ಭಟ್ಕಳ: ಮುರುಡೇಶ್ವರ ಲಯನ್ಸ್ ಕ್ಲಬ್ ಕಳೆದ ಹಲವಾರು ವರ್ಷಗಳಿಂದ ಸಮಾಜ ಸೇವೆಯಲ್ಲಿ ನಿರಂತರವಾಗಿ ತೊಡಗಿಸಿಕೊಂಡಿದ್ದು, ಜಿಲ್ಲೆಯಲ್ಲಿಯೇ ಅತ್ಯುತ್ತಮ ಕ್ಲಬ್ ಆಗಿ ಗುರುತಿಸಿಕೊಂಡಿದೆ ಎಂದು ಲಯನ್ ಜಿಲ್ಲೆಯ ಗವರ್ನರ ಗೋವಾದ ಜೈ ಅಮೋಲ್ ನಾಯಕ್ ಹೇಳಿದರು.

ಅವರು ಇತ್ತೀಚಿಗೆ ಮುರುಡೇಶ್ವರದಲ್ಲಿ ನಡೆದ ಲಯನ್ಸ್ ಕಾರ್ಯಕ್ರಮದಲ್ಲಿ ಮಾತನಾಡಿದರು. ‘ಪರಿಸರ ಜಾಗೃತಿ, ಯುವ ಸಬಲೀಕರಣ, ಬಡತನ ನಿರ್ಮೂಲನೆ, ಮಕ್ಕಳ ಕ್ಯಾನ್ಸರ್ ನೆರವು, ಮಧುಮೇಹ ಜಾಗೃತಿ, ಕಣ್ಣಿನ ಪರೀಕ್ಷೆ ಹಾಗೂ ಶಸ್ತ್ರಚಿಕಿತ್ಸೆ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ಮುರುಡೇಶ್ವರ ಲಯನ್ಸ್ ಕ್ಲಬ್ ಮುಂಚೂಣಿಯಲ್ಲಿದೆ’ ಎಂದರು.

ತಾಲ್ಲೂಕಿನ ಶಿರಾಲಿಯ ಮೊಗೇರಕೇರಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಶಿಕ್ಷಕ ಶ್ರೀಧರ ಎಂ. ನಾಯ್ಕ ಅವರ ಶೈಕ್ಷಣಿಕ ಸಾಧನೆಗಳನ್ನು ಪರಿಗಣಿಸಿ “ವಾಜಂತ್ರಿ ಅವಾರ್ಡ” ಪ್ರದಾನ ಮಾಡಲಾಯಿತು. ಬೆಳ್ಕೆ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ರಜನಿ ಶೆಟ್ಟಿ ಅವರ ಶ್ರೇಷ್ಠ ಸೇವೆಯನ್ನು ಗುರುತಿಸಿ ಉಡುಪ ಅವಾರ್ಡ ನೀಡಿ ಗೌರವಿಸಲಾಯಿತು. ಇದೇ ಸಂದರ್ಭದಲ್ಲಿ ಕರೂರು ಸರ್ಕಾರಿ ಶಾಲೆಗೆ ಜಮಖಾನಾ, ಬೈಲೂರು ಕೆ.ಪಿ.ಎಸ್. ಶಾಲೆಗೆ ವಾಟರ್ ಫಿಲ್ಟರ್, ಕೆರೆಕಟ್ಟೆ ಶಾಲೆಯ ವಿದ್ಯಾರ್ಥಿಗಳಿಗೆ 200 ಕ್ಯಾಪ್ ಗಳನ್ನು ದೇಣಿಗೆಯಾಗಿ ನೀಡಲಾಯಿತು.

ಮುಖ್ಯಮಂತ್ರಿ ಪದಕ ವಿಜೇತ ಅರಣ್ಯಾಧಿಕಾರಿ ಪ್ರದೀಪ ನಾಯ್ಕರವರು, ನಿವೃತ್ತ ಭಾರತೀಯ ಸೈನಿಕ ಜನಾರ್ಧನ ದೇವಾಡಿಗ ಹಾಗೂ ಸ್ನೇಹ ವಿಶೇಷ ಶಾಲೆಯ ಶಿಕ್ಷಕಿ ಮಾಲತಿ ಉದ್ಯಾವರ ಅವರನ್ನು ಸನ್ಮಾನಿಸಲಾಯಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260325-20-1563815957

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.