ಮುಂಡಗೋಡ: ಪಟ್ಟಣದ ನೂರಾನಿಗಲ್ಲಿ ನಿವಾಸಿ ಜಮೀರ್ ಅಹ್ಮದ್ ದರ್ಗಾವಾಲೆ (ಎನ್.ಎಂ.ಡಿ) (38) ಎಂಬಾತನನ್ನು ಇಲ್ಲಿನ ಬಸ್ ನಿಲ್ದಾಣದ ಎದುರಿನ ಹೋಟೆಲ್ವೊಂದರಲ್ಲಿ ಶುಕ್ರವಾರ ರಾತ್ರಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಕೊಲೆ ಮಾಡಲಾಗಿದೆ.

ರಾತ್ರಿ 11ಗಂಟೆಯ ಸುಮಾರಿಗೆ ಸ್ನೇಹಿತನೊಂದಿಗೆ ಹೋಟೆಲ್ಗೆ ಬಂದಿದ್ದ ಎನ್ಎಂಡಿ ಮೇಲೆ 3-4ಜನರ ತಂಡವೊಂದು ಏಕಾಏಕಿ ಹೋಟೆಲ್ಗೆ ನುಗ್ಗಿ, ಖಾರದಪುಡಿ ಎರಚಿ, ಕುತ್ತಿಗೆಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ. ದುಷ್ಕರ್ಮಿಗಳಿಂದ ತಪ್ಪಿಸಿಕೊಳ್ಳಲು ಮೃತ ಜಮೀರ ಪ್ರಯತ್ನಿಸಿದ್ದಾರೆ. ಆದರೆ, ಹೋಟೆಲ್ ನ ಅಡುಗೆ ಕೋಣೆಯಲ್ಲಿ ರಕ್ತದ ಮಡುವಿನಲ್ಲಿ ಉಸಿರು ಚೆಲ್ಲಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಒಂದೂವರೆ ವರ್ಷದ ಹಿಂದೆ ಮೃತ ಜಮೀರ ಅಹ್ಮದ ದರ್ಗಾವಾಲೆಯನ್ನು ಪಟ್ಟಣದ ಶಾಸಕರ ಮಾದರಿ ಶಾಲೆಯ ಎದುರುಗಡೆ, ಕೆಲವರು ಕಾರಿನಲ್ಲಿ ಬಂದು ಅಪಹರಣ ಮಾಡಿದ್ದರು. ನಂತರ, ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ, ಅಪಹರಣಕಾರರನ್ನು ಬಂಧಿಸಿ, ಜಮೀರ ಅಹ್ಮದ ದರ್ಗಾವಾಲೆಯನ್ನು ರಕ್ಷಿಸಿದ್ದರು.

ಕೊಲೆಯಾದ ಸುದ್ದಿ ಹರಡುತ್ತಿದ್ದಂತೆ, ಮಧ್ಯರಾತ್ರಿಯೇ ನೂರಾರು ಸಂಖ್ಯೆಯಲ್ಲಿ ಇಲ್ಲಿನ ಬಸ್ ನಿಲ್ದಾಣದ ಎದುರು ಜನರು ಜಮಾವಣೆಗೊಂಡಿದ್ದರು. ಮೃತದೇಹವನ್ನು ಹೋಟೆಲ್ನಿಂದ ತಾಲ್ಲೂಕು ಆಸ್ಪತ್ರೆಗೆ ಸಾಗಿಸುವಾಗ, ಜನಜಂಗುಳಿ ಹೆಚ್ಚಾಗಿದ್ದರಿಂದ, ಜನರನ್ನು ಚದುರಿಸಲು ಪೊಲೀಸರು ಹರಸಾಹಸಪಟ್ಟರು.

ರಾತ್ರಿಯೇ ಘಟನಾ ಸ್ಥಳಕ್ಕೆ ಶಿರಸಿ ಡಿಎಸ್ಪಿ ಗೀತಾ ಪಾಟೀಲ ಭೇಟಿ ನೀಡಿ ಪರಿಶೀಲಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್ ಶನಿವಾರ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಾರವಾರ ಕ್ರಿಮ್ಸ್ಗೆ ರವಾನಿಸಲಾಗಿದೆ.

'ಕೊಲೆ ಪ್ರಕರಣ ಬೇಧಿಸಲು ಮೂರು ತಂಡಗಳನ್ನು ರಚಿಸಲಾಗಿದೆ. ಆರೋಪಿಗಳನ್ನು ಶೀಘ್ರವೇ ಬಂಧಿಸಲಾಗುವುದು. ಕೊಲೆಗೆ ನಿಖರ ಕಾರಣ ತನಿಖೆಯಿಂದ ಗೊತ್ತಾಗಬೇಕಿದೆ. ಮೃತ ಜಮೀರ ಅಹ್ಮದ ದರ್ಗಾವಾಲೆ ಮೇಲೆ ಬೆಟ್ಟಿಂಗ್ ಪ್ರಕರಣ ಸೇರಿದಂತೆ ಒಟ್ಟು ಐದು ಪ್ರಕರಣಗಳಿವೆ' ಎಂದು ಎಸ್.ಪಿ ದೀಪನ್ ಎಂ.ಎನ್ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.