ಮುಂಡಗೋಡ: ಶಿಥಿಲಗೊಂಡಿದ್ದ ಸಂತೆ ಮಾರುಕಟ್ಟೆಯನ್ನು ನೆಲಸಮಗೊಳಿಸಿ, ನೂತನ ಮಾರುಕಟ್ಟೆ ನಿರ್ಮಾಣಕ್ಕೆ ಚಾಲನೆ ನೀಡಿ, ಬರೋಬ್ಬರಿ ನಾಲ್ಕು ವರ್ಷಗಳು ಮುಗಿದಿವೆ. ಆದರೆ, ಈವರೆಗೂ ಕಾಮಗಾರಿ ಪೂರ್ಣಗೊಂಡಿಲ್ಲ.

‘ಅನುದಾನದ ಕೊರತೆಯಿಂದ ಕಾಮಗಾರಿ ಮುಂದುವರಿಯುತ್ತಿಲ್ಲ’ ಎಂಬುದಾಗಿ ಅಧಿಕಾರಿಗಳು ಅಸಹಾಯಕತೆ ವ್ಯಕ್ತಪಡಿಸುತ್ತಿರುವುದು ಒಂದೆಡೆಯಾದರೆ, ಇನ್ನೊಂದೆಡೆ ಕಾಮಗಾರಿ ವಿಳಂಬದಿಂದ ರಾಜ್ಯ ಹೆದ್ದಾರಿ ಬದಿಯಲ್ಲಿ ಕುಳಿತು ವ್ಯಾಪಾರ ನಡೆಸುವವರ ಸಂಖ್ಯೆ ಹೆಚ್ಚಿದೆ. ಇದು ಸಂಚಾರ ದಟ್ಟಣೆಗೆ ಎಡೆಮಾಡಿಕೊಡುತ್ತಿದೆ. ಜೊತೆಗೆ ಗ್ರಾಹಕರನ್ನೂ ಅಪಾಯಕ್ಕೆ ತಳ್ಳುತ್ತಿದೆ ಎಂಬುದು ಜನರ ದೂರು.

ಪಟ್ಟಣದಲ್ಲಿ ಪ್ರತಿ ಸೋಮವಾರ ನಡೆಯುವ ವಾರದ ಸಂತೆಯಲ್ಲಿ, ಜನರು ಅನುಭವಿಸುವ ತೊಂದರೆಯನ್ನು ಕಣ್ಣಾರೆ ಕಂಡರೂ, ಸಂಬಂಧಿಸಿದವರು ಪರ್ಯಾಯ ಕ್ರಮ ಕೈಗೊಳ್ಳುತ್ತಿಲ್ಲ ಎಂಬುದು ಜನರ ಆರೋಪ.

‘ಸಂತೆ ಮಾರುಕಟ್ಟೆಗೆ ಅನುದಾನದ ಲಭ್ಯತೆ ನೋಡಿಕೊಂಡು, ಕಾಮಗಾರಿ ಆರಂಭಿಸಬೇಕಿತ್ತು. ದೂರದೃಷ್ಟಿಯ ಕೊರತೆ ಇಲ್ಲಿ ಕಾಣುತ್ತಿದೆ. ಕಳೆದ ನಾಲ್ಕೈದು ವರ್ಷಗಳಿಂದ ಸಂತೆಗೆ ಬರುವ ಜನರು ಅನುಭವಿಸುವ ತೊಂದರೆಗೆ ಯಾರು ಹೊಣೆ ಎಂಬ ಪ್ರಶ್ನೆಯೂ ಉದ್ಭವಿಸುತ್ತದೆ. ಇದ್ದ ಮಾರುಕಟ್ಟೆಯನ್ನು ನೆಲಸಮಗೊಳಿಸಿ, ಜನರಿಗೆ ಇಕ್ಕಟ್ಟಾದ ಸ್ಥಳದಲ್ಲಿ ಸಂತೆ ಮಾಡುವಂಥ ಅನಿವಾರ್ಯತೆ ಸೃಷ್ಟಿಸಿರುವುದು ಸರಿಯಲ್ಲ’ ಎಂದು ವಕೀಲ ಗುಡ್ಡಪ್ಪ ಕಾತೂರ ಹೇಳಿದರು.

‘ಅಂದಾಜು ₹5 ಕೋಟಿ ವೆಚ್ಚದ ಸಂತೆ ಮಾರುಕಟ್ಟೆ ನಿರ್ಮಾಣಕ್ಕೆ ಕ್ರಿಯಾಯೋಜನೆ ತಯಾರಾಗಿದ್ದು, ಆರಂಭಿಕ ಹಂತದಲ್ಲಿ ಬಿಡುಗಡೆಯಾದ ಅನುದಾನದಲ್ಲಿ ಕಾಮಗಾರಿಯನ್ನು ಮಾಡಿ ಮುಗಿಸಲಾಗಿದೆ. ಇನ್ನುಳಿದ ಕಾಮಗಾರಿ ಮುಂದುವರೆಸಲು ಅನುದಾನ ಬೇಕಿದೆ’ ಎಂದು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಸಂತೋಷಕುಮಾರ ಎಚ್. ಹೇಳಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260516-20-245075061

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.