾಕಾಳಿ ದೇವಸ್ಥಾನದವರೆಗೆ ಮೆರವಣಿಗೆ ನಡೆದು, ಬಸದಿಗೆ ಮರಳಿತು.

ಬಿಇಒ ಸುಮಾ ಜಿ., ಜೈನ ಸಮಾಜದ ತಾಲ್ಲೂಕು ಘಟಕದ ಅಧ್ಯಕ್ಷ ಧರಣೇಂದ್ರ ಅಂಗಡಿ, ಕನ್ನಡ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಘಟಕದ ಅಧ್ಯಕ್ಷ ವಸಂತ ಕೊಣಸಾಲಿ, ಡಾ. ಪಿ.ಪಿ.ಛಬ್ಬಿ, ಉಪತಹಶೀಲ್ದಾರ್ ಜಿ.ಬಿ. ಭಟ್, ಸಂತೋಷ ಕುಮಾರ ಎಚ್., ಅರುಣಾ ಕುತ್ತೆ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260331-20-1543913372

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.