ಮುಂಡಗೋಡ: ಭೂ ಸುರಕ್ಷಾ ಯೋಜನೆಯಡಿ ಇಲ್ಲಿನ ತಹಶೀಲ್ದಾರ್ ಕಚೇರಿಯ ರೆಕಾರ್ಡ್ ರೂಮ್ ದಾಖಲೆಗಳನ್ನು ಈಗ ಸಂಪೂರ್ಣವಾಗಿ ಡಿಜಿಟಲೀಕರಣಗೊಳಿಸಲಾಗಿದೆ. ದಾಖಲೆಗಳ ಸುರಕ್ಷತೆಯನ್ನು ಖಚಿತಪಡಿಸುವುದು ಹಾಗೂ ಹಳೆಯ ಕಡತಗಳನ್ನು ಡಿಜಿಟಲ್ ರೂಪದಲ್ಲಿ ಶಾಶ್ವತವಾಗಿ ಸಂರಕ್ಷಿಸುವುದು ಯೋಜನೆಯ ಮುಖ್ಯ ಉದ್ದೇಶವಾಗಿದೆ ಎಂದು ತಹಶೀಲ್ದಾರ್ ಶಂಕರ ಗೌಡಿ ತಿಳಿಸಿದ್ದಾರೆ.

ಪೋರ್ಟಲ್ ಮೂಲಕವೇ ನೇರವಾಗಿ ದಾಖಲೆಗಳನ್ನು ವಿತರಿಸುವುದರಿಂದ, ಸಾರ್ವಜನಿಕರು ಕಚೇರಿಗಳಿಗೆ ಪದೇ ಪದೇ ಭೇಟಿ ನೀಡಿ ಸಾಲಿನಲ್ಲಿ ನಿಲ್ಲುವ ಅವಶ್ಯಕತೆಯಿಲ್ಲ. http://recordroom.karnataka.gov.in/service4 ಲಿಂಕ್ ಬಳಸಿಕೊಂಡು ತಮ್ಮ ಅಧಿಕೃತ ದಾಖಲೆಗಳನ್ನು ಪಡೆಯಬಹುದು. ತಹಶೀಲ್ದಾರ್ ಕಚೇರಿಯ ಎ.ಜೆ.ಎಸ್.ಕೆ ಕೇಂದ್ರ ಹಾಗೂ ಪಾಳಾ ಹೋಬಳಿಯ ನಾಡಕಚೇರಿಯಲ್ಲಿಯೂ ಈ ಸೌಲಭ್ಯವಿದ್ದು ಸಾರ್ವಜನಿಕರು ಸದುಪಯೋಗ ಪಡಿಸಿಕೊಳ್ಳುವಂತೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260515-20-563010947

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.