ಮುಂಡಗೋಡ: ತಾಲೂಕಿನ ನ್ಯಾಸರ್ಗಿ ಜಲಾಶಯದ ಬಲದಂಡೆ ಕಾಲುವೆ ಮೂಲಕ ಗದ್ದೆಗಳಿಗೆ ನೀರು ಹರಿಸಬೇಕು ಎಂದು ಒತ್ತಾಯಿಸಿ, ದಡಭಾಗದ ರೈತರು ಇಲ್ಲಿನ ಸಣ್ಣ ನೀರಾವರಿ ಇಲಾಖೆ ಕಚೇರಿ ಎದುರು ಮಂಗಳವಾರ ಪ್ರತಿಭಟಿಸಿದರು.

ಕಳೆದ ಕೆಲ ವರ್ಷಗಳಿಂದ ಕಾಲುವೆಯನ್ನು ಸ್ವಚ್ಛಗೊಳಿಸಿಲ್ಲ ಹಾಗೂ ಗೇಟ್ ದುರಸ್ತಿ ಮಾಡಿಲ್ಲ ಎಂದು ರೈತರು ದೂರಿದರು.

ಕಾಲುವೆ ಮೂಲಕ ನೀರು ಹರಿಸಿದರೆ, ದಡಭಾಗದ ರೈತರಿಗೆ ಅನುಕೂಲವಾಗುತ್ತದೆ. ನೀರು ಹರಿಸಿ ಎಂದು ಅಧಿಕಾರಿಗಳಿಗೆ ನಿರಂತರವಾಗಿ ಮನವಿ ಮಾಡುತ್ತ ಬಂದರೂ, ನೆಪ ಹೇಳಿ ದಿನ ದೂಡುತ್ತಿದ್ದಾರೆ. ಜಲಾಶಯದಲ್ಲಿ ನೀರಿದ್ದರೂ, ಬಲದಂಡೆ ಮೂಲಕ ನೀರು ಪಡೆಯುವ ಭಾಗ್ಯ ರೈತರಿಗೆ ಒದಗಿ ಬರುತ್ತಿಲ್ಲ. ಕೂಡಲೇ, ಕಾಲುವೆ ದುರಸ್ತಿಗೊಳಿಸಬೇಕು. ಅಧಿಕಾರಿಗಳಿಂದ ಸ್ಪಷ್ಟ ಭರವಸೆ ಸಿಗುವರೆಗೂ, ಇಲ್ಲಿಂದ ಕದಲುವುದಿಲ್ಲ ಎಂದು ಹೇಳಿ, ಕಚೇರಿ ಆವರಣದಲ್ಲಿ ಪ್ರತಿಭಟನೆ ಮುಂದುವರಿಸಿದರು.

ಸಣ್ಣ ನೀರಾವರಿ ಇಲಾಖೆ ಎಂಜಿನಿಯರ್ ಆರ್.ಎನ್.ನಾಯ್ಕ ಮಾತನಾಡಿ, ‘ಕಾಲುವೆ ದುರಸ್ತಿ ಕಾರ್ಯ ಮಾಡಿಸಬೇಕಾಗಿದೆ. ಜಲಾಶಯದ ಗೇಟ್ ತೆರೆದರೆ ಮರಳಿ ಮುಚ್ಚಲು ಬರುವುದಿಲ್ಲ. ಅದಕ್ಕಾಗಿ ಗೇಟ್ ದುರಸ್ತಿ ಮಾಡಿದ ನಂತರ ನೀರು ಬಿಡುತ್ತೇವೆ. ಜಲಾಶಯದ ಗೇಟ್ ದುರಸ್ತಿಗೆ ಅನುದಾನ ಬಿಡುಗಡೆ ಮಾಡುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಇಲ್ಲಿಯವರೆಗೂ ಅನುದಾನ ಬಂದಿಲ್ಲ. ಅನುದಾನ ಬಂದ ನಂತರ ಜಲಾಶಯದ ಗೇಟ್ ದುರಸ್ತಿ ಮಾಡಿಸಿ ನೀರು ಬಿಡುತ್ತೇವೆ’ ಎಂದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260506-20-687266405

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.